ಮೈಸೂರು ಅನಧಿಕೃತವಾಗಿ ನಿರ್ಮಿಸಿದ್ದ ಗುಡಿಸಲು, ಶೆಡ್‍ಗಳ ತೆರವು

Shareಮೈಸೂರು, .02.(ಕರ್ಸ್ಧೀನ ಪಡಿಸಿಕೊಳ್ಳಲಾಗಿದ್ದ ಮೈಸೂರು ತಾಲ್ಲೂಕಿನ ಲಲಿತಾದ್ರಿಪುರ ಗ್ರಾಮ ಸರ್ವೆ ನಂ 16/1, 16/2, 16/3, 17, 18/2, 18/3 ಮತ್ತು 18/4ರಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ 15ಕ್ಕೂ ಹೆಚ್ಚು ಸಣ್ಣ ಗುಡಿಸಲು ಮತ್ತು ಶೆಡ್‍ಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ತೆರವುಗೊಳಿಸಿದೆ.
ಲಲಿತಾದ್ರಿಪುರ ಗ್ರಾಮದ ಒಟ್ಟು 15-19 ಎಕರೆ ಭೂಮಿಯನ್ನು ಭೂಸ್ವಾಧೀನಪಡಿಸಿಕೊಂಡು ನಗರ ಆಶ್ರಯ ಮನೆಗಳನ್ನು ನಿರ್ಮಿಸಲು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಹಸ್ತಾಂತರಿಸಲಾಗಿತ್ತು. ಆದರೆ ಭೂಸ್ವಾಧೀನ ಪಡಿಸಿಕೊಳ್ಳಲಾಗಿದ್ದ ಸರ್ವೆ ನಂಬರ್‍ಗಳಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಶೆಡ್, ಗುಡಿಸಲನ್ನು ತೆರವುಗೊಳಿಸುವ ಮೂಲಕ 10 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ರಕ್ಷಿಸಿ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಉದ್ದೇಶಿತ ನಗರ ಆಶ್ರಯ ಮನೆಗಳನ್ನು ನಿರ್ಮಿಸುವ ಸಂಬಂಧ ಮೈಸೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಯಿತು.
ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಹಾಗೂ ಸಿಬ್ಬಂದಿಗಳ ಭದ್ರತೆಯೊಂದಿಗೆ ತೆರವು ಮಾಡಲಾಗಿದ್ದು, ಈ ಸಂದರ್ಭದಲ್ಲಿ ಮುಡಾ ಆಯುಕ್ತರಾದ ಡಾ.ಡಿ.ಬಿ.ನಟೇಶ್, ಅಧೀಕ್ಷಕ ಅಭಿಯಂತರಾದ ಶಂಕರ್, ಕಾರ್ಯಪಾಲಕ ಅಭಿಯಂತರುಗಳು, ಎಲ್ಲಾ ವಲಯ ಅಧಿಕಾರಿಗಳು, ಸಂಬಂಧಪಟ್ಟ ಸಹಾಯಕ/ಕಿರಿಯ ಅಭಿಯಂತರುಗಳು  ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಡಾ.ಡಿ.ಬಿ.ನಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share