ಶುಕ್ರವಾರದಿಂದ ಮೈಸೂರಿನಲ್ಲಿ ರಾತ್ರಿ ಅವಧಿ ಪರಿಷ್ಕರಣೆ; ಸಂಜೆ 6ರಿಂದ ಬೆಳಿಗ್ಗೆ 5 ರವರೆಗೆ ಕಫ್ರ್ಯೂ: ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು, ಜುಲೈ,01(ಕರ್ನಾಟಕ ವಾರ್ತೆ):- ಮಾಸ್ಕ್ ಹಾಕದೇ ಹೊರಬರುವವರಿಗೆ ದಂಡ ಹಾಗೂ ಸಂಜೆ 6 ಗಂಟೆ ನಂತರ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗುವುದು ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದರು.
ಇಲ್ಲಿನ ನೂತನ ಜಿಲ್ಲಾಧಿಕಾರಿಗಳ ಕಚೇರಿಗಳ ಸಂಕೀರ್ಣದಲ್ಲಿ ಜಿಲ್ಲಾಧಿಕಾರಿಗಳು, ಪೆÇಲೀಸ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ತರಲು ಸಾರ್ವಜನಿಕರ ಸಹಕಾರ ಹಾಗೂ ಜವಾಬ್ದಾರಿ ಸಹ ದೊಡ್ಡದು. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಮಾಸ್ಕ್ ಹಾಕದೇ ಹೊರ ಬರುವುದು ಕಂಡರೆ ಪೆÇಲೀಸರು ಕೂಡ ದಂಡ ಹಾಕಲಿದ್ದಾರೆ. ನಗರ ಪ್ರದೇಶಗಳಲ್ಲಿ ಮಾಸ್ಕ್ ಹಾಕದವರಿಗೆ 200 ರೂಪಾಯಿ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 100 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.
ILI ಮತ್ತು SARI ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಅಂಗಡಿ-ಮುಂಗಟ್ಟುಗಳನ್ನು ಸಂಜೆ 6 ಗಂಟೆ ನಂತರ ಸದ್ಯದ ಮಟ್ಟಿಗೆ ಬಂದ್ ಮಾಡುವ ತೀರ್ಮಾನಕ್ಕೆ ಬರಲಾಗಿದ್ದು, ಶುಕ್ರವಾರದಿಂದ ಮೈಸೂರು ಜಿಲ್ಲೆಯಲ್ಲಿ ಈ ಆದೇಶ ಅನುμÁ್ಠನಕ್ಕೆ ಬರಲಿದೆ ಎಂದು ಸಚಿವರು ತಿಳಿಸಿದರು.
ಎಪಿಎಂಸಿ ಹಾಗೂ ತರಕಾರಿ ಮಾರುಕಟ್ಟೆಯಲ್ಲಿ ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡಿಸಲಾಗುತ್ತದೆ. ಕಾರಣ ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಂದೆಡೆ ಸೇರುವುದರಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
55 ವರ್ಷ ಮೇಲ್ಪಟ್ಟ ಪೆÇಲೀಸರಿಗೆ ಪರೀಕ್ಷೆ: ಪೆÇಲೀಸರು ಹಾಗೂ ಪೌರಕಾರ್ಮಿಕರಲ್ಲಿ 55 ವರ್ಷ ಮೇಲ್ಪಟ್ಟವರ ಮೇಲೆ ಅದರಲ್ಲೂ ಅವರ ಆರೋಗ್ಯದ ಸ್ಥಿತಿ ನೋಡಿಕೊಂಡು ಅವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗೊಳಪಡಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಸಚಿವರು ತಿಳಿಸಿದರು.
