ಬಾಗಿನ ಅರ್ಪಣೆ : ಮುಖ್ಯಮಂತ್ರಿ ಮುಂದೆ ಕಪ್ಪು ಬಾವುಟ ಪ್ರದರ್ಶನ

Share

ಮೈಸೂರು, ರಾಜ್ಯದ ಜನತೆ ಕೋರೋನ ಸಂಕಷ್ಟದಿಂದ ನರಳುತ್ತಿದ್ದು ಅತಿವೃಷ್ಟಿಯಿಂದ ಹಲವಾರು ಸಾವು-ನೋವುಗಳು ಆಗಿವೆ,ಕುಟುಂಬಗಳಿಗೆ ಸರ್ಕಾರ ನ್ಯಾಯ ಒದಗಿಸಿಲ್ಲ ಇಂತಹ ಪರಿಸ್ಥಿತಿಯಲ್ಲಿ ತುಂಬಿರುವ ಜಲಾಶಯಗಳಿಗೆ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರು ಬಾಗಿನ ಅರ್ಪಿಸುವುದು ಸರಿಯೇ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು ಪ್ರಶ್ನಿಸಿದ್ದಾರೆ ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಸ್ವರಾಜ್ ಇಂಡಿಯಾ ಪಕ್ಷ ಜನಾಂದೋಲನ ಮಹಾಮೈತ್ರಿ ಸಹಯೋಗದೊಂದಿಗೆ ಪ್ರತಿಭಟಿಸಲು ನಿರ್ಧರಿಸಲಾಗಿದೆ, ಎಂದು ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ತಿಳಿಸಿದರು.
ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ತಂದು ಕುಲವನ್ನೇ ಒಕ್ಕಲೆಬ್ಬಿಸಲು ಮುಂದಾಗಿರುವ ಸರ್ಕಾರದ ನೀತಿಯನ್ನು ಖಂಡಿಸಿ ಎಪಿಎಂಸಿ ತಿದ್ದುಪಡಿ ಕಾಯ್ದೆ ತಿದ್ದುಪಡಿ ಕಾಯ್ದೆ ಸರ್ಕಾರದ ಜನವಿರೋಧಿ ನೀತಿಯನ್ನು ಜನಪರ ಸಂಘಟನೆಗಳು ನಿರಂತರವಾಗಿ ಖಂಡಿಸಿ ಹೋರಾಟ ಮಾಡುತ್ತೇವೆ ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಯಡಿಯೂರಪ್ಪನವರು ಕೆಆರ್ಎಸ್ ಮತ್ತು ಕಬಿನಿ ಜಲಾಶಯ ಗಳಿಗೆ ಭಾಗವಹಿಸಲು ಬರುವ ಸಮಯದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.


Share