ಮೂರು ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಪ್ಪಣ್ಣ ಅವರನ್ನು ಎಂಎಲ್ಸಿ ಮಾಡಬೇಕು ಎಂದು ಒತ್ತಾಯ

371
Share

ಮೈಸೂರು .ಕರ್ನಾಟಕದ ರಾಜ್ಯದಲ್ಲಿ ವಾಲ್ಮೀಕಿ ಸಂಘ ಸುಮಾರು 60 ಲಕ್ಷ ಜನಸಂಖ್ಯೆಯನ್ನು ಹೊಂದಿದ್ದು ಬಹುತೇಕ ನಾಯಕ ಸಮಾಜದವರು ಬಿಜೆಪಿ ಪಕ್ಷದಲ್ಲಿ ಇರುತ್ತಾರೆ ಆದರೆ ನಮ್ಮ ಸಮಾಜದಿಂದ ಒಬ್ಬರನ್ನು ಕೂಡ ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವುದಿಲ್ಲ ಎಂದು ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ರಾಜ್ಯ ಅಧ್ಯಕ್ಷರಾದ ದೇವರಾಜ್ ಅವರು ತಿಳಿಸಿದರು ಅವರು ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಮೂರು ಬಾರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ ಮತ್ತು ಬಿಜೆಪಿ ಸಂಘಟನೆಯಲ್ಲಿ ರಾಜ್ಯವ್ಯಾಪಿ ತೊಡಗಿಸಿಕೊಂಡಿದ್ದು ನಮ್ಮ ಸಮುದಾಯದ ಮತ್ತು ಸೆಳೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಹೀಗಾಗಿ ವಿಧಾನ ಪರಿಷತ್ ಸದಸ್ಯರ ನೇಮಕ ಮಾಡುವ ಸಂದರ್ಭದಲ್ಲಿ ನಮ್ಮ ಸಮಾಜದ ಪರವಾಗಿ ಅಪ್ಪಣ್ಣ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಿ ನಮ್ಮ ಜನಾಂಗಕ್ಕೆ ಪ್ರಾತಿನಿಧ್ಯವನ್ನು ಕಲ್ಪಿಸಿಕೊಡಬೇಕೆಂದು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಮನವಿ ಮಾಡಿದರು


Share