ಮೈಸೂರು ಯೋಗ ನರಸಿಂಹ ಸ್ವಾಮಿ ದೇವಸ್ಥಾನ ಭಕ್ತರ ಹರಿದು ಬರುತ್ತಿರುವ ಜನಸಾಗರ ವೀಕ್ಷಿಸಿ

Share

ಮೈಸೂರು- ಕಳೆದ ಹಲವಾರು ವರ್ಷಗಳಿಂದ ಅನೂಚಾನವಾಗಿ ನಡೆಸಿಕೊಂಡು ಬರುತ್ತಿರುವಂತೆ ಈ ಈ ವರ್ಷವೂ ಸಹ ನೂತನ ಕ್ರೈಸ್ತ ವರ್ಷಾರಂಭದ ಅಂಗವಾಗಿ ದಿನಾಂಕ : 01.01.2023 ( ಭಾನುವಾರ ) ದಂದು ಬೆಳಗ್ಗೆ   ಪ್ರಾರಂಭಿಸಿ ಶ್ರೀ ಯೋಗಾನರಸಿಂಹಸ್ವಾಮಿಯವರಿಗೆ ವಿಶೇಷ ಅಲಂಕಾರ ಮತ್ತು “ ಶ್ರೀರಂಗಂಕ್ಷೇತ್ರ ” “ ಮಧುರ ಕ್ಷೇತ್ರಗಳಿಂದ ತರಿಸಿರುವ ವಿಶೇಷ “ ತೋಮಾಲೆ ” ಮತ್ತು “ ಸ್ವರ್ಣಪುಷ್ಪದಿಂದ ” ಶ್ರೀಸ್ವಾಮಿಗೆ “ ಸಹಸ್ರನಾಮರ್ಚನೆ ” ಮತ್ತು ದೇವಾಲಯದ ಉತ್ಸವ ಮೂರ್ತಿಯಾದ ಶ್ರೀಮಲಯಪ್ಪನ್ ಸ್ವಾಮಿ , ಪದ್ಮಾವತಿ ಮತ್ತು ಮಹಾಲಕ್ಷ್ಮಿ ದೇವರಿಗೆ ದೇವಾಲಯದ ಆವರಣದಲ್ಲಿ ಏಕಾದಶ ಪ್ರಾಕಾರೋತ್ಸವ ” ಹಾಗೂ ಇಪ್ಪತ್ತು ಕ್ವಿಂಟಾಲ್ ಪುಳಿಯೋಗರೆ ನಿವೇದನೆ ” ಮತ್ತು ದೇವಾಲಯಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣಾ ಕಾರ್ಯಕ್ರಮವನ್ನು ಪರಮ ಪೂಜ್ಯ ಪ್ರೋ : ಭಾಷ್ಯಂ ಸ್ವಾಮೀಜಿಯವರ ದಿವ್ಯ ನೇತೃತ್ವದಲ್ಲಿ ಪ್ರಸಾದ ಹಾಗೂ ಲಾಡು ನೀಡಲಾಯಿತು  

ಪ್ರಾರಂಭದಲ್ಲಿ ಅಂದರೆ 1994 ನೇ ಇಸವಿಯಲ್ಲಿ ಅಂದಾಜು ಒಂದು ಸಾವಿರ ಲಡ್ಡು ವಿತರಣೆಯಿಂದ ಪ್ರಾರಂಭಿಸಿ ಕಳೆದ ಹಲವಾರು ವರ್ಷಗಳಿಂದ ಪ್ರತಿ ವರ್ಷ ಒಂದು ಲಕ್ಷ ಮತ್ತು ಎರಡು ಲಕ್ಷ ಲಡ್ಡು ಪ್ರಸಾದವನ್ನು ಭಕ್ತಾದಿಗಳಿಗೆ ವಿತರಣೆ ಮಾಡಲಾಗುತ್ತಿದೆ . ಈ ವರ್ಷವೂ ಸಹ ಇನ್ನೂ ಹೆಚ್ಚು ಅಂದರೆ ಎರಡು ಲಕ್ಷ ಲಡ್ಡುವನ್ನು ವಿತರಣೆ ಮಾಡಲು ದೇವಸ್ಥಾನದ ವತಿಯಿಂದ ತಯಾರಿ ನಡೆಯುತ್ತಿದೆ . ಈ ವರ್ಷ ಅಂದಾಜು ( 2,000 ) ಗ್ರಾಂ ತೂಕದ ( 10,000 ) ಲಡ್ಡುಗಳು ಹಾಗೂ ( 150 ) ಗ್ರಾಂ ತೂಕದ ( 2 ಲಕ್ಷ ) ಲಡ್ಡುಗಳನ್ನು ದೇವಾಲಯಕ್ಕೆ ಬರುವ ಎಲ್ಲಾ ಭಕ್ತಾದಿಗಳಿಗೆ ಯಾವುದೇ ಜಾತಿ , ಮತ ಮತ್ತು ಭೇದವಿಲ್ಲದೆ ಉಚಿತವಾಗಿ ವಿತರಿಸಲಾಯಿತು

Share