15 ದಿನಗಳಲ್ಲಿ ಎಲ್ಲ 42,685 ಆಶಾ ಕಾರ್ಯಕರ್ತೆಯರಿಗೂ ಸಹಾಯಧನ ವಿತರಣೆ: ಆಶಾ ಕಾರ್ಯಕರ್ತೆಯರಿಗೆ ಪ್ರತಿ ಜಿಲ್ಲೆಯಲ್ಲಿ ಸಹಾಯಧನ ನೀಡುವ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲ ಕಡೆ ಅನುದಾನ ನೀಡಲಾಗುತ್ತಿದ್ದು, ಆಯಾ ಕ್ಷೇತ್ರದ ಶಾಸಕರು ವಿತರಣೆ ಮಾಡುತ್ತಾರೆ. ಗ್ರಾಮೀಣ ಭಾಗದಲ್ಲಿ ವಿತರಣೆ ಮಾಡುತ್ತಿಲ್ಲ ಎಂಬುದು ಸುಳ್ಳು. ಅದಕ್ಕೋಸ್ಕರ ಪ್ರತಿ ಜಿಲ್ಲೆಗೆ ನಾನೇ ಖುದ್ದು ಭೇಟಿ ನೀಡಿ ವಿತರಣೆ ಮಾಡುತ್ತಿದ್ದೇನೆ. ಇನ್ನು 15 ದಿನಗಳಲ್ಲಿ ಎಲ್ಲ 42,685 ಆಶಾ ಕಾರ್ಯಕರ್ತೆಯರಿಗೂ ವಿತರಣೆ ಮಾಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
ಇದುವರೆಗೆ ಹೊರ ರಾಜ್ಯದಿಂದ ಸುಮಾರು 4,500 ಜನರು ಜಿಲ್ಲೆಗೆ ಬಂದಿದ್ದಾರೆ. ಈ ಪೈಕಿ ತಮಿಳುನಾಡಿನಿಂದ 1,500, ಕೇರಳದಿಂದ 1,300, ರಾಜಸ್ಥಾನದಿಂದ 750, ಮಹಾರಾಷ್ಟ್ರದಿಂದ 600, ಆಂಧ್ರಪ್ರದೇಶದಿಂದ 600 ಜನರು ಬಂದಿದ್ದಾರೆ.
ಈ ಸಂದರ್ಭದಲ್ಲಿ ಸಂಸದ ಪ್ರತಾಪ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ನಗರ ಪೆÇಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಮೈಸೂರು ಪತ್ರಕರ್ತ ಸಂಘಕ್ಕೆ ವಿಶೇಷ ಕಟ್ಟಡ ಬಗ್ಗೆ ಚರ್ಚಿಸಿ ತೀರ್ಮಾನ: ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು, ಜುಲೈ.01(ಕರ್ನಾಟಕ ವಾರ್ತೆ):- ಮೈಸೂರು ಪತ್ರಕರ್ತರ ಸಂಘಕ್ಕೆ ವಿಶೇಷ ಕಟ್ಟಡ ಹಾಗೂ ಸೌಲಭ್ಯ ಒದಗಿಸಲು ಯಾವ ರೀತಿ ಕ್ರಮ ಕೈಗೊಳ್ಳಬಹುದು ಹಾಗೂ ಮುಂದಿನ ದಿನಗಳಲ್ಲಿ ಎಲ್ಲಿ ಜಾಗ ಸಿಗಬಹುದು ಎಂಬ ನಿಟ್ಟಿನಲ್ಲಿ ಮುಡಾ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಪ್ರಕಟಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಹೇಳಿದರು.
ಪತ್ರಕರ್ತರ ದಿನಾಚರಣೆ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕಟ್ಟಡದಲ್ಲಿ ನೂತನವಾಗಿ ನಿರ್ಮಾಣವಾದ ವ್ಯಾಯಾಮ ಶಾಲೆ ಉದ್ಘಾಟಿಸಿ ಮಾತನಾಡಿದರು.
ಬೆಂಗಳೂರು ನಗರದಲ್ಲಿ ಒಟ್ಟು 400 ನಿವೇಶನವನ್ನು ನಿರ್ಮಿಸಿ, ಇದರಲ್ಲಿ 180 ನಿವೇಶನವನ್ನು ಪತ್ರಕರ್ತರಿಗೆ ನೀಡಲಾಗಿದೆ. ಮೈಸೂರಿನಲ್ಲಿ ಪತ್ರಕರ್ತರ ಗೃಹನಿರ್ಮಾಣ ಸಂಘದ ಸದಸ್ಯರಿಗೆ ರಿಯಾಯಿತಿ ದರದಲ್ಲಿ ನಿವೇಶನ ಕೊಡಿಸುವ ಬಗ್ಗೆ ಸಭೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪತ್ರಿಕಾರಂಗದಲ್ಲಿ ಗಣನೀಯ ಕೆಲಸ ಮಾಡಿದವರನ್ನು ಗುರುತಿಸಿ ಸನ್ಮಾನ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಕೋವಿಡ್-19 ಪಸರಿಸುತ್ತಿರುವ ಸಮಯದಲ್ಲಿ ಸಾರ್ವಜನಿಕರಿಗೆ ಸರ್ಕಾರವು ಕೈಗೊಳ್ಳುವ ಆದೇಶಗಳನ್ನು ತಲುಪಿಸಿ ಕೋವಿಡ್ ತಡೆಗಟ್ಟುವಲ್ಲಿ ಪತ್ರಕರ್ತರು ಯಶಸ್ವಿಯಾಗಿದ್ದಾರೆ ಎಂದರು.
