ಮೈಸೂರು: ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

Share

ಮೈಸೂರು

ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅನ್ಯಾಯದ ವಿರುದ್ಧ ಹೋರಾಟ ಮಾಡಿದವರಲ್ಲಿ ಪ್ರಮುಖರು . ಎಂಬುದನ್ನು ಮರೆಯದೆ ಕನ್ನಡಿಗರಿಗೆ ಉದ್ಯೋಗ ದೊರಕಿಸಿಕೊಡುವಲ್ಲಿ ಮಹತ್ವವಾದ ಡಾ . ಸರೋಜನಿ ಮಹಿಷಿ ಪರಿಷ್ಕೃತ ವರದಿಯನ್ನು ಸದನದಲ್ಲಿ ಮಂಡನೆ ಮಾಡಿ ಕಾಯಿದೆಯಾಗಿ ಜಾರಿಗೆ ತರಬೇಕೆಂದು ಸಮಸ್ತ ಕನ್ನಡಿಗರ ಪರವಾಗಿ ಕದಂಬ ಸೈನ್ಯ ಮನವಿ ಮಾಡುತ್ತದೆ . ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿಕೊಟ್ಟು ಹೊಸ ಇತಿಹಾಸ ಸೃಷ್ಟಿಸಿದ ಕೀರ್ತಿ ನಿಮಗೆ ಸಲ್ಲಲಿ ಕನ್ನಡಿಗರು ಸದಾಕಾಲವೂ ನಿಮಗೆ ಕೃತಜ್ಞತೆ ಸಲ್ಲಿಸುತ್ತಿರುತ್ತಾರೆ . ಇಲ್ಲದಿದ್ದರೆ ಸಿಡಿದೇಳುತ್ತಾರೆ ಎಂಬ ಎಚ್ಚರಿಕೆಯನ್ನು ಕದಂಬ ಸೈನ್ಯ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ
. ಸೆಪ್ಟೆಂಬರ್ 21 ರಂದು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಸದನದಲ್ಲಿ ಮಂಡಿಸಿ ಕಾಯ್ದೆಯಾಗಿ ಜಾರಿಗೆ ತರಬೇಕೆಂದು ಕನ್ನಡಿಗರ ಪರವಾಗಿ ಮಾನ್ಯ ಮುಖ್ಯಮಂತ್ರಿಗಳಲ್ಲಿ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ , ಮೈಸೂರು ಜಿಲ್ಲಾಧ್ಯಕ್ಷ ಎ.ನಾಗೇಂದ್ರ ಮೈಸೂರ ವಿಭಾಗ ಸಂಚಾಲಕ ಎಸ್.ವೆಂಕಟೇಶ್ , ಟಿ.ನರಸೀಪುರ ತಾಲ್ಲೂಕು ಅಧ್ಯಕ್ಷ ಮಹದೇವನಾಯ್ಕ , ರಾಜ್ಯ ಸಮಿತಿಯ ಸದಸ್ಯ ಉಮ್ಮಡಳ್ಳಿ ನಾಗೇಶ್ ಮತ್ತು ಪದಾಧಿಕಾರಿಗಳು ಪಾಲ್ಗೊಂಡಿದ್ದರು . .


Share