ಮೈಸೂರು, ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ.

Share

ವಿದ್ಯುತ್ ವ್ಯತ್ಯಯ
ಮೈಸೂರು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಕುವೆಂಪುನಗರ ಉಪವಿಭಾಗದ 66/11 ಕೆ.ವಿ ಆರ್.ಕೆ.ನಗರ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ಟಿ.ಕೆ. ವಿದ್ಯುತ್ ಮಾರ್ಗದಲ್ಲಿ ಅಕ್ಟೋಬರ್ 8 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಎಲ್ & ಟಿ ರವರು ಭೂಗತ ಕೇಬಲ್ ಅಳವಡಿಸುವ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ಉದಯರವಿ ರಸ್ತೆ ಸುತ್ತಮುತ್ತ, ವಿದ್ಯಾವರ್ದಕ ಶಾಲೆ ಸುತ್ತಮುತ್ತ, ಪಂಚಮಂತ್ರ ರಸ್ತೆ, ಪ್ರಮತಿ ಶಾಲೆ ಸುತ್ತಮುತ್ತ, ವುಡ್‍ಲ್ಯಾಂಡ್ ಶೋರೂಂ ಸುತ್ತಮುತ್ತ, ಸಾಮ್ರಾಟ್ ಹೋಟೆಲ್ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯ
ಮೈಸೂರು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ 66/11 ಕೆ.ವಿ. ಎಫ್.ಟಿ.ಎಸ್ ಆರ್.ಕೆ.ನಗರ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ಆರ್.ಆರ್. ಫೀಡರ್‍ನಲ್ಲಿ ಅಕ್ಟೋಬರ್ 07 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ತುರ್ತು ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ಅಂದು ಮಸೀದಿ, ಲಷ್ಕರ್ ಮೊಹಲ್ಲಾ, ಪೈವ್ ಲೈಟ್ ವೃತ್ತ, ಸಾವಿತ್ರಿ ಶಾಲೆ, ಮೀನಾ ಬಜಾರ್, ಕೆ.ಆರ್. ಪಾರ್ಕ್, ಕೆ.ಟಿ. ಸ್ಟ್ರೀಟ್, ಸಂಚಾರಿ ಪೊಲೀಸ್ ಠಾಣೆ, ವೀರನಗೆರೆ, ಸೆಂಟ್ ಫಿಲೋಮಿನಾ ಚರ್ಚ್, ಮಿಲಾದ್ ಪಾರ್ಕ್ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಎನ್.ಆರ್.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಮೈಸೂರು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ 66/11 ಕೆ.ವಿ ದೇವನೂರು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ವಿದ್ಯುತ್ ಮಾರ್ಗದಲ್ಲಿ ಅಕ್ಟೋಬರ್ 8 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕ.ವಿ.ಪ್ರ.ನಿ.ನಿ. ವತಿಯಿಂದ ಓ.ಎಲ್.ಟಿ.ಸಿ. ಓವರ್‍ಹಾಲಿಂಗ್ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ರಮ್ಮನಹಳ್ಳಿ, ಕಾಳಿಸಿದ್ದನಹುಂಡಿ, ಹಂಚ್ಯ, ಸಾತಗಳ್ಳಿ, ಗಳಿಗರಹುಂಡಿ, ನೆಹರು ನಗರ, ಸಾತಗಳ್ಳಿ ಗ್ರಾಮ, ಡಿ.ಟಿ.ಎಸ್.ರಾವ್ ನಗರ, ವಿಟಿಯೂ ಕಾಲೇಜು ಎದುರು, ಸನ್ ಪ್ಯೂರ್ ಬಡಾವಣೆ, ಸಾತಗಳ್ಳಿ ಬಿ ಜೋನ್, ವಿಟಿಯೂ ಕಾಲೇಜು, ಭಾರತ್ ನಗರ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಎನ್.ಆರ್.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Share