ಮಾ.03 ರಂದು ಮೈಸೂರು ವಿಶ್ವವಿದ್ಯಾನಿಲಯದ 104 ನೇ ಘಟಿಕೋತ್ಸವ

140
Share

 

*ಮಾ.03 ರಂದು ಮೈಸೂರು ವಿಶ್ವವಿದ್ಯಾನಿಲಯದ 104 ನೇ ಘಟಿಕೋತ್ಸವ*

ಮೈಸೂರು :- ಮೈಸೂರು ವಿಶ್ವವಿದ್ಯಾನಿಲಯದ 104ನೇ ಘಟಿಕೋತ್ಸವವನ್ನು ಮಾ.03 ರಂದು ಬೆಳಗ್ಗೆ 10 ಗಂಟೆಗೆ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಏರ್ಪಡಿಸಲಾಗಿದೆ.

ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಬೆಂಗಳೂರಿನ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ವಿಶ್ರಾಂತ
ನಿರ್ದೇಶಕರು ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಸಿ ಎನ್ ಮಂಜುನಾಥ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದು, ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾನಿಲಯದ ಸಮ ಕುಲಾಧಿಪತಿಗಳಾದ ಡಾ. ಎಂ ಸಿ ಸುಧಾಕರ್ ಅವರು ಉಪಸ್ಥಿತರಿರುವರು.


Share