ಪರಸ್ಥಳದಿಂದ ಬಂದ ಪ್ರವಾಸಿಗರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ

ಅಂತರ ರಾಜ್ಯ ಪ್ರಯಾಣಿಕರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ
ಮೈಸೂರು. ಮೇ.11.(ಕರ್ನಾಟಕ ವಾರ್ತೆ):- ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಅಂತರ ರಾಜ್ಯದಿಂದ ಮೈಸೂರಿಗೆ ಬರುವ ಎಲ್ಲಾ ಪ್ರಯಾಣಿಕರನ್ನು 14 ದಿನಗಳವರೆಗೆ ಕ್ವಾರಂಟೈನ್‍ನಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಅಭಿರಾಮ್ ಜಿ.ಶಂಕರ್ ಅವರು ತಿಳಿಸಿದ್ದಾರೆ.
ಹೊರ ರಾಜ್ಯದಿಂದ ಬಂದವರು ಕ್ವಾರೆಂಟೈನ್‍ನಲ್ಲಿರಲು ಹಾಸ್ಟೆಲ್ (ಉಚಿತವಾಗಿ) ಆಥವಾ ಹಣ ಪಾವತಿಸಿ ಹೋಟೆಲ್‍ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಆದರೆ ಮನೆಯಲ್ಲಿ ಕ್ವಾರಂಟೈನ್‍ನಲ್ಲಿ ಇರಲು ಅವಕಾಶ ನೀಡುವುದಿಲ್ಲ.
ಕ್ವಾರಂಟೈನ್‍ನ 14ನೇ ದಿನದಂದು ಎಲ್ಲಾ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಮಾಡಿಸಲಾಗುವುದು ಎಂದು ತಿಳಿಸಿದ್ದಾರೆ.