ಪದವಿ ಪರೀಕ್ಷೆ ಮುಂದೂಡಿಕೆ ಇಲ್ಲ: ಸುಪ್ರೀಂಕೋರ್ಟ್ ಆದೇಶ

Share

ದೆಹಲಿ. ಪದವಿ ಪರೀಕ್ಷೆ ಮುಂದೂಡಿಕೆ ಮಾಡುವ ಹಾಗೆ ಇಲ್ಲ ಎಂದು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ. ಪರೀಕ್ಷೆ ಮುಂದೂಡಿಕೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.
ಯಾವುದೇ ಕಾರಣದಿಂದ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ಹಾಗೆ ಇಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ
ಸೆ.30ರ ಒಳಗೆ ಪರೀಕ್ಷೆ ನಡೆಸುವುದು ಕಡ್ಡಾಯವಲ್ಲ ಎಂದು ನ್ಯಾಯಾಲಯ ತಿಳಿಸಿದೆ ,ಆದರೆ ಪರೀಕ್ಷೆಯನ್ನು ಮುಂದೂಡುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಪರೀಕ್ಷೆಯ ದಿನಾಂಕ ನಿಗದಿ ಸರ್ಕಾರದ ವಿವೇಚನೆಗೆ ಬಿಟ್ಟಿದ್ದು ಎಂದು ನ್ಯಾಯಾಲಯ ಹೇಳಿದೆ ಯು.ಜಿ.ಸಿ. ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.


Share