ಮೈಸೂರು: ಸುದ್ದಿ ಗವಾಕ್ಷಿ

443
Share

ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಜಿಲ್ಲಾ ಪ್ರವಾಸ HB
ಮೈಸೂರು. ಮೇ.28.(ಕರ್ನಾಟಕ ವಾರ್ತೆ):- ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮೇ 29 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 11.00 ಗಂಟೆಗೆ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಕಣಗಾಲು ಗ್ರಾಮದ ಕಾವೇರಿ ನದಿ ಮೂಲದಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಉದ್ಘಾಟನಾ ಸಮಾರಂಭ ಹಾಗೂ ವಿದ್ಯುತ್ ಉಪಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗುವರು.
ಮಧ್ಯಾಹ್ನ 12.00 ಗಂಟೆಗೆ ಪಿರಿಯಾಪಟ್ಟಣ ತಾಲ್ಲೂಕಿನ ಚಿಕ್ಕಹೊಸೂರು ಗ್ರಾಮ ಹಾಗೂ ಇತರೆ 15 ಗ್ರಾಮಗಳಿಗೆ ಕಾವೇರಿ ನದಿ ಮೂಲದಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಘಟಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 1.00 ಗಂಟೆಗೆ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡಹರವೆ ಸೇರಿದಂತೆ 19 ಟಿಬೆಟಿಯನ್ ಕ್ಯಾಂಪ್‍ಗಳಿಗೆ ಕುಡಿಯುವ ನೀರಿನ ಯೋಜನಾ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ 1.30 ಗಂಟೆಗೆ ಪಿರಿಯಾಪಟ್ಟಣ ತಾಲ್ಲೂಕು ಬೈಲುಕುಪ್ಪೆಯ ಅಂಗನವಾಡಿ ಕಟ್ಟಡ, ಗೋದಾಮು ಕಟ್ಟಡ, ಗ್ರಂಥಾಲಯ ಕಟ್ಟಡ ಉದ್ಘಾಟನೆ ಮಾಡುವರು.
ಬಳಿಕ ಮಧ್ಯಾಹ್ನ 4.00 ಗಂಟೆಗೆ ಮೈಸೂರಿನಲ್ಲಿ ಜೂನ್ 5ರ ಪರಿಸರ ದಿನಾಚರಣೆ ಅಂಗವಾಗಿ ಹಿರಿಯ ಅಧಿಕಾರಿಗಳ ಜೊತೆ ಚರ್ಚೆನಡೆಸಲಿದ್ದಾರೆ.

ಮುಂದುವರೆದ ಸಚಿವ ರಮೇಶ್ ಜಾರಿಕಿಹೊಳಿ ಜಿಲ್ಲಾ ಪ್ರವಾಸ
ಮೈಸೂರು, ಮೇ.28. (ಕರ್ನಾಟಕ ವಾರ್ತೆ):- ಜಲಸಂಪನ್ಮೂಲ ಸಚಿವರಾದ ರಮೇಶ್ ಲ. ಜಾರಕಿಹೊಳಿ ಅವರು ಮೇ 29 ರಂದು ಮೈಸೂರು ಜಿಲ್ಲಾ ಪ್ರವಾಸ ಮುಂದುವರೆಸಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಸುತ್ತೂರಿಗೆ ಭೇಟಿ ನೀಡಿ ಏತ ನೀರಾವರಿ ಯೋಜನೆ-1ನೇ ಹಂತದ ಕಾಮಗಾರಿ ವೀಕ್ಷಿಸಲಿದ್ದಾರೆ. ಬೆಳಿಗ್ಗೆ 12.30 ಗಂಟೆಗೆ ಸರಗೂರಿಗೆ ಭೇಟಿ ನೀಡಿ, ಏತ ನೀರಾವರಿ ಯೋಜನೆಯ ಹೆಡ್ ವಕ್ರ್ಸ್(ಪಂಪ್‍ಹೌಸ್) ಕಾಮಗಾರಿ ವೀಕ್ಷಣೆ ಮಾಡುವರು.
