ಬ್ರಾಹ್ಮಣರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯುವ ವಿಧಾನ..

632
Share

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯುವುದು ಹೇಗೆ?

 1. ರಾಜ್ಯ ಸರ್ಕಾರವು ಈಗಾಗಲೇ ಹೊರಡಿಸಿರುವ ಆದೇಶದ ಪ್ರಕಾರ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ತೆಗೆದುಕೊಳ್ಳಲು ಇಚ್ಚಿಸುವವರು ತಮ್ಮ ಆಧಾರ್ ಕಾರ್ಡ್ ಹಾಗೂ ಟಿಸಿಯನ್ನು ದಾಖಲೆಯಾಗಿ ಒದಗಿಸಬೇಕು.
 2. ರೂ 20 ಬಾಂಡ್ ಪೇಪರ್ ಮೇಲೆ ಎಲ್ಲಾ ಮೂಲಗಳಿಂದ ಬರುವ ತನ್ನ ವಾರ್ಷಿಕ ಆದಾಯವನ್ನು ದೃಢಪಡಿಸಬೇಕು.
 3. ಈ ಎಲ್ಲಾ ದಾಖಲಾತಿಗಳನ್ನು ತಾಲೂಕು ಅಥವಾ ನಾಡ ಕಛೇರಿ ಅಥವಾ ಅಟಲ್ ಸ್ನೇಹ ಕೇಂದ್ರದಲ್ಲಿ, ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಪ್ರಮಾಣಪತ್ರವನ್ನು ಪಡೆಯತಕ್ಕದ್ದು.

ಬ್ರಾಹ್ಮಣ ಸಮಾಜದ ಅಭಿವೃದ್ಧಿಗಾಗಿ ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಬಂಧುಗಳಿಗೆ ರಾಜ್ಯ ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸವ ಸಲುವಾಗಿ ರಾಜ್ಯ ಸರ್ಕಾರವು ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ರಚಿಸಿ ಈ ಅಭಿವೃದ್ಧಿ ಮಂಡಳಿಗೆ ಶ್ರೀ ಸಚ್ಚಿದಾನಂದ ಮೂರ್ತಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಹಾಗೂ ನಿರ್ದೇಶಕರನ್ನು ನಾಮನಿರ್ದೇಶನ ಮಾಡಿರುವುದಕ್ಕಾಗಿ ಮುಖ್ಯಮಂತ್ರಿಗಳಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ.

ಬ್ರಾಹ್ಮಣ ಸಮುದಾಯಕ್ಕೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಆದೇಶ ಹೊರಡಿಸಿ ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗೆ ತಾನು ಕಡಿ ಬದ್ಧವೆಂದು ನಿರೂಪಿಸಿದೆ. ಇದಕ್ಕಾಗಿ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಿಎಸ್ ಯಡಿಯೂರಪ್ಪ ನವರಿಗೆ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ.

ಈಗಾಗಲೇ ನಮ್ಮ ನೆಚ್ಚಿನ ಮಾನ್ಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ನರೇಂದ್ರ ಮೋದಿಯವರು ಮೀಸಲಾತಿ ಇಲ್ಲದ ಆರ್ಥಿಕವಾಗಿ ಹಿಂದುಳಿದ 144 ಜಾತಿಗಳಿಗೆ ಹತ್ತು ಪರ್ಸೆಂಟ್ ಮೀಸಲಾತಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಕಲ್ಪಿಸಲು ರಾಜ್ಯಸಭೆಯಲ್ಲಿ ಬಿಲ್ ಪಾಸ್ ಮಾಡಿರುವುದು ತಿಳಿದಿದೆ. ಈಗಾಗಲೇ ಇದನ್ನು ಉತ್ತರಪ್ರದೇಶ, ಮಧ್ಯಪ್ರದೇಶ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ಜಾರಿಗೊಳಿಸಲಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಇಂದಿಗೂ ಜಾರಿಯಾಗಿಲ್ಲ.ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಯಡಿಯೂರಪ್ಪನವರು ಕರ್ನಾಟಕದಲ್ಲಿ ಜಾರಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಈಗಾಗಲೇ ಇದರ ಕರಡು ತಯಾರಾಗಿದ್ದು ಸದನ ಸಂಪುಟ ಸಭೆಯಲ್ಲಿ ಮಂಡಿಸಲು ಸಿದ್ಧವಾಗಿದೆ.ಮಾನ್ಯ ಮುಖ್ಯಮಂತ್ರಿಗಳು ಶೀಘ್ರದಲ್ಲಿ ಇದನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಜಾರಿಗೊಳಿಸಬೇಕಾಗಿದೆ ಒತ್ತಾಯಿಸುತ್ತಿದ್ದೇವೆ.

ದಿನಾಂಕ 29-7-2020 ರಂದು ನಮ್ಮ ಆಡಳಿತ ಮಂಡಳಿಯ ಮೊದಲ ಸಭೆ ನಡೆದು ಅನೇಕ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.ಅನೇಕ ಯೋಜನೆಗಳ ಬಗ್ಗೆ ಚರ್ಚಿಸಿ ಯೋಜನೆಗಳನ್ನು ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಸಮುದಾಯಕ್ಕೆ ತಲುಪಿಸುವ ಕಾರ್ಯತಂತ್ರವನ್ನು ರೂಪಿಸಲಾಯಿತು.

ಮಂಡಳಿಯ ಯೋಜನೆಗಳು ಇಂತಿವೆ

 1. ಸಂದೀಪಿನಿ ಶಿಷ್ಯವೇತನ
 2. ಆಚಾರ್ಯತ್ರಯ ವೇದ ಶಿಷ್ಯವೇತನ
 3. ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ
 4. ಚಾಣಕ್ಯ ಆಡಳಿತ ತರಬೇತಿ ಯೋಜನೆ.
 5. ಸನ್ನಿಧಿ ಯೋಜನೆ.
 6. ಸರ್ ಎಂ ವಿಶ್ವೇಶ್ವರಯ್ಯ ಕೌಶಲ್ಯ ಅಭಿವೃದ್ಧಿ ಯೋಜನೆ.
 7. ಪುರುಷೋತ್ತಮ ಯೋಜನೆ
 8. ಅನ್ನದಾತ ಯೋಜನೆ
 9. ಸೌಖ್ಯ ಯೋಜನೆ
 10. ಕಲ್ಯಾಣ ಯೋಜನೆ
 11. ಚೈತನ್ಯ ಉತ್ಸವ

Share