ಮೈಸೂರು ಖಾಸಗಿ ಆಸ್ಪತ್ರೆಗಳಿಗೆ ಡಿಸಿ ಖಡಕ್ ಆದೇಶ.

Share

ಕೊವೀಡ್-19; ಖಾಸಗಿ ಆಸ್ಪತ್ರೆಗಳಲ್ಲಿ ಕಡ್ಡಾಯ ಚಿಕಿತ್ಸೆಗೆ ಜಿಲ್ಲಾಧಿಕಾರಿಗಳ ಆದೇಶ

ಮೈಸೂರು,ಜುಲೈ,14.(ಕರ್ನಾಟಕ ವಾರ್ತೆ):- ಕೋವಿಡ್-19 ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿರುವ ಕೋವಿಡ್ ಕೇರ್ ಸೆಂಟರ್, ಜಿಲ್ಲಾ ಆಸ್ಪತ್ರೆ ಹಾಗೂ ಕೋವಿಡ್‍-19 ಗೆ ಸಂಬಂಧಿಸಿದಂತೆ ಸರ್ಕಾರದ ವತಿಯಿಂದ ಸ್ಥಾಪಿಸಲ್ಪಟ್ಟ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ವ್ಯಕ್ತಿಗಳನ್ನು ಯಾವುದೇ ಖಾಸಗಿ ಆಸ್ಪತ್ರೆಗಳಿಗೆ ಪ್ರವೇಶ ನೀಡಿ ಚಿಕಿತ್ಸೆಗೊಳಪಡಿಸಲು ಸೂಚಿಸಿದ್ದಲ್ಲಿ ಸಂಬಂಧಪಟ್ಟ ಖಾಸಗಿ ಆಸ್ಪತ್ರೆಗಳು ಸೋಂಕಿತ ವ್ಯಕ್ತಿಯನ್ನು ಕಡ್ಡಾಯವಾಗಿ ದಾಖಲಿಸಿಕೊಂಡು ಚಿಕಿತ್ಸೆಗೊಳಪಡಿಸುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಆದೇಶಿಸಿದ್ದಾರೆ.

ಈ ಆದೇಶವನ್ನು ಕ್ರಮವಹಿಸಲು ನಿರಾಕರಿಸಿದ್ದಲ್ಲಿ Karnataka private Medical Establishments Act ಪ್ರಕಾರ ತಕ್ಷಣ ಸೂಕ್ತ ಕ್ರಮವಹಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಆದೇಶವನ್ನು ಕ್ರಮವಹಿಸಲು ನಿರಾಕರಿಸಿದ್ದಲ್ಲಿ Karnataka private Medical Establishments Act ಪ್ರಕಾರ ತಕ್ಷಣ ಸೂಕ್ತ ಕ್ರಮವಹಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share