ಮಧ್ಯಾಹ್ನ 1.30 ಗಂಟೆಗೆ ಗುಂಡಾಲ್ ಜಲಾಶಯಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 3.30 ಗಂಟೆಗೆ ಮತ್ತಿಪುರ ಪೈಪ್ ಸಂಗ್ರಹಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ಬಳಿಕ ರಾತ್ರಿ 8.00 ಗಂಟೆಗೆ ಕೇಂದ್ರಸ್ಥಾನಕ್ಕೆ ತೆರಳುವರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಜಿಲ್ಲಾ ಪ್ರವಾಸ
ಮೈಸೂರು, ಮೇ.28. (ಕರ್ನಾಟಕ ವಾರ್ತೆ):- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್.ಸುರೇಶ್‍ಕುಮಾರ್ ಅವರು ಮೇ 29 ರಂದು ಜಿಲ್ಲಾ ಪ್ರವಾಸ ಕೈಗೊಂಡಿರುತ್ತಾರೆ.
ಬೆಳಿಗ್ಗೆ 9.30 ಗಂಟೆಗೆ ಮೈಸೂರಿಗೆ ಆಗಮಿಸುವ ಸಚಿವರು ಬೆಳಿಗ್ಗೆ 10.30 ಗಂಟೆಗೆ ಆಡಳಿತ ತರಬೇತಿ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಶಿಕ್ಷಣ ಇಲಾಖೆಯ ಡಿ.ಡಿ.ಪಿ.ಐ ಮತ್ತು ಬಿ.ಇ.ಓಗಳೊಂದಿಗೆ ಪರಿಶೀಲನಾ ಸಭೆ ನಡೆಸುವರು.
ಮಧ್ಯಾಹ್ನ 3.30 ಗಂಟೆಗೆ ಕೇಂದ್ರಸ್ಥಾನ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ರಕ್ಕಸ ಮಿಡತೆಗಳ ನಿಯಂತ್ರಣಕ್ಕೆ ಕಾರ್ಯತಂತ್ರ: ಸಚಿವ ರಮೇಶ್ ಲ. ಜಾರಕಿಹೊಳಿ
ಮೈಸೂರು, ಮೇ.28.(ಕರ್ನಾಟಕ ವಾರ್ತೆ):- ಜಲ ಸಂಪನ್ಮೂಲ ಸಚಿವರಾದ ರಮೇಶ್ ಲ. ಜಾರಕಿಹೊಳಿ ಅವರು ಗುರುವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅವರ ಆರ್ಶೀವಾದ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉತ್ತರ ಭಾರತದಲ್ಲಿ ರಕ್ಕಸ ಮಿಡತೆಗಳು ಬೆಳೆ ನಾಶ ಪಡಿಸುತ್ತಿದ್ದು, ರಾಜ್ಯದಲ್ಲಿ ಕೃಷಿ ಇಲಾಖೆ ಹಾಗೂ ಜಲ ಸಂಪನ್ಮೂಲ ಇಲಾಖೆ ಒಟ್ಟಿಗೆ ಸಭೆ ನಡೆಸಿ ಮಿಡತೆಗಳ ನಿಯಂತ್ರಣಕ್ಕೆ ಕಾರ್ಯತಂತ್ರ ರೂಪಿಸಲಾಗುವುದು ಎಂದರು.
ಕೇಂದ್ರ ಸರ್ಕಾರ ಸಂಕಷ್ಟದ ಕಾಲದಲ್ಲಿ ಅತ್ಯುತ್ತಮವಾದ ಆರ್ಥಿಕ ಪ್ಯಾಕೇಜ್ ಘೋಷಿಸಿದೆ. 20 ಲಕ್ಷ ಕೋಟಿ ರೂಪಾಯ ಪ್ಯಾಕೇಜ್ ಇನ್ನೂ ಇಲಾಖಾವಾರು ಹಂಚಿಕೆಯಾಗಿಲ್ಲ. ಅದರಲ್ಲಿ ಜಲ ಸಂಪನ್ಮೂಲ ಇಲಾಖೆಗೆ ಎಷ್ಟು ಸಿಗುತ್ತದೆ ಎಂಬುದು ಶೀಘ್ರದಲ್ಲೇ ತಿಳಿಯಲಿದೆ ಎಂದು ಮಾಹಿತಿ ನೀಡಿದರು.
