ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್

Share

ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್
ಮೈಸೂರು, ಸೆಪ್ಟೆಂಬರ್.03.(ಕರ್ನಾಟಕ ವಾರ್ತೆ):- ನೂತನವಾಗಿ ಮುಡಾ ಅಧ್ಯಕ್ಷರಾದ ಎಚ್.ವಿ.ರಾಜೀವ್ ಅವರು ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಇತರ ಗಣ್ಯರನ್ನು ಭೇಟಿ ಮಾಡಿ ಧನ್ಯವಾದ ಅರ್ಪಿಸಿದರು.
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಗಣ್ಯರಾದ ಬಿ.ವೈ.ವಿಜಯೇಂದ್ರ ಮತ್ತಿತರನ್ನು ಭೇಟಿ ಆಗಿ ಧನ್ಯವಾದ ಸಲ್ಲಿಸಿದರು. ಎಚ್.ವಿ.ರಾಜೀವ್ ಅವರು ಮುಖ್ಯಮಂತ್ರಿಗಳನ್ನು ಭೇಟಿಯಾದ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಅಡಗೂರು ಎಚ್.ವಿಶ್ವನಾಥ್, ಮತ್ತಿತರರು ಉಪಸ್ಥಿತರಿದ್ದರು


Share