ನ್ಯಾಯಾಲಯದಲ್ಲಿ ರಾಹುಲ್ ಗಾಂಧಿಗೆ ಮತ್ತೊಮ್ಮೆ ಹಿನ್ನಡೆ

Share

ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿಯನ್ನು ಕುರಿತು ಸೂರತ್ ಕೋರ್ಟ್ ಇಂದು ತೀರ್ಪು ಪ್ರಕಟಿಸಿ, ತಡೆಯಾಜ್ಞೆ ನೀಡಲು ನಿರಾಕರಿಸಿ ಅರ್ಜಿ ವಜಾ ಮಾಡಿದೆ.
ಏಪ್ರಿಲ್ 3 ರಂದು
ಮೋದಿ ಉಪಮನಮ ಪ್ರಕರಣದಲ್ಲಿ ಅಪರಾಧ ಸಾಬೀತಾದ ನಂತರ ಮೇಲ್ಮನವಿ ಸಲ್ಲಿಸಿದ್ದ ರಾಹುಲ್ ಗಾಂಧಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿತ್ತು.
ವಯನಾಡ್‌ ನ ಲೋಕಸಭಾ ಸಂಸದರಾದ ರಾಹುಲ್ ಗಾಂಧಿ ಅವರನ್ನು ಸೂರತ್‌ ನ ಕೆಳ ನ್ಯಾಯಾಲಯವು ಮಾರ್ಚ್ 23 ರಂದು ಸೆಕ್ಷನ್ 499 ಮತ್ತು 500 (ಮಾನನಷ್ಟ) ಅಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅನರ್ಹಗೊಳಿಸಿದೆ.


Share