ಜುಲೈ 5 ರಿಂದ ಭಾನುವಾರ ಲಾಕ್ ಡೌನ್ ಸರ್ಕಾರ ಪ್ರಕಟ

ಬೆಂಗಳೂರು , ಜುಲೈ 5ರಿಂದ ಪ್ರತಿ ಭಾನುವಾರ ಲಾಕ್ ಡೌನ್ ನಿರ್ಧಾರ

ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದ ನಂತರ ಕೆಲವು ಗಟ್ಟಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಕಂದಾಯ ಸಚಿವರು ತಿಳಿಸಿದ್ದಾರೆ. ಅವರು ಇಂದು ಸಂಜೆ ಮುಖ್ಯಮಂತ್ರಿ ಕರೆದಿದ್ದ ತುರ್ತು ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಜುಲೈ 5ರ ನಂತರ ಸಂಪೂರ್ಣ ಬಂದ್ ಮಾಡುವಂತ ಗಟ್ಟಿ ನಿರ್ಧಾರ ಪ್ರಕಟಿಸಲಾಗುವುದು ಎಂದೂ ಅವರು ಹೇಳಿದರು.

ನಾಳೆಯಿಂದ ರಾತ್ರಿ 8 ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ ಎಂದು ತಿಳಿಸಿದ್ದಾರೆ . ಸರ್ಕಾರಿ ನೌಕರರು ವಾರದ ಐದು ದಿನ ಕೆಲಸ ಮಾಡಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಜುಲೈ 5 ರ ನಂತರ ಸಂಪೂರ್ಣವಾಗಿ ಎಲ್ಲಾ ಬಂದ್ ಮಾಡಲಾಗುತ್ತದೆ ನಿರ್ಧಾರವಾಗುತ್ತದೆ ಎಂದು ಹೇಳಿದರು.
ಅಗತ್ಯ ವಸ್ತುಗಳ ಸಾಗಾಣಿಕೆ ಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