ಮೈಸೂರು ಮೈಸೂರು ನಗರದಲ್ಲಿ ಇಂದು ಕೊರೊನ 2 ಪಾಸಿಟಿವ್ ಕೇಸ್ ಪತ್ತೆಯಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ ಅವರು ಪ್ರಕಟಿಸಿದ್ದಾರೆ .
ಓರ್ವ ವ್ಯಕ್ತಿ ಪ್ರಾರ್ಥಮಿಕ ಸಂಪರ್ಕ ಹೊಂದಿರುವ ಹಾಗೂ ಮತ್ತೋರ್ವ ವ್ಯಕ್ತಿ ಮಹಾರಾಷ್ಟ್ರ ದಿ0ದ ಬಂದಿರುವವರು ಎಂದು ತಿಳಿಸಿದ್ದಾರೆ.
ಒಟ್ಟು 11 ರೋಗಿಗಳು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಮೈಸೂರು ನಗರದಲ್ಲಿ ಇನ್ನು ಮುಂದೆ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾದರೆ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಜಿಲ್ಲಾಧಿಕಾರಿಗಳು ಬೆಳಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ ಮೈಸೂರು ನಗರದಲ್ಲಿ ದಿನೇ ದಿನೇ ಸಂಚಾರ ಹೆಚ್ಚಾಗುತ್ತಿದೆ ಹಾಗಾಗಿ ಸಂಖ್ಯೆ ಹೆಚ್ಚಾಗಬಹುದು ಎಂದು ತಿಳಿಸಿದ ಅವರು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅವರು ತಿಳಿಸಿದ್ದಾರೆ.