ಮೈಸೂರು ಪತ್ರಿಕೆ ಸುದ್ದಿ ಗವಾಕ್ಷಿ

460
Share

[7/10, 6:08 PM] mysorepathrike: ಕರ್ನಾಟಕ ವಾರ್ತೆ):- ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2020-21ನೇ ಸಾಲಿನಲ್ಲಿ ಮಡಿವಾಳ ಸಮಾಜಕ್ಕೆ ಸೇರಿದ ಅಗ್, ಚಕಲ, ಧೋಬಿ, ಮಡಿವಾಳ, ಮನ್ನನ್, ಪರಿತ್, ರಾಜಕ, ಸಕಲ, ವನ್ನನ್, ವೆಲ್ಲುತೇಕಡ್ ಹಾಗೂ ಸಾಕಲವಾಡು ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವ-ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ, ಅರಿವು ಶೈಕ್ಷಣಿಕ ಸಾಲ ಯೋಜನೆ ಮತ್ತು ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವ ಮೇಲ್ಕಂಡ ಸಮಾಜದವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಛೇರಿಯಲ್ಲಿ ಅಥವಾ ನಿಗಮದ ವೆಬ್‍ಸೈಟ್ dbcdc.karnataka.gov.in ನಲ್ಲಿ ಪಡೆದು ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳು ಹಾಗೂ ಸಣ್ಣ ರೈತರ ಪ್ರಮಾಣ ಪತ್ರಗಳನ್ನು ನಿಗಮದ ವೆಬ್‍ಸೈಟ್ ಹಾಗೂ ಆಯಾಯ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಆಗಸ್ಟ್ 03 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೈಸೂರು ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ:-0821-2341194 ಅನ್ನು ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಮೈಸೂರು, ಜುಲೈ,10.(ಕರ್ನಾಟಕ ವಾರ್ತೆ):- ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಸವಿತಾ ಸಮಾಜಕ್ಕೆ ಸೇರಿದ ನಾಯಿಂದ, ಪರಿಯಾಳ, ಅಂಬಟ್ಟನ್, ಬಜಂತ್ರಿ, ಬಂಡಾರಿ, ಚೌರಿಯ, ಹಡಪದ, ಹಜಾಮ, ಕವುಟಿಯನ್, ಕೆಲಸಿ, ಕ್ಷೌರಿಕ, ಮಹಾಲೆ, ಮಂಗಳ, ಮೇಲಗಾರ, ನಾಡಿಗ, ನಾಪಿತ, ನವಲಿಗ್, ನಾವಿ, ನಯನಜ ಕ್ಷತ್ರಿಯ, ನ್ಹಾವಿ, ವಾಜಾಂತ್ರಿ, ಸವಿತ, ನಯನಜ ಕ್ಷತ್ರಿ, ನಾಡಿಗ್ ಹಾಗೂ ಕ್ಷೌರಿಕ್ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ ಮತ್ತು ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವ ಮೇಲ್ಕಂಡ ಸಮಾಜದವರು ಉಚಿತವಾಗಿ ಅರ್ಜಿನಮೂನೆಯನ್ನು ಜಿಲ್ಲಾ ಕಛೇರಿಯಲ್ಲಿ ಅಥವಾ ನಿಗಮದ ವೆಬ್‍ಸೈಟ್ dbcdc.karnataka.gov.in ನಲ್ಲಿ ಪಡೆದು ಅರ್ಜಿಯೊಂದಿಗೆ ದಾಖಲಾತಿಗಳನ್ನು ನಿಗಮದ ವೆಬ್‍ಸೈಟ್ ಹಾಗೂ ಆಯಾಯ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಆಗಸ್ಟ್ 3 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೈಸೂರು ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ:-0821-2341194 ಅನ್ನು ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಪರಿಚಿತ ವ್ಯಕ್ತಿ: ವಾರಸುದಾರರ ಪತ್ತೆಗೆ ಮನವಿ
ಮೈಸೂರು, ಜುಲೈ,10(ಕರ್ನಾಟಕ ವಾರ್ತೆ):- ಜುಲೈ 9 ರಂದು ಅಪರಿಚಿತರೊಬ್ಬರು ಅಶೋಕಪುರಂ-ಕಡಕೋಳ ರೈಲು ನಿಲ್ದಾಣಗಳ ನಡುವೆ ಕಪಲ್ಡ್ ಲೈಟ್ ಇಂಜಿನ್‍ಗೆ ಸಿಕ್ಕಿ ಮೃತಪಟ್ಟಿರುತ್ತಾರೆ.
