ಕೊರೋನಾ ಕಡಿವಾಣಕ್ಕೆ ಮುಖ್ಯಮಂತ್ರಿಗಳ ನಿರ್ಣಯ ಏನು………

830
Share

1.ಜುಲೈ ಐದರಿಂದ ಮುಂದಿನ ಆದೇಶದವರೆಗೆ ಭಾನುವಾರ ರಾಜ್ಯದ್ಯಂತ ಲಾಕ್ ಡೌನ್ ಮಾಡಲಾಗುವುದು.

 1. ಜುಲೈ ಹತ್ತರಿಂದ ತಿಂಗಳಕಾಲ ರಜೆ ಇರುವ ಎರಡನೇ ಹಾಗೂ ನಾಲ್ಕನೇ ಶನಿವಾರ ಜೊತೆಗೆ ಉಳಿದ ಶನಿವಾರದಂದು ಎಲ್ಲಾ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಎಲ್ಲಾ ಕಚೇರಿಗಳಿಗೆ ರಜೆ ಘೋಷಿಸಲು ತೀರ್ಮಾನಿಸಲಾಗಿದೆ.
 2. ಪ್ರತಿದಿನ 9:00 ಗಂಟೆಯಿಂದ ಬೆಳಗ್ಗೆ 5:00 ಗಂಟೆವರೆಗೆ ಈಗಾಗಲೇ ಇರುವ ಕರ್ಫ್ಯೂ ಅವಧಿಯ ಬದಲಾಗಿ ರಾತ್ರಿ 8:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ ಕರ್ಫ್ಯೂ ಅವಧಿ ಬದಲಾಯಿಸಲು ತೀರ್ಮಾನಿಸಲಾಗಿದೆ. ಇದು ಸೋಮವಾರದಿಂದ ಜಾರಿಯಾಗಲಿದೆ.
 3. ಬೆಂಗಳೂರಿನಲ್ಲಿರುವ ಬೃಹತ್ ಹೋಲ್ಸೇಲ್ ತರಕಾರಿ ಮಾರುಕಟ್ಟೆಗಳಲ್ಲಿ ಆಗುವ ಜನದಟ್ಟಣೆಯನ್ನು ತಪ್ಪಿಸವ ಉದ್ದೇಶದಿಂದ ಹೆಚ್ಚಿನ ಹೋಲ್ಸೇಲ್ ತರಕಾರಿ ಮಾರುಕಟ್ಟೆಗಳನ್ನು ತೆರೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚಿಸಲಾಯಿತು.
 4. ಕೋವಿಡ್ 19 ಸೋಂಕಿತ ರೋಗಿಗಳನ್ನು ಶೀಘ್ರವಾಗಿ ಕೋವಿಡ್ ಆಸ್ಪತ್ರೆಗಳಿಗೆ ಸೇರಿಸಲು ತಂತ್ರಾಂಶ ಜಾರಿಗೊಳಿಸಲಾಗುವುದು.
 5. ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತ ವ್ಯಕ್ತಿಗಳನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ ಗಳನ್ನು 250ಕ್ಕೂ ಹೆಚ್ಚು ಮತ್ತು ಕೊವಿಡ್ನಿಂದ ಮೃತರ ದೇಹಗಳನ್ನು ಸಾಗಿಸಲು ಪ್ರತ್ಯೇಕ ಅಂಬುಲೆನ್ಸ್ ವ್ಯವಸ್ಥೆ ಮಾಡಲಾಗುವುದು. ಆಂಬುಲೆನ್ಸ್ ಇರುವ ಸ್ಥಳಗಳನ್ನು ಗುರುತಿಸಲು ಮತ್ತು ಅವುಗಳ ಚಲನವಲನಗಳ ಸಲುವಾಗಿ ಪೊಲೀಸ್ ಕಂಟ್ರೋಲ್ ರೂಂ ವೈರ್ಲೆಸ್ ಸೇವೆಯನ್ನು ಬಳಸಿಕೊಳ್ಳಲು ಸೂಚಿಸಲಾಗಿದೆ.
