ಮೈಸೂರು ಜಿಲ್ಲಾ ಆಡಳಿತ-*ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ

98
Share

*ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ*

ಮೈಸೂರು  ಮೇ.12: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು (ಮೇ.12) ಬೆಳಿಗ್ಗೆ ನಗರದ ಕರ್ನಾಟಕ ಕಲಾಮಂದಿರ ಆವರಣದ ಸುಚಿತ್ರಾ ಆರ್ಟ್ ಗ್ಯಾಲರಿಯಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಸುದರ್ಶನ್ ಅವರು ಶ್ರೀ ಶಂಕರಾಚಾರ್ಯರ ಅವರ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುಷ್ಪಾರ್ಚಣೆ ಸಲ್ಲಿಸಿ, ನಮಿಸಿದರು.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಸುದರ್ಶನ್ ಹಾಗೂ ಸಮುದಾಯದ ಮುಖಂಡರು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

 


Share