ಮೈಸೂರು,
ಮೈಸೂರು ನಗರದಲ್ಲಿ ಇಂದು ಸಂಜೆ ವೇಳೆಗೆ ನಾಲ್ಕು ಕೊರೋನಾ ಹೊಸ ಕೇಸ್ ಧೃಡ ವಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ ಅವರು ತಿಳಿಸಿದ್ದಾರೆ .ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ಕೊರೊನಾ ಸೋಂಕು ಇರುವ ವ್ಯಕ್ತಿ ವಾಸವಾಗಿರುವ ಸುತ್ತಮುತ್ತ ಮನೆಗಳನ್ನು ಮಾತ್ರ ಕಂಟೋನ್ಮೆಂಟ್ ಮಾಡಲಾಗುವುದು ಎಂದು ಅವರು ತಿಳಿಸಿದರು.
. ನಂಜನಗೂಡು ನೀಲಕಂಠ ನಗರದಲ್ಲಿ ಎಲ್ಲರಿಗೂ ತಪಾಸಣೆ ಮಾಡಲಾಗಿದೆ ವರದಿ ಬರಬೇಕು ಎಂದು ಅವರು ತಿಳಿಸಿದ್ದಾರೆ.
ಮೈಸೂರು ನಗರದ ಸರಸ್ವತಿಪುರಂನಲ್ಲಿರುವ ಸಿಂಡಿಕೇಟ್ ಬ್ಯಾಂಕ್ ನೌಕರರು ಒಬ್ಬರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬ್ಯಾಂಕನ್ನು ಇ0ದು ಬೆಳಗ್ಗೆಯಿಂದ ಲಾಕ್ಡೌನ್ ಮಾಡಲಾಯಿತು ಎಂದು ಹೇಳಲಾಗಿದೆ.
ಸದರಿ ವ್ಯಕ್ತಿ ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಮನೆ ಬಳಿ ವಾಸವಾಗಿರುವ ವಿಶ್ವಸನೀಯ ಮೂಲಗಳಿಂದ ತಿಳಿದುಬಂದಿದೆ. ಮತ್ತಿಬ್ಬರು ಇಟ್ಟಿಗೆ ಗೂಡಿನ ಅಜ್ಜಿ ಮತ್ತು ಮೊಮ್ಮಗ ಎಂದು ಗುರುತಿಸಲಾಗಿದೆ. ಮತ್ತೊಬ್ಬರ ವ್ಯಕ್ತಿವಿವರ ಸದ್ಯಕ್ಕೆ ತಿಳಿದುಬಂದಿಲ್ಲ.