ಬೆಂಗಳೂರು.
ನಗರದ ದಕ್ಷಿಣ ವಲಯದಲ್ಲಿರುವ ಸೋಂಕಿತರು ಹೆಚ್ಚು ಮೃತ ರಾಗುತ್ತಿದ್ದಾರೆ ಎಂದು ಕಂದಾಯ ಸಚಿವ ಕರುಣಾಕರ ಅಶೋಕ್ ಅವರು ತಿಳಿಸಿದ್ದಾರೆ ನಗರದ ಕೆಆರ್ ಮಾರ್ಕೆಟ್ ಮತ್ತು ಕಲಾಸಿಪಾಳ್ಯ ಭಾಗದಲ್ಲಿ ಹೆಚ್ಚು ಸಾವು ಸಂಭವಿಸುತ್ತಿದೆ ಎಂದು ಅವರು ಹೇಳಿಕೆ ನೀಡಿದ್ದಾರೆ. ಕೆಆರ್ ಮಾರ್ಕೆಟ್ ಮತ್ತು ಕಲಾಸಿಪಾಳ್ಯ ತೆರೆಯದಂತೆ ಆದೇಶ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಅಶೋಕ್ ತಿಳಿಸಿದ್ದಾರೆ. ಈ ಸಂಬಂಧ ಇಂದು ಬೆಳಗ್ಗೆ ನಡೆದ ಮುಖ್ಯಮಂತ್ರಿ ಜೊತೆ ಸಭೆಯಲ್ಲಿ ಮುಖ್ಯಮಂತ್ರಿ ಗಮನಕ್ಕೆ ತರಲಾಗಿದ್ದು ಮುಖ್ಯಮಂತ್ರಿಗಳು ಕೆಲವು ಸೂಚನೆಗಳನ್ನು ನೀಡಿದ್ದಾರೆ ಎಂದು ತಿಳಿಸಲಾಗಿದೆ ದಕ್ಷಿಣ ಭಾಗದಲ್ಲಿ ಟೆಸ್ಟ್ ಸಂಖ್ಯೆ ಹೆಚ್ಚಿಸಬೇಕು ಹಾಗೂ ಬೆಡ್ ಗಳ ವ್ಯವಸ್ಥೆ ಹೆಚ್ಚಾಗಿ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಕಂಟೈನ್ಮೆಂಟ್ ಸ್ಥಳಗಳಲ್ಲಿ ಆಹಾರ ಕಿಟ್ ವಿತರಣೆ ಮಾಡಲಾಗುತ್ತಿದೆ, ಎಂದ ಸಚಿವರು ಈಗಾಗಲೇ ಗೃಹ ಬಂಧನದಲ್ಲಿರುವ ವ್ಯಕ್ತಿಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಅಶೋಕ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.