ಮೈಸೂರು – ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Share

*ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ*

ಮೈಸೂರು – ತಹಶೀಲ್ದಾರ್ ಕಚೇರಿಗೆ ಇಂದು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ತಾಲ್ಲೂಕು ಆಡಳಿತದ ಕಾರ್ಯಗಳ ಪ್ರಗತಿ ಪರಿಶೀಲಿಸಿ, ಕುಂದುಕೊರತೆಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಆಧಾರ್ ನೋಂದಣಿ, ಪಹಣಿ, ಜಾತಿ, ಆದಾಯ ಪ್ರಮಾಣ ಪತ್ರ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿ ಮೂಲ ಸೌಕರ್ಯಗಳ ಕುರಿತು ಮಾಹಿತಿ ಪಡೆದರು.

ತಾಲ್ಲೂಕು ಆಡಳಿತದಲ್ಲಿನ ಸಾರ್ವಜನಿಕರಿಗೆ ಒದಗಿಸುವ ಸೇವೆ, ಆಡಳಿತದ ಕಾರ್ಯ ವೈಖರಿಯನ್ನು ಪರಿಶೀಲನೆ ನಡೆಸಿ ಅದರ ಸುಧಾರಣೆಗೆ ಅಗತ್ಯ ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ಜಿಲ್ಲಾಧಿಕಾರಿಗಳು ನೀಡಿದರು.

ಮೈಸೂರು ತಹಶೀಲ್ದಾರ್ ಮಹೇಶ್ ಸೇರಿದಂತೆ ಕಚೇರಿಯ ಸಿಬ್ಬಂದಿಗಳು ಹಾಜರಿದ್ದರು.

 


Share