ಪೋಸ್ಟಲ್ ಬ್ಯಾಲೆಟ್ ಗಳ ಬಗ್ಗೆ ಪರಿಶೀಲನೆ

Share

 

*ಚುನಾವಣಾ ಪೂರ್ವಸಿದ್ದತೆಗಳ ಬಗ್ಗೆ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರಿಂದ ಪರಿಶೀಲನೆ*

2023 ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಇಂದು ಹೆಚ್. ಡಿ.ಕೋಟೆ ವಿಧಾನ ಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಚುನಾವಣೆ ಕಾರ್ಯಗಳ ಮಾಹಿತಿ ಪಡೆದರು.

ಹೆಚ್ ಡಿ ಕೋಟೆ ಚುನಾವಣಾಧಿಕಾರಿಗಳ ಕಚೇರಿಗೆಯಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳು ಯಾವ ರೀತಿ ಚುನಾವಣೆ ಪೂರ್ವ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಲು ಹಾಗೂ ಇಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜನೆಯಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವ ರೀತಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬುದನ್ನು ಪರಿಶೀಲನೆ ನಡೆಸಿದರು.

ಚುನಾವಣಾಧಿಕಾರಿ ಕಚೇರಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಚುನಾವಣಾ ಪ್ರಕ್ರಿಯೆಗಳು ಮತ್ತು ಕೈಗೊಂಡಿರುವ ಚುನಾವಣಾ ಪೂರ್ವ ಸಿದ್ದತೆಗಳನ್ನು ಪರಿಶೀಲಿಸಿ ಅಗತ್ಯ ಮಾಹಿತಿಯನ್ನು ಕಲೆಹಾಕಿದರು.ಈ ವೇಳೆ ಕೆಲವು ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಚುನಾವಣಾ ಶಾಖೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಎಫಿಕ್ ಕಾರ್ಡ್ ಗಳ ಬಗ್ಗೆ ಹಾಗೂ ಪೋಸ್ಟಲ್ ಬ್ಯಾಲೆಟ್ ಗಳ ಬಗ್ಗೆ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಹೆಚ್.ಡಿ.ಕೋಟೆ ವಿಧಾನ ಸಭಾ ಕ್ಷೇತ್ರದ ಚುನಾವಣಾಧಿಕಾರಿ ಕುಮುದಾ , ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು.

 

 


Share