ಬತ್ತಿಹೋಗಿರುವ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ

Share

ಹುಣಸೂರು ತಾಲ್ಲೂಕಿನ ಮರದೂರು ಗ್ರಾಮದದ ಬಳಿ ಲಕ್ಷ್ಣತೀರ್ಥ ನದಿಯಿಂದ ಹುಣಸೂರು ತಾಲ್ಲೂಕು ವ್ಯಾಪ್ತಿಯ ಬತ್ತಿ ಹೋಗಿರುವ 49 ಕೆರೆಗಳಿಗೆ ನೀರು ತುಂಬಿಸುವ ರೂ. 85.00 ಕೋಟಿ ಮೊತ್ತದ ಡಿ.ಪಿ.ಆರ್ ಅನ್ನು ಜಲ ಸಂಪನ್ಮೂಲ ಇಲಾಖೆವತಿಯಿಂದ ತಯಾರಿಸಿ, ಅಂದಾಜು ಪರಿಶೀಲನಾ ಸಮಿತಿ ಹಾಗೂ 79ನೇ ಮಂಡಳಿ ಸಭೆಯಿಂದ ಅನುಮೋದನೆಯನ್ನು ಪಡೆಯಲಾಗಿತ್ತು. ಸದರಿ ಪ್ರಸ್ತಾವನೆಯನ್ನು ಕ್ಯಾಬಿನೆಟ್ ಸಭೆಯಲ್ಲಿ ಮಂಡಿಸಿ ಅನುಮೋದನೆ ನೀಡುವಂತೆ ಸಂಸದ ಪ್ರತಾಪ್ ಸಿಂಹ ಹಲವು ಬಾರಿ ಸನ್ಮಾನ್ಯ ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಲಾಗಿದ್ದು ಇದಕ್ಕೆ ಅನುಗುಣವಾಗಿ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ (24/03/2023) ” ಹುಣಸೂರು ತಾಲ್ಲೂಕಿನ ಮರದೂರು ಗ್ರಾಮದದ ಬಳಿ ಲಕ್ಷ್ಣತೀರ್ಥ ನದಿಯಿಂದ ಹುಣಸೂರು ತಾಲ್ಲೂಕು ವ್ಯಾಪ್ತಿಯ ಬತ್ತಿ ಹೋಗಿರುವ 49 ಕೆರೆಗಳಿಗೆ ನೀರು ತುಂಬಿಸುವ ರೂ. 85.00 ಕೋಟಿ ಮೊತ್ತದ ಕಾಮಗಾರಿಗೆ” ಅನುಮೋದನೆ ನೀಡಿದ್ದು, ಹುಣಸೂರು ತಾಲ್ಲೂಕಿನ ಜನತೆಯ ಪರವಾಗಿ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಹಕರಿಸಿದ ಮಾನ್ಯ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರಿಗೆ ಧನ್ಯವಾದಗಳು ಅರ್ಪಿಸಿದ್ದಾರೆ ಸಂಸದರಾದ ಪ್ರತಾಪ್‌ ಸಿಂಹ ಅವರು.


Share