ಬಿಬಿಎಂಪಿ ಅಗ್ನಿ ಯಲ್ಲಿ ಅವಗಡ: ಪೋಲಿಸ್ / ಬಿಬಿಎಂಪಿ ಪ್ರತ್ಯೇಕ ತನಿಖೆಗೆ ಸೂಚನೆ- ಸಿಎಂ

6
Share

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಬಿಬಿಎಂಪಿ ಕಚೇರಿ ಅಗ್ನಿ ಅನಾಹುತ ದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಬೆಂಗಳೂರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ ಎ ಎಲ್ ವಿಮಾನ ನಿಲ್ಸಾಣದಿಂದ ನೇರವಾಗಿ ವಿಕ್ಡೋರಿಯಾ ಆಸ್ಪತ್ರೆಗೆ ಭೇಟಿ ನೀಡಿ. ಬಿಬಿಎಂಪಿ ಕಚೇರಿಯ ಅಗ್ನಿ ಅನಾಹುತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿ ಎಲ್ಲರನ್ನೂ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡಿ ಉತ್ತಮ ಚಿಕಿತ್ಸೆ ನೀಡಲು ಸೂಚಿಸಿದರು. ಘಟನೆ ಬಗ್ಗೆ ಪ್ರತ್ಯೇಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದರು.
: ವಿಕ್ಟೋರಿಯಾ ಆಸ್ಪತ್ರೆ ಬಳಿಕ ಬಿಬಿಎಂಪಿ ಕೇಂದ್ರ ಕಚೇರಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆಯ ಕುರಿತು ವಿವರವಾದ ಮಾಹಿತಿಯನ್ನು ಪಡೆದುಕೊಂಡರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸಚಿವರಾದ ರಾಮಲಿಂಗಾರೆಡ್ಡಿ ಮತ್ತು ಭೈರತಿ ಸುರೇಶ್ ಅವರುಗಳು ಜತೆಗಿದ್ದರು.

Share