ಮೈಸೂರು ಮಂಡಿ ಪೊಲೀಸ್ ಠಾಣೆ ಸಿಲ್ ಡೌನ್. 4 ಮ೦ದಿಗೆ ಸೋಂಕು ದೃಢ

ಮೈಸೂರು ನಗರದ ಹೃದಯಭಾಗದಲ್ಲಿರುವ ಮಂಡಿ ಮೊಹಲ್ಲಾದ ಮಂಡಿ ಪೊಲೀಸ್ ಠಾಣೆಯನ್ನು ಇಂದಿನಿಂದ ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.
ಮಂಡಿ ಪೊಲೀಸ್ ಠಾಣೆಯ ನಾಲ್ಕಕ್ಕೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಮಂಡಿ ಪೊಲೀಸ್ ಠಾಣೆಯ ಐವತ್ತಕ್ಕೂ ಹೆಚ್ಚು ಮಂದಿಯನ್ನು ಗೃಹಬಂಧನದಲ್ಲಿ ಇಡಲಾಗಿದೆ.
ಮಂಡಿ ಮೊಹಲ್ಲಾದ ಹಲವಾರು ರಸ್ತೆಗಳಲ್ಲಿ ಈಗಾಗಲೇ ಸೀಲ್ಡೌನ್ ಮಾಡಿರುವುದನ್ನು ನಾವು ಸ್ಮರಿಸಬಹುದಾಗಿದೆ.