ಮೈಸೂರು. ವಿಭಾಗ ಮಟ್ಟದ ‘ಆರ್ಥಿಕ ಸ್ಪಂದನಾ’ ಕಾರ್ಯಕ್ರಮ

Share


ಅಕ್ಟೋಬರ್ 2 ರಂದು ಮೈಸೂರು ವಿಭಾಗ ಮಟ್ಟದ ‘ಆರ್ಥಿಕ ಸ್ಪಂದನಾ’ ಕಾರ್ಯಕ್ರಮ
ಮೈಸೂರು,: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಆರ್ಥಿಕ ಸ್ಪಂದನಾ ಕಾರ್ಯಕ್ರಮವನ್ನು ಮೈಸೂರು ವಿಭಾಗದಲ್ಲಿ ಅಕ್ಟೋಬರ್ 2 ರಂದು ಆಯೋಜಿಸಲು ಸಹಕಾರ ಇಲಾಖೆ ವತಿಯಿಂದ ಮಾಡಿಕೊಂಡಿರುವ ಸಿದ್ಧತೆಗಳನ್ನು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಭಾನುವಾರ ಪರಿಶೀಲಿಸಿದರು.
ಅಕ್ಟೋಬರ್ 2 ರಂದು ಬೆಳಗ್ಗೆ 9 ಗಂಟೆಗೆ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ. ಮೈಸೂರು ವಿಭಾಗದ ಎಂಟು ಜಿಲ್ಲೆಗಳ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳು ಹಾಗೂ ಹಾಲು ಉತ್ಪಾದನಾ ಒಕ್ಕೂಟಗಳು ಸೇರಿ 11 ಘಟಕಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ ಎಂದು ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಪ್ರಕಾಶ್ ರಾವ್ ಅವರು ಹೇಳಿದರು.
ಹೈನುಗಾರಿಕೆ, ಮೀನುಗಾರಿಕೆ ಮುಂತಾದ ಕೃಷಿಯೇತರ ಚಟುವಟಿಕೆಗಳಿಗೆ ಹಾಗೂ ಸಹಕಾರ ಸಂಘಗಳಿಗೆ 20 ರಿಂದ 30 ಲಕ್ಷ ರೂ.ಗಳ ವರೆಗೂ ಸಾಲ ನೀಡಲು ಅವಕಾಶವಿದೆ. ಪ್ರತಿ ಘಟಕದಿಂದ 5 ಫಲಾನುಭವಿಗಳನ್ನು ಆಯ್ಕೆ ಮಾಡಿ ಸಾಂಕೇತಿಕವಾಗಿ ಚೆಕ್ ವಿತರಣೆ ಮಾಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.
ಬೆಂಗಳೂರು ವಿಭಾಗದ ಆರ್ಥಿಕ ಸ್ಪಂದನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಿದ್ದಾರೆ. ಅದೇ ಮಾದರಿಯಲ್ಲಿ ಮೈಸೂರು ವಿಭಾಗದ ಕಾರ್ಯಕ್ರಮ ಆಯೋಜಿಸಬೇಕು. ಈ ವಿಭಾಗದ ಎಂಟು ಜಿಲ್ಲೆಗಳ ಜನಪ್ರತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಕಾರ್ಯಕ್ರಮಕ್ಕೆ ಸೂಕ್ತ ಪ್ರಚಾರ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಶರತ್ ಬಿ, ಮೈಸೂರು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷರಾದ ಜಿ.ಡಿ. ಹರೀಶ್, ಜಿಲ್ಲಾ ಪಂಚಾಯತ್ ಸಿ.ಇ.ಇ. ಡಿ. ಭಾರತಿ, ಅಪರ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.


Share