ಪ್ರಧಾನ ಮಂತ್ರಿಗಳ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

Share

 

ಪ್ರಧಾನ ಮಂತ್ರಿಗಳ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ
————————————–

ಮೈಸೂರು,

ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಬೆಂಗಳೂರು -ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆ ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ.

ಮಾರ್ಚ್ 12 ರಂದು ಬೆಳಿಗ್ಗೆ 11,10ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರನ್ನು ಜಿಲ್ಲಾಡಳಿತ ಸ್ವಾಗತಿಸಲಿದೆ. ನಂತರ ಮೈಸೂರು ವಿಮಾನ ನಿಲ್ದಾಣದಿಂದ ಹೊರಟು ಮಂಡ್ಯದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಂಡ್ಯ ಕಾರ್ಯಕ್ರಮ ಮುಗಿದ ನಂತರ ಮಂಡ್ಯ ಹೆಲಿಪ್ಯಾಡ್ ನಿಂದ ಹೊರಟು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಧ್ಯಾಹ್ನ 1,40 ಕ್ಕೆ ಹುಬ್ಬಳ್ಳಿಗೆ ಹೊರಡುವರು ಎಂದು ಪ್ರಕಟಣೆ ತಿಳಿಸಿದೆ.


Share