ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನ ದಿನಾಚರಣೆ

Share

ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನ ದಿನಾಚರಣೆ 

ಮೈಸೂರು ನಗರ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನ ದಿನಾಚರಣೆಯನ್ನು ಪಕ್ಷದ ಹಿರಿಯ ಕಾರ್ಯಕರ್ತರಾದ ಶ್ರೀನಿವಾಸ್ ರವರು ಧ್ವಜಾರೋಹಣ ಮಾಡುವ ಮೂಲಕ ಆಚರಿಸಲಾಯಿತು. ನಂತರ ಸಂಸ್ಥಾಪಕರಾದ ಶ್ರೀ ಶಾಮ್ ಪ್ರಕಾಶ್ ಮುಖರ್ಜಿ ಮತ್ತು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಟಿ ಎಸ್ ಶ್ರೀವತ್ಸ ರವರು ಹಾಗೂ ಜಿಲ್ಲಾಧ್ಯಕ್ಷರಾದ ಮಂಗಳ ಸೋಮಶೇಖರ್ ರವರು ಪುಷ್ಪಾರ್ಚನೆ ಮಾಡಿದರು ನಂತರ ಮಾತನಾಡಿದ ಹಿರಿಯ ಕಾರ್ಯಕರ್ತರಾದ ಶ್ರೀನಿವಾಸ್ ರವರು ದೇಶವು ಸಂಕಷ್ಟದಲ್ಲಿದ್ದಾಗ ದೇಶಪ್ರೇಮದ ಕಿಚ್ಚನ್ನು ಜನರಲ್ಲಿ ಮೂಡಿಸಲು ನಮ್ಮ ಹಿರಿಯರು ಭಾರತೀಯ ಜನತಾ ಪಾರ್ಟಿಯನ್ನು ಕಟ್ಟಿ ಬೆಳೆಸಿದರು ಅದು ಈಗ ವಿಶ್ವದ ಅತಿ ದೊಡ್ಡ ಪಕ್ಷವಾಗಿ ಬೆಳೆದಿದೆ ಪಕ್ಷ ಈ ಮಟ್ಟಕ್ಕೆ ಬೆಳೆಯಲು ಲಕ್ಷಾಂತರ ಕಾರ್ಯಕರ್ತರ ಪರಿಶ್ರಮವಿದೆ ಲಕ್ಷಾಂತರ ಕಾರ್ಯಕರ್ತರ ಆಶಯವನ್ನು ಇಂದು ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಿರುವುದೇ ಸಾಕ್ಷಿ ಈ ಪಕ್ಷದ ಕಾರ್ಯಕರ್ತ ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಅನಿಸುತ್ತಿದೆ ಈ ದಿನ ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ಮಾಡಲು ನನಗೆ ಅವಕಾಶ ಮಾಡಿಕೊಟ್ಟಂತ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದರು ನಂತರ ಮಾತನಾಡಿದ ಜಿಲ್ಲಾಧ್ಯಕ್ಷರಾದ ಮಂಗಳ ಸೋಮಶೇಖರ್ ರವರು ಪಕ್ಷವನ್ನು ಕಟ್ಟಿ ಬೆಳೆಸಿದ ಎಲ್ಲಾ ಹಿರಿಯರಿಗೂ ಹಾಗೂ ಹಿರಿಯ ಕಾರ್ಯಕರ್ತರಿಗೂ ಈ ಸಂದರ್ಭದಲ್ಲಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಈ ಪಕ್ಷದ ಕಾರ್ಯಕರ್ತರು ದೇಶಭಕ್ತ ಕಾರ್ಯಕರ್ತರು ಪಕ್ಷವನ್ನು ಮತ್ತಷ್ಟು ಬಲಪಡಿಸುವ ಮೂಲಕ ತಮ್ಮ ತಮ್ಮ ಜವಾಬ್ದಾರಿಗಳನ್ನು ಅರಿತು ಕೆಲಸ ನಿರ್ವಹಿಸಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ರಾಜೇಂದ್ರ. ವಿಭಾಗ ಸಹ ಪ್ರಭಾರಿ ಮೈ ವಿ ರವಿಶಂಕರ್. ಪ್ರಧಾನ ಕಾರ್ಯದರ್ಶಿಯಾದ ವಾಣಿಶ್ ಕುಮಾರ್. ಸೋಮಸುಂದರ್.ಮಾಧ್ಯಮ ಸಹ ಸಂಚಾಲಕರಾದ ಪ್ರದೀಪ್ ಕುಮಾರ್.ಸಹ ವಕ್ತಾರ ವಸಂತ ಕುಮಾರ್. ಚೇತನ್. ಪರಮೇಶ್ ಗೌಡ. ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಜೋಗಿ ಮಂಜು. ಪುರುಷೋತ್ತಮ್. ಪ್ರದೀಪ್ .ಪಕ್ಷದ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

 


Share