ಎಸ್.ಎಸ್.ಎಲ್.ಸಿ ಪರೀಕ್ಷೆಯ ಮೌಲ್ಯಮಾಪನ: ನಿಷೇಧಾಜ್ಞೆ ಜಾರಿ:- ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನವು ಜುಲೈ 7 ರಿಂದ ಮೈಸೂರು ನಗರದ 6 ಕೇಂದ್ರಗಳಲ್ಲಿ ನಡೆಯಲಿದ್ದು, ಮೌಲ್ಯಮಾಪನ ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಮೌಲ್ಯಮಾಪನ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ಸುತ್ತಲೂ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಘೋಷಿಸಲಾಗಿದೆ ಎಂದು ಮೈಸೂರು ನಗರ ಪೋಲಿಸ್
ಆಯುಕ್ತರಾದ ಡಾ.ಚಂದ್ರಗುಪ್ತ ಅವರು ತಿಳಿಸಿದ್ದಾರೆ.
ಮೌಲ್ಯಮಾಪನ ಕೇಂದ್ರಗಳಾದ ಕುವೆಂಪು ನಗರದ ಜ್ಞಾನಗಂಗಾ ಪ್ರೌಢಶಾಲೆ, ಜಯಲಕ್ಷ್ಮೀಪುರಂನ ಚಿನ್ಮಯ ಪ್ರೌಢಶಾಲೆ, ನಾರಾಯಣಶಾಸ್ತ್ರಿ ರಸ್ತೆಯ ಸದ್ವಿದ್ಯಾ ಪ್ರೌಢಶಾಲೆ, ಸರಸ್ವತಿಪುರಂನ ವಿಜಯ ವಿಠ್ಠಲ ಪ್ರೌಢಶಾಲೆ ಹಾಗೂ ವಿ.ವಿ. ಮೊಹಲ್ಲಾದ ಸೆಂಟ್ ಫಿಲೋಮಿನಾ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಮೈಸೂರು ನಗರ ಪೋಲಿಸ್ ಕಮಿಷನರ್ ಡಾ.ಚಂದ್ರಗುಪ್ತ ಅವರು ಕಲಂ 35 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜುಲೈ 7 ರಂದು ಮೈಸೂರು ಜಿಲ್ಲೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಿಷೇಧಿತ ಪ್ರದೇಶ ಎಂದು ಆದೇಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿದ್ಯುತ್ ನಿಲುಗಡೆ
ಮೈಸೂರು, :- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ 66/11 ಕೆ.ವಿ ಎಫ್.ಟಿ.ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಪೀಪಲ್ಸ್ ಪಾರ್ಕ್ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಜುಲೈ 7 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 66/11 ಕೆವಿ ಎಫ್.ಟಿ.ಎಸ್ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಎಫ್.ಟಿ.ಎಸ್ ವಿದ್ಯುತ್ ವಿತರಣಾ ಕೇಂದ್ರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನ.ರಾ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ನಿಲುಗಡೆ
ಮೈಸೂರು, :- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ 66/11 ಕೆ.ವಿ ಬೈಲಕೊಪ್ಪ ವಿದ್ಯುತ್ ವಿತರಣಾ ಉಪಕೇಂದ್ರದಿಂದ ನೂತನವಾಗಿ ನಿರ್ಮಿಸಿರುವ ಆವರ್ತಿ11 ಕೆ.ವಿ. ಮಾರ್ಗವನ್ನು ಚಾಲನೆ ನೀಡಲಾಗುತ್ತಿದೆ.
ಈ ಹಿನ್ನೆಲೆ ಜುಲೈ 7 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಚನ್‍ಕಲ್, ಆವರ್ತಿ ಮತ್ತು ಕೊಪ್ಪ ಪಂಚಾಯಿತಿಗೆ ಬರುವ ಎಲ್ಲಾ ಗ್ರಾಮಗಳಿಗೆ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪಿರಿಯಾಪಟ್ಟಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.