ಬಾರ್ ಮುಚ್ಚಿಸುವಂತೆ ಪ್ರತಿಭಟನೆ.

Share

ಬಾರ್ ಗಳನ್ನು ಮುಚ್ಚುವಂತೆ ಒತ್ತಾಯಿಸಿ ನಗರದ ಎನ್.ಆರ್.ಕ್ಷೇತ್ರದ ವ್ಯಾಪ್ತಿಯ ಕ್ಯಾತಮಾರನಹಳ್ಳಿ ಟೆಂಟ್ ಸರ್ಕಲ್ ನಲ್ಲಿ ಬಿಜೆಪಿ ಮುಖಂಡ ಗಿರಿಧರ್ ನೇತೃತ್ವದಲ್ಲಿಂದು ಪ್ರತಿಭಟನೆ ನಡೆಯಿತು.

30,31,32 ನೇ ವಾರ್ಡ್ ನ ವ್ಯಾಪ್ತಿಯಲ್ಲಿ ಮೂರು ಬಾರ್ ಗಳಿವೆ. ಈ ಪ್ರದೇಶದಲ್ಲಿ‌ ಹೆಂಗಸರು ಮಕ್ಕಳು ಓಡಾಡಲು ಕಷ್ಟವಾಗುತ್ತಿದೆ. ಬಾರ್ ನಿಂದಾಗಿ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಈ ಭಾಗದಲ್ಲಿ ಎಲ್ಲ ಜನರು ನೆಮ್ಮದಿಯಿಂದ ಇರಬೇಕಾದರೆ ತಕ್ಷಣ ಬಾರ್ ಲೈಸನ್ಸ್ ಕ್ಯಾನ್ಸಲ್ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.


Share