ಬೆಂಗಳೂರು,
ನಾಳೆ ರಾತ್ರಿಯಿಂದ ಬೆಂಗಳೂರಿನಲ್ಲಿ ಲಾಕ್ಡೌನ್ ಆಗುತ್ತಿರುವ ಹಿನ್ನೆಲೆಯಲ್ಲಿ ವಲಸಿಗರು ಇಂದು ಬೆಳಗ್ಗೆ 6 ಗಂಟೆಯಿಂದಲೇ ತಮ್ಮ ಊರಿನ ಕಡೆ ಪ್ರಯಾಣ ಆರಂಭಿಸಿ ಬೆಂಗಳೂರಿಂದ ಕಾಲಿಗೆ ಬುದ್ಧಿ ಹೇಳಿದ್ದಾರೆ. ಇಂದು ಬೆಳಗ್ಗೆಯಿಂದಲೇ ನಗರದ ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಸಾರ್ವಜನಿಕರು ಪರಿಹಾರವನ್ನು ಪರದಾಡುವಂತಾಗಿದೆ ಎಂದು ಹೇಳಲಾಗಿದೆ.