ಮೈಸೂರುನಲ್ಲಿ -ವಿಕ್ರಂ ಲ್ಯಾಂಡರ್ ಯಶಸ್ವಿಗೆ ಸರ್ವಸಿದ್ಧ ಯಾಗ

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘಟನೆ ಹಾಗೂ ಅರ್ಚಕರ ಸಂಘದ ವತಿಯಿಂದ ವಿಕ್ರಂ ಲ್ಯಾಂಡರ್ ಯಶಸ್ವಿಗೆ ಸರ್ವಸಿದ್ಧ ಯಾಗ

ಮೈಸೂರು: ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘಟನೆ ಹಾಗೂ ಅರ್ಚಕರ ಸಂಘದ ವತಿಯಿಂದ ಇರ್ವಿನ್ ರಸ್ತೆಯಲ್ಲಿರುವ ಪುರಾತನ ದೇವಸ್ಥಾನವಾದ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಕ್ರಂ ಲ್ಯಾಂಡರ್ ಯಶಸ್ವಿಗೆ ಸರ್ವಸಿದ್ಧ ಯಾಗ ವನ್ನು ಅರ್ಚಕರ ಸಂಘದ ಅಧ್ಯಕ್ಷರು ಹಾಗೂ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಕೃಷ್ಣಮೂರ್ತಿ ರವರ ನೇತೃತ್ವದಲ್ಲಿ ಯಾಗವನ್ನು ನೆರವೇರಿಸಲಾಯಿತು

ನಂತರ ಮಾತನಾಡಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಈ ಅಪೂರ್ವ ಸಾಧನೆಗೆ ಕಾರಣರಾದ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ, ಇಸ್ರೋ ಅಧ್ಯಕ್ಷರಿಗೆ ಹಾಗೂ ವಿಜ್ಞಾನಿಗಳಿಗೆ ದೇವರು ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಲಾಗುವುದು ,
ಚಂದ್ರಯಾನ 3ರ ಚಂದ್ರನ ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಸುರಕ್ಷಿತವಾಗಿ ಇಳಿಯಲಿ ಈ ಯೋಜನೆಯ ಇತಿಹಾಸ ನಿರ್ಮಿಸಲಿ ರಾಷ್ಟ್ರದ ಹೆಸರು ಪ್ರಪಂಚದಲ್ಲಿ ಅಗ್ರಗಣ್ಯವಾಗಲಿ ಎಂದು ಆಶಿಸಿದರು

ಇದೇ ಸಂದರ್ಭದಲ್ಲಿ ಅರ್ಚಕರ ಸಂಘದ ಅಧ್ಯಕ್ಷರಾದ ವಿದ್ವಂತ್ ಕೃಷ್ಣಮೂರ್ತಿ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್, ಮೈಸೂರು ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಸುಚಿಂದ್ರ,, ಆನಂದ್, ರಾಕೇಶ್, ಹಾಗೂ ಇನ್ನಿತರರು ಭಾಗವಹಿಸಿದ್ದರು