ಕೃಷಿಗೆ ನೀರು ಹರಿಸುವ ವಿಚಾರ ಸಂಬಂಧ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆದಿದ್ದು, ರಾಜ್ಯದ ಜಲಾಶಯಗಳ ಸ್ಥಿತಿಗತಿ ಗಮನಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕಾವೇರಿ ಹಾಗೂ ಕಬಿನಿ ಜಲಾಶಯಗಳು ಅಂತರರಾಜ್ಯ ಸಂಬಂಧ ಹೊಂದಿವೆ. ಈ ಜಲಾಶಯಗಳಿಂದ ನೀರು ಹರಿಸಲು ಕೇಂದ್ರೀಯ ಜಲ ಮಂಡಳಿಯಲ್ಲಿ ಅಧಿಕಾರಿಗಳ ಸಭೆ ನಡೆದಿದೆ. ಸಭೆಯಲ್ಲಿ ನೀರು ಹರಿಸುವ ಸಂಬಂಧ ಚರ್ಚೆಯಾಗಿದೆ ಎಂದು ತಿಳಿಸಿದರು.
ಅಂತರ್‍ಜಲ ಮಟ್ಟ ಹೆಚ್ಚಿಸಲು ರೈತರು ತುಂತುರು ನೀರಾವರಿ ಮೂಲಕ ವ್ಯವಸಾಯ ಮಾಡುವುದು ಒಳ್ಳೆಯದು. ಅಂತರ್ಜಲ ಮಟ್ಟ ಹೆಚ್ಚಿಸಲು ಇಲಾಖೆ ವತಿಯಿಂದ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮಾಹಿತಿ ನೀಡಿದರು.

ರಾಜ್ಯದ ಎಲ್ಲಾ ನದಿಗಳ ಸಮಸ್ಯೆಗಳನ್ನು ಶೀಘ್ರದಲ್ಲೇ ಸರಿಪಡಿಸುತ್ತೇವೆ: ರಮೇಶ್ ಲ. ಜಾರಕಿಹೊಳೆ
ಮೈಸೂರು, ಮೇ.28.(ಕರ್ನಾಟಕ ವಾರ್ತೆ):- ರಾಜ್ಯದ ಎಲ್ಲಾ ನದಿಗಳ ಸಮಸ್ಯೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಸರಿಪಡಿಸುತ್ತೇವೆ. ವೈಯಕ್ತಿಕ ಹಾಗೂ ರಾಜಕೀಯವಾಗಿ ನಮ್ಮ ರಾಜ್ಯದ ರೈತ ಭಾಂದವರಿಗೆ ನದಿ ಕೊನೆಯ ಭಾಗವನ್ನು ಮುಟ್ಟುವವರೆಗೂ ಕುಡಿಯಲು ಹಾಗೂ ಕೃಷಿಗೆ ನೀರು ಪೂರೈಸುವಂತಹ ಕೆಲಸವನ್ನು ಮಾಡುತ್ತೇವೆ ಎಂದು ಜಲ ಸಂಪನ್ಮೂಲ ಸಚಿವರಾದ ರಮೇಶ್ ಲ. ಜಾರಕಿಹೊಳಿ ಅವರು ತಿಳಿಸಿದರು.
ಗುರುವಾರ ಹೆಚ್.ಡಿ ಕೋಟೆ ಕಬಿನಿ ಜಲಾಶಯ ಪರಿವೀಕ್ಷಣೆ ಸಂದರ್ಭದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸಂಕಷ್ಟದ ಕಾಲದಲ್ಲಿ ಅತ್ಯುತ್ತಮವಾದ ಆರ್ಥಿಕ ಪ್ಯಾಕೇಜ್ ಘೋಷಿಸಿದೆ. ಅದರಲ್ಲಿ ಜಲ ಸಂಪನ್ಮೂಲ ಇಲಾಖೆಗೆ ಎಷ್ಟು ಸಿಗುತ್ತದೆ ಎಂಬುದು ಶೀಘ್ರದಲ್ಲೇ ತಿಳಿಯಲಿದೆ ಎಂದು ಮಾಹಿತಿ ನೀಡಿದರು.
