ಮೈಸೂರು ಮೃಗಾಲಯ ಆನೆ ತುಳಿತ ಮಾವುತ ಸಾವು

Share

ಮೈಸೂರು:
ವಿಶ್ವವಿಖ್ಯಾತ ಮೈಸೂರು ಮೃಗಾಲಯದ ಆನೆಯೊಂದು ತನ್ನ ಮಾವುತ ನನ್ನೇ ತುಳಿದು ಸಾಯಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಹರೀಶ್ ಎಂಬವರೇ ತಾವು ಸಲಹುತ್ತಿದ್ದ ಆನೆಯಿಂದ ಹತ್ಯೆಗೀಡಾದವರು.
ಕಳೆದ ಐದು ದಿನಗಳಿಂದ ರಜೆ ಮೇಲೆ ತೆರಳಿದ್ದ ಹರೀಶ್ ಇವತ್ತು ಕೆಲಸಕ್ಕೆ ಹಾಜರಾಗಿದ್ದರು. ಈ ಹಿಂದಿನಂತೆಯೇ ಆನೆಯ ಮೈದಡವಿ ಹುಲ್ಲು ಹಾಕುವ ಸಂದರ್ಭದಲ್ಲಿ ಆತನನ್ನು ಸೊಂಡಿಲಿನಿಂದ ಎತ್ತಿ ಕೆಳಕ್ಕೆ ಹಾಕಿ ಹೊಸಕಿದೆ.
ಇದರಿಂದ ತಬ್ಬಿಬ್ಬಾದ ಇತರೆ ಸಿಬ್ಬಂದಿ ಕೂಡಲೇ ಹರೀಶನನ್ನು ಆನೆಯಿಂದ ಬಿಡಿಸಿಕೊಂಡು ತಕ್ಷಣವೇ ಗೋಪಾಲಗೌಡ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದರಾದರೂ ಫಲಕಾರಿಯಾಗದೆ ಹರೀಶ್ ಸಾವನ್ನಪ್ಪಿದರು ಎಂದು ಮೃಗಾಲಯದ ಮೂಲಗಳು ತಿಳಿಸಿವೆ.
ಪ್ರಕರಣ ಕುರಿತು ನಜರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share