 6. ಕೋವಿಡ್19ರ ನಿಯಂತ್ರಣದಲ್ಲಿ ಕೆಲಸ ಮಾಡುವ ಎಲ್ಲಾ ನೋಡಲ್ ಅಧಿಕಾರಿಗಳ ವಿವರಗಳನ್ನು ಪತ್ರಿಕೆಗಳ ಜಾಹೀರಾತು ಮೂಲಕ ಸಾರ್ವಜನಿಕರಿಗೆ ಪ್ರಚುರಪಡಿಸಲು ಕ್ರಮಕೈಗೊಳ್ಳಲು ಸೂಚಿಸಲಾಗಿದೆ.
 7. ಬಿಬಿಎಂಪಿ ಕೇಂದ್ರ ಕಚೇರಿ ಹಾಗೂ ಆಯುಕ್ತರ ಮೇಲೆ ಇರುವ ಕೆಲಸದ ಹೊರೆಯನ್ನು ಕಡಿಮೆಗೊಳಿಸಲು ಬಿಬಿಎಂಪಿ ಅಲ್ಲಿನ 8 ವಲಯಗಳ ಜಂಟಿ ಆಯುಕ್ತರಿಗೆ ಹೆಚ್ಚಿನ ಜವಾಬ್ದಾರಿ ಹಾಗೂ ಕೆಲಸಗಳನ್ನು ನೀಡಲು ಮತ್ತು ಅವರ ಜೊತೆಗೆ ಕೆಲಸ ಮಾಡಲು ಕೆಎಎಸ್ ಅಧಿಕಾರಿಗಳನ್ನು ನಿಯೋಜಿಸಲು ತೀರ್ಮಾನಿಸಲಾಯಿತು.
 8. ವೈದ್ಯರ ಕೊರತೆ ನೀಗಿಸಲು ಕಾರ್ಮಿಕ ಇಲಾಖೆಯಿಂದ ನೇಮಕವಾಗಿರುವ 180 AASI ವೈದ್ಯರನ್ನು ಕೋವಿಡ್ ಕರ್ತವ್ಯಕ್ಕೆ ಬೆಳೆಸಿಕೊಳ್ಳಲು ಮತ್ತು ಪರೀಕ್ಷಾರ್ಥಿ ತಹಶಿಲ್ದಾರ್ಗಳನ್ನು ಕೋವಿಡ್ ಆಸ್ಪತ್ರೆಗಳು/ಕೇರ್ ಸೆಂಟರ್ ಗಳಿಗೆ ನೋಡಲ್ ಅಧಿಕಾರಿಗಳನ್ನು ಆಗಿ ಹಾಕಲು ಸೂಚಿಸಲಾಯಿತು.
 9. ಬೆಂಗಳೂರಿನಲ್ಲಿ ಲಭ್ಯವಿರುವ ಕಲ್ಯಾಣಮಂಟಪಗಳು,ಹಾಸ್ಟೆಲ್ಗಳು ಹಾಗೂ ಇನ್ನಿತರೆ ಸಂಸ್ಥೆಗಳನ್ನು ಕೋವಿಂದ್ ಕೇರ್ ಸೆಂಟರ್ ಗಳಿಗೆ ಮೀಸಲಿಡಲು ಹಾಗೂ ರೈಲ್ವೆ ಇಲಾಖೆಯಿಂದ ಬೆಡ್ ಗಳ ಕೋಚ್ ಪಡೆಯಲು ಅವಶ್ಯ ಕ್ರಮ ಜರುಗಿಸಲು ಸೂಚಿಸಲಾಯಿತು.
 10. ಕೋವಿಡ್ ನಿಂದ ಮೃತರಾದವರ ಅಂತ್ಯಕ್ರಿಯೆಯನ್ನು ನಡೆಸಲು ಪ್ರತ್ಯೇಕ ತಂಡಗಳನ್ನು ರಚಿಸುವುದು ಹಾಗೂ ಅಂತ್ಯಕ್ರಿಯೆಯ ಸಲುವಾಗಿ ಇನ್ನೂ ಹೆಚ್ಚಿನ ಜಾಗಗಳನ್ನು ಗುರುತಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಸೂಚಿಸಲು ತೀರ್ಮಾನಿಸಲಾಯಿತು.
 11. ಮೆಡಿಕಲ್ ಕಾಲೇಜ್ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್ಗಳ ಪೈಕಿ ಶೇ.50 ರಷ್ಟು ಕೋವಿಡ್ ರೋಗಿಗಳಿಗೆ ಮೀಸಲಿಡಲು ಬಿಬಿಎಂಪಿ ಆಯುಕ್ತರಿಗೆ ಸೂಚಿಸಲಾಯಿತು.

Share