ಇಲಾಖೆವಾರು ಎಲ್ಲಾ ಜಲಾಶಯಗಳನ್ನು ವೀಕ್ಷಣೆ ಮಾಡಿದ್ದೇನೆ. ಕೃಷಿಗೆ ನೀರು ಹರಿಸುವ ವಿಚಾರ ಸಂಬಂಧ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆದಿದ್ದು, ರಾಜ್ಯದ ಜಲಾಶಯಗಳ ಸ್ಥಿತಿಗತಿ ಗಮನಿಸಿ ತೀರ್ಮಾನ ಕೈಗೊಳ್ಳಲಾಗುವುದು. ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಲ್ಲಿನ ಲೋಪದೋಷಗಳನ್ನು ಬಗೆಹರಿಸುತ್ತೇನೆ ಎಂದು ಹೇಳಿದರು.
ರಾಜ್ಯದಲ್ಲಿ ಉತ್ತಮವಾದ ಮಳೆಯಾಗಿದ್ದು, ಕುಡಿಯಲು ಮತ್ತು ಕೃಷಿಗೆ ಯಾವುದೇ ರೀತಿ ನೀರಿನ ಅಭಾವ ಇಲ್ಲ. ಕಾವೇರಿ ಹಾಗೂ ಕಬಿನಿ ಜಲಾಶಯಗಳು ಅಂತರರಾಜ್ಯ ಸಂಬಂಧ ಹೊಂದಿವೆ. ಈ ಜಲಾಶಯಗಳಿಂದ ನೀರು ಹರಿಸಲು ಕೇಂದ್ರೀಯ ಜಲ ಮಂಡಳಿಯಲ್ಲಿ ಅಧಿಕಾರಿಗಳ ಸಭೆ ನಡೆದಿದೆ. ಅಂತರ್ಜಲ ಮಟ್ಟ ಹೆಚ್ಚಿಸಲು ಇಲಾಖೆ ವತಿಯಿಂದ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು, ಜಿಲ್ಲಾ ಪಂಚಾಯತ್ ಅದ್ಯಕ್ಷರಾದ ಪರಿಮಳಾ ಶ್ಯಾಂ, ತಹಸೀಲ್ದಾರಾದ ಮಂಜುನಾಥ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಮಂಜುಳ ದೇವಣ್ಣ, ಮಾಜಿ ಸಚಿವ ಎಂ.ಶಿವಣ್ಣ, ಮಾಜಿ ವಿಧಾನ ಪರಿಷತ್ತ್ ಸದಸ್ಯ ಸಿದ್ದಾರಾಜು, ಮುಖ್ಯ ಇಂಜಿನೀಯರ್ ಶಂಕರೇಗೌಡ, ತಾಲ್ಲೂಕು ಪಂಚಾಯತ್ ಇಓ ರಾಮಲಿಂಗಯ್ಯ, ನೋಡೆಲ್ ಅಧಿಕಾರಿ ಗಿರೀಶ್, ತಾಲ್ಲೂಕು ಆರೋಗ್ಯ ಅಧಿಕಾರಿ ರವಿಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ: ಸಚಿವ ರಮೇಶ್ ಲ. ಜಾರಕಿಹೊಳಿ
ಮೈಸೂರು, ಮೇ.28.(ಕರ್ನಾಟಕ ವಾರ್ತೆ):- ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದಂತೆ ಕೆಲವು ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗುತ್ತಿಗೆದಾರರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಿ ಎಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ್ ಲ. ಜಾರಿಕಿಹೊಳಿ ಅವರು ಸೂಚಿಸಿದರು.
ಕಾವೇರಿ ಜಲಾನಯನ ಪ್ರದೇಶದ ನೀರಾವರಿ ಯೋಜನೆ ಅನುμÁ್ಠನ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ಜಲದರ್ಶಿನಿಯಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ ಪ್ರವಾಹ ಉಂಟಾಗಿದ್ದು, ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರ್‍ರಚಿಸುವಂತೆ ಹೇಳಿದರು.
