ಭ್ರಷ್ಟಾಚಾರ: ಸುಪ್ರೀಂ ನಿರಾಕರಣೆ ಡಿಕೆಶಿಗೆ ರಿಲೀಫ್

ಹೊಸದಿಲ್ಲಿ: ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ 2017ರಲ್ಲಿ ದಾಳಿ ನಡೆಸಿ ಅದರ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಅವರ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯ ನಂತರ, ಸಿಬಿಐ ನಂತರ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿದ ನ್ನು ಸ್ಮರಿಸಬಹುದು
2020ರಲ್ಲೇ ಪ್ರಕರಣ ನಡೆದಿದ್ದರೂ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಸಿಬಿಐ ತನ್ನ ಮೇಲೆ ಪದೇ ಪದೇ ನೋಟಿಸ್‌ ಜಾರಿ ಮಾಡುವ ಮೂಲಕ ಮಾನಸಿಕ ಒತ್ತಡ ಹೇರುತ್ತಿದೆ ಎಂದು ಆರೋಪಿಸಿ ಶಿವಕುಮಾರ್‌ ಅವರು ತಮ್ಮ ವಿರುದ್ಧದ ಮಂಜೂರಾತಿ ಮತ್ತು ವಿಚಾರಣೆಯನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದರು.
ಅವರ ಅರ್ಜಿಯನ್ನು ಹೈಕೋರ್ಟ್ ನ ಏಕಸದಸ್ಯ ಪೀಠವು ವಜಾಗೊಳಿಸಿತ್ತು. ಬಳಿಕ ಡಿಕೆಶಿ ಅವರು ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಅರ್ಜಿ ಪುರಸ್ಕರಿಸಿದ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ, ಬಳಿಕ ಜುಲೈ 17ರಂದು ಮೂರು ವಾರಗಳ ಕಾಲ ವಿಸ್ತರಿಸಿತ್ತು