ಪತ್ರಿಕೋದ್ಯಮದಲ್ಲಿ ಸರ್ಕಾರಕ್ಕೆ ಒಳ್ಳೆಯ ಹೆಸರನ್ನು ತರುವಂತೆ ಮಾಡಬಹುದು. ಪತ್ರಿಕೆಗಳಲ್ಲಿ ಸಹಕಾರ ಇಲಾಖೆಗೆ ಸಂಬಂಧಿಸಿದಂತೆ ಯಾವುದೇ ವರದಿಗಳು ಬಂದರೂ ಅದಕ್ಕೆ ಸ್ಪಂದಿಸುವ ಕೆಲಸವನ್ನು ಇಲಾಖೆ ಮಾಡಲಿದೆ ಎಂದು ಸಚಿವರು ಭರವಸೆ ನೀಡಿದರು.
ಸಂಸದರಾದ ಪ್ರತಾಪ್ ಸಿಂಹ ಅವರು ಬದ್ಧತೆಯುಳ್ಳ ರಾಜಕಾರಣಿ. ಅವರು ಸಹ ಪತ್ರಕರ್ತರ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದಿಂದ ಬರುವ ಯೋಜನೆಗಳನ್ನು ಮೈಸೂರಿಗೆ ತರುವಲ್ಲಿ ಉತ್ತಮ ಕೆಲಸವನ್ನು ಮಾಡಿದ್ದಾರೆ.
ಕಷ್ಟ ಕಾಲದಲ್ಲಿ ಮೈಸೂರಿನ ಜನತೆಗೆ ಆಹಾರ ಕಿಟ್ ನೀಡಿದ ಸುತ್ತೂರು ಶ್ರೀಗಳ ಕಾರ್ಯ ಅಪಾರ. ಅವರು ತಮ್ಮ ಶ್ರೀಮಠದಿಂದ ಎಲ್ಲ ರೀತಿಯ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದಾರೆ. ಅವರಿಗೆ ನನ್ನ ಧನ್ಯವಾದಗಳು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ ಸಿಂಹ, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಪಿ.ವಾಸು, ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಹಿರಿಯ ಪತ್ರಕರ್ತರಾದ ಮಹದೇವಪ್ಪ, ಪದ್ಮಶ್ರೀ ಪುರಸ್ಕøತ ದಂಪತಿಗಳಾದ ಸಂಪತ್ ಕುಮಾರ್ ಹಾಗೂ ಜಯಲಕ್ಷ್ಮಿ, ಇನ್ನಿತರರು ಉಪಸ್ಥಿತರಿದ್ದರು.
ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಸಭೆ
ಮೈಸೂರು, ಜುಲೈ.01(ಕರ್ನಾಟಕ ವಾರ್ತೆ):- ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಅನುಷ್ಠಾನಗೊಳಿಸುವುದು, ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳ ಪರಿಶೀಲನೆ ಹಾಗೂ ನಗರೊತ್ಥಾನ ಯೋಜನೆ ಅನುಷ್ಠಾನ ಕುರಿತು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಜನಪ್ರತಿನಿಧಿಗಳೊಂದಿಗೆ ಬುಧವಾರ ಅಧಿಕಾರಿಗಳ ಸಭೆ ನಡೆಸಿದರು.
ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಗುರುದತ್ ಹೆಗಡೆ ಅವರು ಮಾತನಾಡಿ, ಎಂ.ಜಿ.ಎನ್.ವಿ.ವೈ ಯೋಜನೆಯಡಿ ಹಂಚಿಕೆಯಾಗಿರುವ 150 ಕೋಟಿ ರೂ.ಗಳಲ್ಲಿ 50.76 ಕೋಟಿ ರೂ.ಗಳನ್ನು ಜೆಎನ್ ನರ್ಮ್ ಯೋಜನೆ ಅನ್ವಯ ಕೈಗೆತ್ತಿಕೊಳ್ಳಲಾದ ಮೈಸೂರಿನ ನೀರು ಪೂರೈಕೆ ವಿತರಣಾ ವ್ಯವಸ್ಥೆ ಪುನರ್ ರಚನೆಯ ಕಾರಣ ಪರಿಷ್ಕøತಗೊಂಡ 229.93 ಕೋಟಿ ರೂ. ಅಂದಾಜು ಪಟ್ಟಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತಿದೆ. ಎಂ.ಜಿ.ಎನ್.ವಿ.ವೈ ಯೋಜನೆಯಡಿ ಮೈಸೂರು ಮಹಾ ನಗರ ಪಾಲಿಕೆಗೆ 99.24 ಕೋಟಿ ರೂ. ಗಳು ಮಾತ್ರ ಲಭ್ಯವಿರುತ್ತದೆ ಎಂದು ತಿಳಿಸಿದರು.
ನಗರೋತ್ಥಾನ ಯೋಜನೆಯಡಿ 100 ಕೋಟಿ ರೂ. ಹಂತ-2 ಮತ್ತು ಹಂತ-3 ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ವಿಶೇಷ ಅನುದಾನದಲ್ಲಿ ಕಾಮಗಾರಿ ಪೂರ್ಣಗೊಂಡು ಉಳಿಕೆಯಾಗಿರುವ ಅನುದಾನವನ್ನು ಅಮೃತ್ ಯೋಜನೆಗೆ ಮಹಾನಗರ ಪಾಲಿಕೆಯ ವಂತಿಕೆಯನ್ನು ವರ್ಗಾಯಿಸುವ ಬಗ್ಗೆ ಸಚಿವರು ಹಾಗೂ ಶಾಸಕರೊಂದಿಗೆ ಚರ್ಚಿಸಿದರು.
ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಸಭೆಯಲ್ಲಿ ಕುಡಿಯುವ ನೀರು, ಒಳಚರಂಡಿ, ರಸ್ತೆ, ಪಾದಚಾರಿ ಮಾರ್ಗ, ಮಳೆನೀರು ಚರಂಡಿ, ಉದ್ಯಾನವನಗಳು, ಕಟ್ಟಡಗಳು ಮತ್ತು ಕೆರೆ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ, ಕ್ರೀಯಾಯೋಜನೆ ಸಿದ್ಧ ಪಡಿಸುವುದು ಮತ್ತು ನಗರದ 65 ವಾರ್ಡ್‍ಗಳಲ್ಲಿ ಪ್ರತಿ ರಸ್ತೆಯನ್ನು ಪರಿಶೀಲಿಸಿ ಹಾನಿಯಾಗಿರುವ ರಸ್ತೆಗಳಿಗೆ ದುರಸ್ಥಿ ಕಾರ್ಯ ಮತ್ತು ಪೂರ್ಣ ಪ್ರಮಾಣದಲ್ಲಿ ಹಾನಿಯಾಗಿರುವ ರಸ್ತೆಗಳನ್ನು ಪುನರ್ ನಿರ್ಮಾಣ ಮಾಡಲಾಗುವುದು. ಕ್ರಿಯಾ ಯೋಜನೆಯಲ್ಲಿನ ಎಲ್ಲಾ ಮುಖ್ಯ ರಸ್ತೆಗಳನ್ನು ಅಭಿವೃದ್ಧಿ ಕಾಮಗಾರಿಗೆ ಜಿ.ಐ.ಎಸ್ ಮಾಹಿತಿಯನ್ನು ಕಡ್ಡಾಯವಾಗಿ ನಮೂದು ಮಾಡಲು ಕ್ರಮವಹಿಸುವಂತೆ ಮಾಡಲಾಗಿದೆ ಎಂದು ತಿಳಿಸಿದರು.