ಕೃಷ್ಣರಾಜಸಾಗರ, ಕಬಿನಿ, ನುಗು, ತಾರಕ ಜಲಾಶಯಗಳ ಬಗ್ಗೆ ಹಾಗೂ ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿ ಮತ್ತು ಯೋಜನೆಗಳನ್ನು ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಮಾತನಾಡಿದ ಅವರು, ಮೈಸೂರು ಜಿಲ್ಲೆಯ ಕೆಲವು ತಾಲ್ಲೂಕುಗಳಲ್ಲಿ ನೀರಾವರಿ ಪ್ರದೇಶ ಕಡಿಮೆಯಿದ್ದು, ಈ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ನೀರಾವರಿ ಕ್ಷೇತ್ರ ವಿಸ್ತರಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ವ್ಯಾಪ್ತಿಗೆ ಒಳಪಡುವ ಎಲ್ಲಾ ಏತ ನೀರಾವರಿಗೆ ಸಂಬಂಧಿಸಿದ ವಿದ್ಯುತ್ ಬಿಲ್‍ಗಳನ್ನು ತಕ್ಷಣ ಪಾವತಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಮೈಸೂರು ಭಾಗದ ವಿಧಾನಸಭಾ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಉಂಟಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಿ. ಇಲ್ಲದಿದ್ದರೆ ನನ್ನ ಗಮನಕ್ಕೆ ತನ್ನಿ ನಾನು ಸೂಕ್ತ ಕ್ರಮ ವಹಿಸುತ್ತೇನೆ ಎಂದು ಸ್ಥಳೀಯ ಶಾಸಕರಿಗೆ ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಬಿ.ಹರ್ಷವರ್ಧನ, ಎಚ್.ಪಿ.ಮಂಜುನಾಥ್, ಕೆ.ಮಹದೇವು, ಅನಿಲ್ ಚಿಕ್ಕಮಾದು, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸೇರಿದಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ನೀರಾವರಿ ಅಭಿವೃದ್ಧಿಗೆ ಒತ್ತು: ಸಚಿವ ರಮೇಶ್ ಲ.ಜಾರಕಿಹೊಳಿ
ಮೈಸೂರು, ಮೇ.28. (ಕರ್ನಾಟಕ ವಾರ್ತೆ):- ಮೇಕೆದಾಟು ಯೋಜನೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಕೃಷ್ಣರಾಜ ಸಾಗರ ಮತ್ತು ಕಬಿನಿ ಜಲಾಶಯಗಳ ಕೆಳಭಾಗದಲ್ಲಿ ಬಿಳಿಗುಂಡ್ಲು ವರೆಗೆ ನೀರನ್ನು ಸಂಗ್ರಹಿಸಲು ಯಾವುದೇ ಅಣೆಕಟ್ಟು ಇಲ್ಲವಾದ್ದರಿಂದ ಕಾವೇರಿ ನದಿಗೆ ಅಡ್ಡಲಾಗಿ ಮೇಕುದಾಟು ಬಳಿ ಶೇಖರಣಾ ಜಲಾಶಯವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಲ. ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಕಾವೇರಿ ನ್ಯಾಯಾಧಿಕಾರಣದ ಹಾಗೂ ಸರ್ವೋಚ್ಛ ನ್ಯಾಯಾಲಯದ 16-02-2018ರ ತೀರ್ಪಿನಂತೆ ಕರ್ನಾಟಕ
ರಾಜ್ಯವು ತಮಿಳುನಾಡು ರಾಜ್ಯಕ್ಕೆ ಮಾಸಿಕವಾಗಿ ನಿಗಧಿಪಡಿಸಲಾದ ವಾರ್ಷಿಕ ನೀರಿನ ಪ್ರಮಾಣ 177.25 ಟಿ.ಎಂ.ಸಿ ನೀರು ಹರಿಸಲು ಹಾಗೂ 400 ಮೆ.ವ್ಯಾಟ್ ವಿದ್ಯುತ್ ಉತ್ಪಾದಿಸಲು ಮತ್ತು ಬೆಂಗಳೂರು ನಗರಕ್ಕೆ 4.75 ಟಿ.ಎಂ.ಸಿ ಕುಡಿಯುವ ನೀರನ್ನು ಒದಗಿಸಲು ಉದ್ದೇಶಿಸಲಾಗಿದೆ.
