ಮೈಸೂರು-ಆ. 19 ರ೦ದು ಕೃಷ್ಣ ಜಯಂತಿ

168
Share

ಆ. 19 ಕೃಷ್ಣ ಜಯಂತಿ
ಮೈಸೂರು. :- ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕೃಷ್ಣ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಶ್ರೀ ಕೃಷ್ಣ ಜಯಂತಿ-2022 ಅನ್ನು 2022ರ ಆಗಸ್ಟ್ 19 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕಲಾಮಂದಿರದ ಕಿರುರಂಗಮAದಿರದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಮಾಡುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಮರಾಜ ಕ್ಷೇತ್ರದ ವಿಧಾನಸಭಾ ಸದಸ್ಯರಾದ ಎಲ್.ನಾಗೇಂದ್ರ ಅವರು ವಹಿಸುವರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಸುನಂದಾ ಪಾಲನೇತ್ರ, ಉಪಪೌರರಾದ ಅನ್ವರ್‌ಬೇಗ್, ಮೈಸೂರು ಲೋಕಸಭಾ ಸದಸ್ಯರಾದ ಪ್ರತಾಪ್‌ಸಿಂಹ, ಚಾಮರಾಜನಗರ ಕ್ಷೇತ್ರದ ಲೋಕಸಭಾ ಸದಸ್ಯರಾದ ವಿ.ಶ್ರೀನಿವಾಸ್ ಪ್ರಸಾದ್, ಮಂಡ್ಯ ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್, ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು, ನಿಗಮ ಮಂಡಳಿಯ ಅಧ್ಯಕ್ಷರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಂ.ಡಿ.ಸುದರ್ಶನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share