ಮೈಸೂರು ಸಂಪೂರ್ಣ ಲಾಕ್ಡೌನ್ ಇಲ್ಲ ಡಿಸಿ ಸ್ಪಷ್ಟನೆ

3939
Share

ಮೈಸೂರು
ಮೈಸೂರಿನಲ್ಲಿ ಸಂಪೂರ್ಣ ಲಾಕ್ಡೌನ್ ಮಾಡುವುದಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ ಅವರು ಸ್ಪಷ್ಟಪಡಿಸಿದ್ದಾರೆ,ಸಂಪೂರ್ಣ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದು ಅವರು ತಿಳಿಸಿದರು. ಆದರೆ ಮುಖ್ಯ ಮಂತ್ರಿಗಳು ಜಿಲ್ಲಾಧಿಕಾರಿಗಳು ಬೇಕಾದರೆ ಲಾಕ್ಡೌನ್ ಮಾಡಿಕೊಳ್ಳಬಹುದು ಎಂದು ಸೂಚನೆ ನೀಡಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ ಅವರು ತಿಳಿಸಿದ್ದಾರೆ.
ಇಂದು ಮುಖ್ಯಮಂತ್ರಿಗಳೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ಜಿಲ್ಲಾ ಮಟ್ಟದಲ್ಲಿ ಸ್ಥಳೀಯವಾಗಿ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಗಳು ತಿಳಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ ಆದರೆ ನಗರದ ಎನ್.ಆರ್. ಕ್ಷೇತ್ರದ ಕೆಲವೊಂದು ಪ್ರದೇಶಗಳು ಮಾತ್ರ ಲಾಕ್‌ಡೌನ್ ಮಾಡಲಾಗುತ್ತದೆ . ಮಂಡಿ ಮೊಹಲ್ಲಾ , ಉದಯಗಿರಿ , ಸುಭಾಷ್ ನಗರ , ಕಲ್ಯಾಣಗಿರಿ , ಶಾಂತಿನಗರ , ಏಕಲವ್ಯ ನಗರ , ಸೇರಿ ಹಲವು ಸ್ಥಳ ಗುರುತಿಸಿದ್ದು ಈ ಪ್ರದೇಶಗಳನ್ನು ಲಾಕ್ಡೌನ್ ಮಾಡುವ ಬಗ್ಗೆ ಚಿಂತನೆ ನಡೆಯುತ್ತಿದ್ದು ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯ ಜನಪ್ರತಿನಿಧಿ ಗಳೊಂದಿಗೆ ಚರ್ಚಿಸಿ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.


Share