ಈ ಯೋಜನೆಯು ಕೇಂದ್ರ ಜಲ ಆಯೋಗ, ನವದೆಹಲಿ ರವರು ದಿನಾಂಕ 22-11-2018 ರಲ್ಲಿ ಸದರಿ ಯೋಜನೆಯ ವಿವರವಾದ ಯೋಜನಾ ವರದಿ ತಯಾರಿಸಲು ತಾತ್ವಿಕ ಅನುಮೋದನೆ ನೀಡಿರುತ್ತಾರೆ.
ವಿವರವಾದ ಯೋಜನಾ ವರದಿಯನ್ನು ರೂ. 9,000,00 ಕೋಟಿ ಮೊತ್ತಕ್ಕೆ ತಯಾರಿಸಿ ದಿನಾಂಕ 18-01-2019 ರಂದು ಕೇಂದ್ರ ಜಲ ಆಯೋಜ, ದೆಹಲಿಗೆ ಸಲ್ಲಿಸಲಾಗಿದೆ.
ಕೃಷ್ಣರಾಜಸಾಗರ ಜಲಾಶಯದ ಬೃಂದಾವನವನ್ನು ಮೇಲ್ದರ್ಜೆಗೇರಿಸುವ ಯೋಜನೆಯನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಕೈಗೊಳ್ಳುವ ಕಾಮಗಾರಿ ಸಂಬಂಧ 1425.00 ಕೋಟಿ ರೂ. ಮೊತ್ತದ ಬೃಹತ್ ಯೋಜನೆಯನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ಸದರಿ ಯೋಜನೆಯನ್ನು ನಾಲ್ಕು ಹಂತದಲ್ಲಿ ಕೈಗೊಳ್ಳಲಾಗುವುದು ಹಾಗೂ ಹಂತ 1ರ ಈFinancial Viability Proposal ಅನ್ನು ಸಚಿವ ಸಂಪುಟದ ಅನುಮೋದನೆ ಮಂಡಿಸಲು ಸೂಚಿಸಲಾಗಿದೆ.
ಇದಕ್ಕೆ ಅನುಸಾರವಾಗಿ 410.00 ಕೋಟಿ ರೂ. ಮೊತ್ತದ ಹಂತ 1ರ ಪ್ರಸ್ತಾವನೆಗೆ ಹಾಗೂ 1425.00 ಕೋಟಿ ರೂ. ಮೊತ್ತದ ಸಮಗ್ರ ಪ್ರಸ್ತಾವನೆಗೆ ತಾತ್ವಿಕ ಅನುಮೋದನೆ ಕೋರಿ ಪ್ರಸ್ತಾವನೆಯನ್ನು ದಿನಾಂಕ 07-02-2020 ರಲ್ಲಿ ಸಲ್ಲಿಸಲಾಗಿದೆ. ಸದರಿ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ.
ಕೃಷ್ಣರಾಜ ಸಾಗರ ಜಲಾಶಯದಲ್ಲಿರುವ 136 ಸಂಖ್ಯೆಯ ಪ್ರವಾಸ ನಿಯಂತ್ರಣ ಗೇಟ್ ತುಂಬ ಹಳೆಯದಾಗಿದ್ದು, ನೀರಿನ ಸೋರುವಿಕೆ ಅಧಿಕವಾಗಿರುವ ಹಿನ್ನೆಲೆಯಲ್ಲಿ ಅವುಗಳನ್ನು ಬದಲಾಯಿಸಲು ಹಾಗೂ ಜಲಾಶಯದ ಸುರಕ್ಷತೆ ದೃಷ್ಠಿಯಿಂದ ವಿಶ್ವ ಬ್ಯಾಂಕ್ ನೆರವಿನೊಂದಿಗೆ ಡಿ.ಆರ್.ಐ.ಪಿ ಯೋಜನೆಯಡಿ 60.00 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ.
ಕಬಿನಿ ಜಲಾಶಯ ವ್ಯಾಪ್ತಿಯಲ್ಲಿ ವನಸಿರಿ ಎಂಬ ಉದ್ಯಾನವನ ನಿರ್ಮಿಸುವ ಸಂಬಂಧ i-ಜeಛಿಞ ಸಂಸ್ಥೆಯವರಿಂದ ರೂ. 60.00 ಕೋಟಿ ಮೊತ್ತದ ವಿವರವಾದ ