ಮಾಜಿ ಮುಖ್ಯಮಂತ್ರಿ ಎಚ್‌ಡಿಕೆಗೆ ಜ್ವರ- ಆಸ್ಪತ್ರೆಗೆ ದಾಖಲು

Share

ಬೆಂಗಳೂರು- ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ವಿಶ್ರಾಂತಿ ಇಲ್ಲದೆ ಆರೋಗ್ಯದಲ್ಲಿ  ವ್ಯತ್ಯಾಸ ಉಂಟಾಗಿದ್ದು ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ವಿಶ್ರಾಂತಿ ತೆಗೆದುಕೊಳ್ಳಲು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಆತಂಕಕ್ಕೆ ಒಳಗಾಗಬಾರದು ಎಂದು ಕುಮಾರಸ್ವಾಮಿಯವರು ಮನವಿ ಮಾಡಿರುವವರು ಸದ್ಯದಲ್ಲೇ ಪ್ರಚಾರ ಕಾರ್ಯಕ್ರಮ ಗಳಿಗೆ ಬರುವುದಾಗಿ ಅವರು ತಿಳಿಸಿದ್ದಾರೆ.

Share