ಮೈಸೂರು ಪತ್ರಿಕೆ ಸುದ್ದಿ ಗವಾಕ್ಷಿ

ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
ಮೈಸೂರು,(ಕರ್ನಾಟಕ ವಾರ್ತೆ):- ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2020-21ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
2020ನೇ ಡಿಸೆಂಬರ್ ಕೊನೆಯ ವಾರದಲ್ಲಿ ಪರೀಕ್ಷೆ ನಡೆಯಲಿದ್ದು, 25 ರೂ. ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ(ಬೆಂಗಳೂರು) ಪಡೆಯಬಹುದು ಅಥವಾwww.kasapa.in ಇಲ್ಲಿಯೂ ಕೂಡಾ ಅರ್ಜಿ ಪಡೆದು ಆಗಸ್ಟ್ 31 ರೊಳಗೆ ಸಲ್ಲಿಸುವುದು. ಸೆಪ್ಟೆಂಬರ್ 15 ರವರೆಗೆ ದಂಡ ಶುಲ್ಕ ರೂ. 50 ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18, ದೂರವಾಣಿ ಸಂಖ್ಯೆ 080-26623584 ಅನ್ನು ಸಂಪರ್ಕಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ.ರಾಜಶೇಖರ್ ಹತಗುಂದಿ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಜುಲೈ 6 ರಂದು ಡಾ.ಬಾಬು ಜಗಜೀವನರಾಂ ರವರ ಪುಣ್ಯಸ್ಮರಣೆ
ಮೈಸೂರು, ಜುಲೈ.02(ಕರ್ನಾಟಕ ವಾರ್ತೆ):- ಡಾ.ಬಾಬು ಜಗಜೀವನರಾಂ ರವರ 34ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಜಿಲ್ಲಾಡಳಿತದ ವತಿಯಿಂದ ಜುಲೈ 6 ರಂದು ಬೆಳಿಗ್ಗೆ 9.30 ಗಂಟೆಗೆ ಮೈಸೂರಿನ ರೈಲ್ವೆ ನಿಲ್ದಾಣದ ಮುಂಭಾಗದ ವೃತ್ತದಲ್ಲಿರುವ ಡಾ.ಬಾಬು ಜಗಜೀವನರಾಂ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರೂ ಅಗಿರುವ ಅಭಿರಾಮ್ ಜಿ.ಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಆನ್‍ಲೈನ್ ಮೂಲಕ ಕೌಶಲ್ಯಾಭಿವೃದ್ಧಿ ತರಬೇತಿ
ಮೈಸೂರು, ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2018-19ನೇ ಸಾಲಿನ ದ್ವಿತೀಯ ವರ್ಷದ ಬಿ.ಎ/ಬಿ.ಕಾಂ ಮತ್ತು 2019-20ನೇ ಸಾಲಿನ ಜನವರಿ ಹಾಗೂ ಜುಲೈ ಆವೃತ್ತಿಯಲ್ಲಿ ಪ್ರವೇಶ ಪಡೆದ ಪ್ರಥಮ ವರ್ಷದ B.A/B.COM/B.Lib.I.Sc/M.A/M.Com/M.BA/M.Lib.I.Sc/B.Ed ವಿದ್ಯಾರ್ಥಿಗಳಿಗೆ ಜುಲೈ 3 ರಿಂದ ಆನ್‍ಲೈನ್ ಮೂಲಕ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುತ್ತಿದೆ.
ಕೋವಿಡ್-19 ಹಿನ್ನೆಲೆ ಕೌಶಲ್ಯಾಭಿವೃದ್ಧಿ ತರಬೇತಿಯ ತರಗತಿಗಳನ್ನು ನಡೆಸಲು ಆಗದ ಕಾರಣ ಜುಲೈ 3 ರಿಂದ ಜುಲೈ 14 ರವರೆಗೆ ಆನ್‍ಲೈನ್ ತರಗತಿಗಳನ್ನು ತೆಗೆದುಕೊಳ್ಳಲಾಗುವುದು. ಕೌಶಲ್ಯಾಭಿವೃದ್ಧಿ ತರಬೇತಿಯ ಪಠ್ಯವಿಷಯ, ವೇಳಾಪಟ್ಟಿ ಮತ್ತು ತರಗತಿಗಳ ವೆಬ್‍ಲಿಂಕ್‍ಗಳನ್ನು ಕರ್ನಾಟಕ ರಾಜ್ಯ ಮುಖ್ತ ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ.
ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಪಡೆದುಕೊಂಡ ವಿದ್ಯಾರ್ಥಿಗಳು ಇ-ಡಿಜಿಟಲ್ ಪ್ರಮಾಣಪತ್ರಗಳನ್ನು ಆನ್‍ಲೈನ್ ಮೂಲಕ ವಿಶ್ವವಿದ್ಯಾನಿಲಯದ ಅಂತರ್ಜಾಲದಲ್ಲಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಸಂಯೋಜನಾಧಿಕಾರಿ ಮೊ.ಸಂ 9611434810 ಅನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕೇಂದ್ರ ಗ್ರಂಥಾಲಯದ ಸಿಬ್ಬಂಧಿಗಳಿಗೆ ಆಯುಷ್ ಔಷಧಿ ವಿತರಣೆ
ಮೈಸೂ ರು ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ, ರೋಗನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಕುರಿತು ಮೈಸೂರಿನ ನಗರ ಕೇಂದ್ರ ಗ್ರಂಥಾಲಯದಲ್ಲಿ ಗುರುವಾರ ಆಯುಷ್ ಔಷಧಿಗಳನ್ನು ಸಿಬ್ಬಂದಿಗಳಿಗೆ ವಿತರಿಸಿದರು.
ಮೈಸೂರಿನ ಆಯುಷ್ ಇಲಾಖೆಯ ವೈದ್ಯರುಗಳಾದ ಡಾ. ರಾಘವೇಂದ್ರ ಮತ್ತು ಡಾ. ಸ್ವರ್ಣಲತಾ ರವರು ಮೈಸೂರು ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ. ಸೀತಾಲಕ್ಷ್ಮೀ ರವರ ಮಾರ್ಗದರ್ಶನದಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯಗಳ ಸಿಬ್ಬಂದಿಗಳಿಗೆ ಹಾಗೂ ಮಂಡಕಳ್ಳಿ ವಿಮಾನ ನಿಲ್ದಾಣ, ಇಲ್ಲಿ ಗಡಿ ಭಾಗದ ಚೆಕ್ ಪೋಸ್ಟ್(ಬಿ.ಆರ್.ಸಿ) ಮಟ್ಟದಲ್ಲಿ ಕೋವಿಡ್-19 ಸಂಬಂಧ ಕಾರ್ಯನಿರ್ವಹಿಸುತ್ತಿರುವ ಗ್ರಂಥಾಲಯ ಇಲಾಖೆಯು ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಿಬ್ಬಂದಿಗಳಿಗೆ ಕೋವಿಡ್-19 ರೋಗನಿರೋಧಕ ಆಯುಷ್ ಔಷಧಿಗಳನ್ನು ವಿತರಿಸುವುದರ ಜೊತೆಗೆ ಔಷಧಿಗಳ ಬಳಕೆಯ ಬಗ್ಗೆ ಸೂಕ್ತ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ನಗರ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರಾದ ಮಂಜುನಾಥ್ ಬಿ. ರವರು ಉಪಸ್ಥಿತರಿದ್ದರು