ಬೆಂಗಳೂರು ಕಾವಲಭೈರಸಂದ್ರ ಘಟನೆ: ಪುಂಡರ ಪುಂಡಾಟ ಪೊಲೀಸರ ಗುಂಡಿಗೆ ಓರ್ವ ಬಲಿ. ಪೊಲೀಸರಿಗೆ ಮುಕ್ತ ಅಧಿಕಾರ ಮುಖ್ಯಮಂತ್ರಿ

Share

ಬೆಂಗಳೂರು ಉದ್ವಿಗ್ನ : ಪುಂಡರ ಪುಂಡಾಟ ಪೊಲೀಸರ ಗುಂಡಿಗೆ ಓರ್ವ ಬಲಿ ಬೆಂಗಳೂರಿನ ಡಿ.ಜೆ ಹಳ್ಳಿ,ಕಾವಲು ಭೈರಸಂದ್ರದಲ್ಲಿ ಹಠಾತ್ ಪುಂಡಾಟ ಇದನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿರುವ ಪೊಲೀಸರಿಂದ ಗುಂಡು ಹಾರಿಸುವಿಕೆ .ಓರ್ವ ಬಲಿ ಕಾಂಗ್ರೆಸ್ ನ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಗೆ ಬೆಂಕಿ . ಪೊಲೀಸ್ ವಾಹನಗಳು ಸೇರಿದಂತೆ 50 ಕ್ಕೂ ಹೆಚ್ಚು ಸ್ಕೂಟರ್ ಕಾರು ಬೈಕ್ ಸೇರಿದಂತೆ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ . ಇಂದಿನ ಈ ಘಟನೆಯಲ್ಲಿ ಖಾಸಗಿ ವಾಹಿನಿಗಳ ಪತ್ರಕರ್ತರ ಮೇಲೆ ತೀವ್ರ ರೀತಿಯ ಹಲ್ಲೆಗಳಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.ಪುಂಡಾಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ .ಹಲವಾರು ಸುತ್ತು ಟಿಯರ್ ಗ್ಯಾಸ್ಗಳನ್ನು ಹೊಡೆದು ಗುಂಪುಗಳನ್ನು ಚದುರಿಸುತ್ತಿದ್ದಾರೆ .ಇಷ್ಟಾದರೂ ಪುಂಡರ ಗುಂಪುಗಳು ಗುಂಪು ಗುಂಪಾಗಿ ಬಂದು ಸಿಕ್ಕ ಸಿಕ್ಕ ವಾಹನಗಳನ್ನು ಉರುಳಿಸಿ ಬೆಂಕಿ ಹಚ್ಚುವ ಸುತ್ತಮುತ್ತಲ ಅಂಗಡಿಗಳ ಗಾಜುಗಳನ್ನು ಒಡೆದು ಹಾಕುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ .ಹೆಚ್ಚುವರಿ ಕೆಎಸ್ಆರ್ಪಿ ಪೊಲೀಸರನ್ನು ಸ್ಥಳಕ್ಕೆ ಕಳುಹಿಸಿದ್ದು ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸುತ್ತಿದ್ದಾರೆ . ಇದೊಂದು ಪೂರ್ವ ನಿಯೋಜಿತ ಕೃತ್ಯ ಯಾರು ತಪ್ಪು ಮಾಡಿದರೂ ಬಿಡುವುದಿಲ್ಲ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಬೊಮ್ಮಾಯಿ ತಿಳಿಸಿದ್ದು ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ಆಗಿದ್ದಾಗ ತರುತ್ತಿರುವುದಾಗಿ ತಿಳಿಸಿದ್ದಾರೆ

.ಕಠಿಣ ಕ್ರಮ ಸಿಎಂ ಬೆಂಗಳೂರಿನಲ್ಲಿ ಈಗ ಕೆಲವು ಹೊತ್ತಿನ ಮುಂಚೆ ನಡೆದಿರುವ ಗಲಭೆಯನ್ನು ಹತ್ತಿಕ್ಕಲು ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇದೀಗ ಗೃಹಸಚಿವರಿಗೆ ಫೋನ್ ಮುಖಾಂತರ ತಿಳಿಸಿದ್ದಾರೆ. ಹತೋಟಿಗೆ ತರಲು ಪೊಲೀಸರಿಗೆ ಮುಕ್ತ ಅಧಿಕಾರ ನೀಡಲು ಯಡಿಯೂರಪ್ಪ ಸೂಚಿಸಿದ್ದಾರೆ. ಇದೀಗ ವರದಿಯಾಗಿರುವ ಪ್ರಕಾರ ಪೊಲೀಸರ ಗುಂಡೇಟಿಗೆ ಓರ್ವ ಬಲಿಯಾಗಿದ್ದು ಮೂವರ ಕಾಲಿಗೆ ಗುಂಡು ಹಾರಿದೆ ಎಂದು ಗೊತ್ತಾಗಿದೆ. ಅನೇಕ ಪೊಲೀಸರು ಪತ್ರಕರ್ತರು ಉದ್ವಿಗ್ನ ಸ್ಥಿತಿ ಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಗೃಹ ಸಚಿವರ ಹೇಳಿಕೆ

ಬೆಂಗಳೂರು, ಇಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಯ ಮೇಲೆ ನಡೆದಿರುವ ದಾಳಿ ಹಾಗೂ ಗಲಾಟೆ ಕೆಲವರ ಕುಮ್ಮಕ್ಕಿನಿಂದ ನಡೆದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಕಾನೂನು ಕೈಗೆತ್ತಿಕೊಂಡ ವ್ಯಕ್ತಿಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಘಟನೆಯ ವಿವರ
ಬೆಂಗಳೂರಿನ ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಮನೆಗೆ ಬೆಂಕಿ ಹಚ್ಚಲಾಗಿದೆ. ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಸದ್ಯಕ್ಕೆ ನಿಯಂತ್ರಣ ಬಂದಿಲ್ಲ ಎಂದು ಹೇಳಲಾಗಿದೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗಲಾಟೆ ಶಾಂತಗೊಳಿಸಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ

ಮಂಗಳವಾರ ರಾತ್ರಿ ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮೇಲೆ ಮೇಲೆ 15ಕ್ಕೂ ಅಧಿಕ ಜನರು ಕಲ್ಲು ತೂರಾಟ ನಡೆಸಿದ್ದಾರೆ. ಮನೆಯ ಮುಂದಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಒಂದು ಸಮುದಾಯಕ್ಕೆ ಸೇರಿದವರು ಈ ದಾಳಿಯನ್ನು ನಡೆಸಿದ್ದಾರೆ. ದಾಳಿ ನಡೆದ ಸಂದರ್ಭದಲ್ಲಿ ಶಾಸಕರು ಮನೆಯಲ್ಲಿ ಇರಲಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ನಡೆಸಿದ್ದಾರೆ.

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಎಂಬುವವರು ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಈ ದಾಳಿ ನಡೆಸಲಾಗಿದೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರು ಸ್ಥಳಕ್ಕೆ ಆಗಮಿಸಿದ್ದು, ಬಳಿಕ ಡಿ. ಜೆ. ಹಳ್ಳಿ ಪೊಲೀಸ್ ಠಾಣೆಗೆ ತೆರಳಿದ್ದಾರೆ. ದಾಳಿ ನಡೆದ ಸಂದರ್ಭದಲ್ಲಿ ಶಾಸಕರು ನಿವಾಸದಲ್ಲಿ ಇರಲಿಲ್ಲ.


Share