ಮೈಸೂರು – ವಿಶ್ವ ಕಪ್ ಕ್ರಿಕೆಟ್- ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನೇರ ಪ್ರಸಾರ ವೀಕ್ಷಣೆಗೆ ಅವಕಾಶ

Share

ಚಿತ್ರ ಕೃಪೆ ಜಸ್ಟ್ ಡಯಲ್

ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿಯ ನೇರಪ್ರಸಾರ

ಮೈಸೂರುನ.- ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಮಧ್ಯೆ ನವೆಂಬರ್ 19 ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿಯ ಉಚಿತ ನೇರ ಪ್ರಸಾರವನ್ನು ಉತ್ತಮವಾದ ಎಲ್ ಸಿ ಡಿ ಪರದೆ ಮತ್ತು ಸೌಂಡ್ ಸಿಸ್ಟಮ್ ನೊಂದಿಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ಸದರಿ ಕ್ರಿಕೆಟ್ ಪಂದ್ಯಾವಳಿಯ ವೀಕ್ಷಣೆಗೆ ಕ್ರೀಡಾಪಟುಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.


Share