ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೂ ಕೊರೋನಾ ಪಾಸಿಟಿವ್

Share

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು, ನನ್ನ ಆರೋಗ್ಯದ ನಿಗಧಿತ ತಪಾಸಣೆಗಾಗಿ ಆಸ್ಪತ್ರೆಗೆ ತೆರಳಿದ ವೇಳೆಯಲ್ಲಿ ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಕಳೆದ ಒಂದು ವಾರದಿಂದ ನನ್ನ ಸಂಪರ್ಕದಲ್ಲಿರುವವರು ಕೊರೋನಾ ಸೋಂಕಿನ ಲಕ್ಷಣಗಳಿದ್ದರೇ ಸ್ವಯಂ ಐಸೋಲೇಷನ್ ನಲ್ಲಿ ಇದ್ದು, ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯುವಂತೆ ಮನವಿ ಮಾಡಿದ್ದಾರೆ.


Share