ಮೈಸೂರು ವಿನೂತನ ರೀತಿಯ ಪ್ರತಿಭಟನೆ

487
Share

ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ. ಇಂದು ಮೈಸೂರು ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಲಾಯಿತು. ನಂತರ ತಳ್ಳುಗಾಡಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ತಲುಪಿ ಮನವಿ ಸಲ್ಲಿಸಲಾಯಿತು. ಗೌರವಾನ್ವಿತ ರಾಷ್ಟ್ರಪತಿಗಳು ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂದು ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ನಗರ ಅಧ್ಯಕ್ಷರಾದ ಆರ್ ಮೂರ್ತಿ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ. ಬಿ ಜೆ ವಿಜಯ್ ಕುಮಾರ್. ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್. ವಿಧಾನಪರಿಷತ್ ಸದಸ್ಯರಾದ ಆರ್ ಧರ್ಮಸೇನಾ. ಕೆಪಿಸಿಸಿ ವಕ್ತಾರರಾದ ಲಕ್ಷ್ಮಣ್. ಮಹಿಳಾ ನಗರ ಅಧ್ಯಕ್ಷರಾದ ಪುಷ್ಪಲತಾ ಚಿಕ್ಕಣ್ಣ. ಮಹಿಳಾ ಗ್ರಾಮಾಂತರ ಅಧ್ಯಕ್ಷರಾದ ಲತಾ ಸಿದ್ದಶೆಟ್ಟಿ. ಗ್ರಾಮಾಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಸವರಾಜ್ ನಾಯಕ್. ಶಿವಪ್ರಸಾದ್. ಇನ್ನು ಮುಂತಾದ ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.


Share