ಶಾಸಕ ಎಲ್.ನಾಗೇಂದ್ರ ಮಾತನಾಡಿ, ಕೆ.ಆರ್.ಆಸ್ಪತ್ರೆ, ಮಾರುಕಟ್ಟೆ, ಲ್ಯಾನ್ಸ್‍ಡೌನ್ ಬಿಲ್ಡಿಂಗ್ ಕಾಮಗಾರಿಗಳನ್ನ ಸೂಕ್ತವಾಗಿ ಅಭಿವೃದ್ಧಿಗೊಳಿಸಬೇಕು, ಮೈಸೂರು ಮಹಾರಾಜರು ನಿರ್ಮಿಸಿರುವ ಎಲ್ಲಾ ಸರ್ಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳನ್ನು ಉತ್ತಮ ರೀತಿಯಲ್ಲಿ ಅಭಿವೃಧ್ಧಿ ಪಡಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಎನ್.ಅಶ್ವಿನ್ ಕುಮಾರ್, ಬಿ.ಹರ್ಷವರ್ಧನ್, ಎಚ್.ಪಿ.ಮಂಜುನಾಥ್, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಸಂದೇಶ್ ನಾಗರಾಜ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಮೇಯರ್ ತಸ್ನಿಂ, ಉಪಮೇಯರ್ ಸಿ.ಶ್ರೀಧರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಚಾಮುಂಡಿಬೆಟ್ಟದ ಮಳಿಗೆ ಕಾಮಗಾರಿ ಪರಿಶೀಲಿಸಿದ ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು, ಜುಲೈ.1.(ಕರ್ನಾಟಕ ವಾರ್ತೆ):- ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಚಾಮುಂಡಿಬೆಟ್ಟದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಅಂಗಡಿ ಮಳಿಗೆಗಳ ಕಾಮಗಾರಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಂಸದ ಪ್ರತಾಪಸಿಂಹ ಅವರು ಮಾತನಾಡಿ, ಚಾಮುಂಡಿಬೆಟ್ಟಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಅಂಗಡಿ ಮಳಿಗೆಗಳನ್ನು ಒಂದೇ ಕಡೇ ನಿರ್ಮಿಸುವ ಉದ್ದೇಶದಿಂದ 137 ಅಂಗಡಿಗಳು, 25 ಆಹಾರ ಮಳಿಗೆ ಹಾಗೂ ಶೌಚಾಲಯ ಸೇರಿದಂತೆ 198 ಮಳಿಗೆ ನಿರ್ಮಾಣ ಕಾರ್ಯ ಒಂದೇ ಕಡೇ ನಡೆಯುತ್ತಿದ್ದು, ಉಸ್ತುವಾರಿ ಸಚಿವರು ಪರಿಶೀಲಿಸಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ ಎಂದು ಹೇಳಿದರು.
ಚಾಮುಂಡಿಬೆಟ್ಟದ ಸಮಗ್ರ ಅಭಿವೃದ್ಧಿಯ ಪರವಾಗಿರುವ ಜಿಲ್ಲಾ ಉಸ್ತುವಾರಿ ಸಚಿವರು ಅಂಗಡಿ ಮಳಿಗೆಗಳ ಕಾಮಗಾರಿ ಪರಿಶೀಲನೆ ನಡೆಸಿ, ಮುಜರಾಯಿ ಇಲಾಖೆಯಿಂದ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಿಸುವ ಭರವಸೆ ನೀಡಿದ್ದಾರೆ ಎಂದು ತಿಳಿದರು.
ಶಾಸಕರಾದ ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ, ಮುಜರಾಯಿ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಮೈಸೂರು, ಜುಲೈ,01(ಕರ್ನಾಟಕ ವಾರ್ತೆ):- ಅಗಸರು ಹಾಗೂ ಕ್ಷೌರಿಕರಿಗೆÉ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ 5,000 ರೂ. ಗಳ ಪರಿಹಾರ ಧನ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಜುಲೈ 10 ವರೆಗೆ ವಿಸ್ತರಿಸಲಾಗಿದೆ.
ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 0821-2343990 ಅನ್ನು ಸಂಪರ್ಕಿಸುವಂತೆ ಮೈಸೂರು ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಆಕ್ಷೇಪಣೆ ಇದ್ದಲ್ಲಿ ಮನವಿ ಸಲ್ಲಿಸಿ
ಮೈಸೂರು, ಜುಲೈ.01(ಕರ್ನಾಟಕ ವಾರ್ತೆ):- ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ರ ಕಲಂ ಹಾಗೂ ನಿಯಮಗಳು 1960 ಮತ್ತು ಬ್ಯಾಂಕ್‍ನ ಬೈಲಾ ರೀತ್ಯಾ ಕಾರ್ಯಚಟುವಟಿಕೆಗಳನ್ನು ನಡೆಸದ ಹಿನ್ನೆಲೆ ಆದರ್ಶ ಸಹಕಾರ ಬ್ಯಾಂಕ್ ನಿ, ಮೈಸೂರು ಈ ಬ್ಯಾಂಕ್‍ಗೆ ಸಮಾಪನಾ ಆದೇಶ ಹೊರಡಿಸಿ 34 ವರ್ಷ ಕಳೆದರೂ ಸಹ ತಹಲ್‍ವರೆವಿಗೂ ಸಹಕಾರ ಬ್ಯಾಂಕ್‍ನ್ನು ಪುನಶ್ಚೇತನಗೊಳಿಸಲು ಬ್ಯಾಂಕಿನ ಸದಸ್ಯರಿಗಾಗಲಿ/ ಸಾರ್ವಜನಿಕರಿಗಾಗಲಿ ಯಾವುದೇ ಮನವಿ ಅಹವಾಲುಗಳು ಬಾರದ ಕಾರಣ ಹಾಗೂ ಪ್ರಸ್ತುತ ಬ್ಯಾಂಕ್‍ನ ಸದಸ್ಯರಿಗೆ ಯಾವುದೇ ಪ್ರಯೋಜನ, ಸೇವೆ ದೊರೆಯುತ್ತಿಲ್ಲದಿರುವುದು ಕಂಡುಬಂದಿರುತ್ತದೆ.
ಈ ಸಹಕಾರ ಬ್ಯಾಂಕ್‍ನ್ನು ನೊಂದಣಿ ರದ್ದುಗೊಳಿಸಲು ಕ್ರಮಕೈಗೊಂಡಿದ್ದು, ಬ್ಯಾಂಕ್‍ನ ಸದಸ್ಯರ ಹಿತದೃಷ್ಠಿಯಿಂದ ಬ್ಯಾಂಕ್‍ನ ಪುನಶ್ಚೇತನಗೊಳಿಸಿ ಮುನ್ನಡೆಸುವ ಬಗ್ಗೆ ಸಹಕಾರ ಬ್ಯಾಂಕ್‍ನ ಸದಸ್ಯರು / ಸಾರ್ವಜನಿಕರು ಹಾಗೂ ಇನ್ಯಾರಿಂದಾದರೂ ಆಕ್ಷೇಪಣೆ ಇದ್ದಲ್ಲಿ ಈ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 15 ದಿವಸಗಳೊಳಗಾಗಿ ಈ ಕಚೇರಿಗೆ ಖುದ್ದು ಹಾಜರಾಗಿ ಲಿಖಿತ ಮನವಿಯನ್ನು ಸಂಬಂಧಪಟ್ಟ ಪೂರಕ ದಾಖಲಾತಿಗಳೊಂದಿಗೆ ಸಲ್ಲಿಸುವುದು.
ಈ ರೀತಿ ಯಾವುದೇ ಆಕ್ಷೇಪಣೆಗಳು ಬಾರದಿದ್ದರೆ ಆದರ್ಶ ಸಹಕಾರ ಬ್ಯಾಂಕ್‍ನ ನೋಂದಣಿಯನ್ನು ರದ್ದುಪಡಿಸಲು ಪ್ರಸ್ತಾವನೆಯನ್ನು ಸಲ್ಲಿಸÀಲಾಗುವುದು. ನಂತರ ಬರುವ ಯಾವುದೇ ಅಹವಾಲುಗಳನ್ನು ಪರಿಗಣಿಸಲಾಗುವುದಿಲ್ಲ್ಲ ಹಾಗೂ ಆದರ್ಶ ಬ್ಯಾಂಕ್‍ನ ನೊಂದಣಿ ರದ್ದತಿಗೊಂಡ ನಂತರ ಬರಬಹುದಾದ ಆಕ್ಷೇಪಣೆಗಳಿಗೆ ಈ ಕಛೇರಿ ಯಾವುದೇ ರೀತಿಯಲ್ಲೂ ಜವಾಬ್ದಾರಿಯಲ್ಲವೆಂದು ಮೈಸೂರಿನ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಆದರ್ಶ ಸಹಕಾರ ಬ್ಯಾಂಕ್ ನಿ. ಸಮಾಪನಾಧಿಕಾರಿ ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