“ಬಂದ್ ಗೆ” ಕಾಂಗ್ರೆಸ್ ಬೆಂಬಲ: ಸಿದ್ದರಾಮಯ್ಯ

Share

ಬೆಂಗಳೂರು ಭೂ ಸುಧಾರಣೆ ಕಾಯಿದೆ , ಎಪಿಎಂಸಿ ಕಾಯಿದೆ , ಕಾರ್ಮಿಕ ಕಾಯಿದೆ ಸೇರಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಜನದ್ರೋಹಿ ಕಾಯಿದೆಗಳನ್ನು ವಿರೋಧಿಸಿ ರೈತ , ದಲಿತ , ಕಾರ್ಮಿಕ ಸಂಘಟನೆಗಳು ಹಾಗೂ ನಾನಾ ಸಂಘ ಸಂಸ್ಥೆಗಳು 28.09.2020 ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ . ಈ ಜನ ವಿರೋಧಿ ಕಾಯಿದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ಪಕ್ಷ ನಿರಂತರವಾಗಿ ಹೋರಾಟ ನಡೆಸಲಿದೆ . ಎಂದು ಸಿದ್ದರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Share