ವ್ಯಕ್ತಿಯ ಚಹರೆ ಇಂತಿವೆ: ಸುಮಾರು 60 ರಿಂದ 65 ವರ್ಷ, 5.3 ಅಡಿ ಎತ್ತರ, ಸಾಧಾರಣ ಮೈಕಟ್ಟು, 2 ಇಂಚು ಕಪ್ಪು ಬಿಳಿ ಮಿಶ್ರಿತ ಕೂದಲು, ಗಡ್ಡ ಮೀಸೆ ಬಿಟ್ಟಿರುತ್ತಾರೆ, ಬಿಳಿ ಬಣ್ಣದ ತುಂಬು ತೋಳಿನ ಶರ್ಟ್, ನೀಲಿ ಬಣ್ಣದ ಅಂಡರ್‍ವೇರ್, ಕಾಫೀ ಬಣ್ಣದ ಗೆರೆಗಳುಳ್ಳ ಟವಲ್, ಬಿಳಿ ಬಣ್ಣದ ತೋಳು ಬನಿಯನ್ ಹಾಗೂ ಕಂದು ಬಣ್ಣದ ಚಪ್ಪಲಿಯನ್ನು ಧರಿಸಿರುತ್ತಾರೆ.
ಮೃತರ ವಾರಸುದಾರರ ಬಗ್ಗೆ ಮಾಹಿತಿ ತಿಳಿದಿದ್ದಲ್ಲಿ ಮೈಸೂರು ರೈಲ್ವೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 0821-2516579ನ್ನು ಸಂಪರ್ಕಿಸುವಂತೆ ಮೈಸೂರು ರೈಲ್ವೆ ಪೊಲೀಸ್ ಠಾಣೆ ಉಪ ನಿರೀಕ್ಷರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅರ್ಜಿ ಆಹ್ವಾನ
ಮೈಸೂರು, ಜುಲೈ.10(ಕರ್ನಾಟಕ ವಾರ್ತೆ);- ಸ್ಟಾಫ್ ಸೆಲಕ್ಷನ್ ಕಮೀಷನ್ ರವರಿಂದ Sub-Inspector in delhi Police and Central Armed Police Forces Examination. ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಶ್ವ ವಿದ್ಯಾನಿಲಯದ ಯಾವುದೇ ಪದವಿ ಹೊಂದಿರುವ 20 ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಿನಾಯಿತಿ ಇದ್ದು, ಓ.ಬಿ.ಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ 100 ರೂ. ನಿಗಧಿ ಪಡಿಸಲಾಗಿದ್ದು, ಪ.ಜಾತಿ/ಪ.ಪಂಗಡ/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ಇರುತ್ತದೆ.
ಆಸಕ್ತರು, ವೆಬ್‍ಸೈಟ್ http://ssckkr.kar.nic.in and http://ssc.nic.in ಇಲ್ಲಿ ಜುಲೈ 16 ರೊಳಗೆ ಆರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮೈಸೂರು ಇವರನ್ನು ಸಂಪರ್ಕಿಸುವುದು ಅಥವಾ ದೂರವಾಣಿ ಸಂಖ್ಯೆ 0821-2489972 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರಾದ ಡಿ.ಎಂ.ರಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿವೃತ್ತ ಪೇಶ್ ಇಮಾಮ್ ಹಾಗೂ ಮೌಜಿನ್ ಅವರಿಗೆ ಮಾಶಾಸನ
ಮೈಸೂರು, ಜುಲೈ.10(ಕರ್ನಾಟಕ ವಾರ್ತೆ);- ಮೈಸೂರು ಜಿಲ್ಲಾ ವಕ್ಫ್ ಸಲಹಾ ಸಮಿತಿ ವತಿಯಿಂದ ಜಿಲ್ಲೆಯಲ್ಲಿರುವ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ಮಸೀದಿಗಳಲ್ಲಿ ಈಗಾಗಲೇ ಪೇಶ್ ಇಮಾಮ್ ಹಾಗೂ ಮೌಜಿನ್ ಆಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಹಾಗೂ 65 ವರ್ಷ ವಯೋಮಾನದ ವೃದ್ಧ ಪೇಶ್ ಇಮಾಮ್‍ರಿಗೆ ತಿಂಗಳಿಗೆ 2,000 ರೂ ಹಾಗೂ ಮೌಜಿನ್ ಅವರಿಗೆ 1,500 ರೂ. ಮಾಶಾಸನ ಪಾವತಿಸುವ ಯೋಜನೆ ಜಾರಿಗೊಳಿಸಿದೆ.
ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಲು ಅರ್ಜಿ ನಮೂನೆ, ಮಸೀದಿಯ ಅಧ್ಯಕ್ಷರು ನೀಡುವ ಸೇವಾಪ್ರಮಾಣ ಪತ್ರ, ಭಾವಚಿತ್ರ, ಆಧಾರ್ ಕಾರ್ಡ್, ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅಥವಾ ಬಿ.ಪಿ.ಎಲ್ ಕಾರ್ಡ್, ರಾಷ್ಟ್ರೀಕೃತ ಬ್ಯಾಂಕ್ ಖಾತೆಯ ಪಾಸ್‍ಪುಸ್ತಕದ ಪ್ರತಿಗಳನ್ನು ಸಲ್ಲಿಸುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2423520 ಅನ್ನು ಸಂಪರ್ಕಿಸುವಂತೆ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸದ್ದಾರೆ.

ತಂತ್ರಾಂಶಗಳ ಮೂಲಕ ಬಳಕೆ ಕುರಿತು ಗ್ರಂಥಾಲಯ ಸಿಬ್ಬಂದಿಗೆ ಮಾಹಿತಿ
ಮೈಸೂರು, ಜುಲೈ.10(ಕರ್ನಾಟಕ ವಾರ್ತೆ);- ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಸದಸ್ಯತ್ವ ನೊಂದಣಿ ಮತ್ತು ಸದಸ್ಯತ್ವ ಮರುಪಾವತಿ ಸೇವೆಗಳನ್ನು ಸಂಪೂರ್ಣವಾಗಿ ಆನ್‍ಲೈನ್ ಮಾಡಲಾಗಿದ್ದು, ನಾಗರೀಕರಿಂದ ಸಂಬಂಧಪಟ್ಟ ಸೇವೆಗಳನ್ನು ಕೋರಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸುವುದು ಮತ್ತು ವಿಲೇ ಮಾಡುವ ಕಾರ್ಯವನ್ನು ಅನುಷ್ಠಾನಗೊಳಿಸಲು ಸೇವಾ ಸಿಂಧು ಯೋಜನೆಯಡಿ ರೂಪಿತಗೊಂಡಿರುವ ತಂತ್ರಾಂಶಗಳ ಮೂಲಕ ಬಳಕೆ ಕುರಿತು ಸಿಬ್ಬಂದಿಗೆ ಆನ್‍ಲೈನ್‍ನಲ್ಲಿ ಮಾಹಿತಿ ನೀಡಲಾಯಿತು.
“Google Meet” ಆ್ಯಪ್ ಮೂಲಕ ಸೇವಾ ಸಿಂಧು ಯೋಜನೆಯಡಿ ರೂಪಿತಗೊಂಡಿರುವ ತಂತ್ರಾಂಶಗಳ ಮೂಲಕ ಬಳಕೆ ಕುರಿತು ಚೇತನ್ ಎಂ., ಜಿಲ್ಲಾ ಪ್ರಾಜೆಕ್ಟ್ ವ್ಯವಸ್ಥಾಪಕರು, ಸೇವಾ ಸಿಂಧು ಪ್ರಾಜೆಕ್ಟ್, ಜಿಲ್ಲಾಧಿಕಾರಿಗಳ ಕಚೇರಿ, ಇವರು ನಗರ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ಸಿಬ್ಬಂದಿ ವರ್ಗದವರಿಗೆ ಮಾಹಿತಿ ನೀಡಿದ್ದಾರೆಂದು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರಾದ ಮಂಜುನಾಥ್ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
[7/10, 6:13 PM] mysorepathrike: ವಿದ್ಯುತ್ ನಿಲುಗಡೆ
ಮೈಸೂರು, ಜುಲೈ,10(ಕರ್ನಾಟಕ ವಾರ್ತೆ):- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ 66/11 ಕೆ.ವಿ ಎಫ್.ಟಿ.ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಪೀಪಲ್ಸ್ ಪಾರ್ಕ್ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಜುಲೈ 11 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 66/11 ಕೆವಿ ಎಫ್.ಟಿ.ಎಸ್ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಗಾಂಧಿನಗರ, ಹೈದರಾಲಿ ರಸ್ತೆ, ಮೊಹಮ್ಮದ್ ಸೇಠ್ ಬ್ಲಾಕ್, ಜೆ.ಪಿ.ಪ್ಯಾಲೇಸ್, ಅಕ್ಷಯ ಮಹಲ್, ಟೆಲಿಕಾಂ ಕಾಲೋನಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನ.ರಾ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Share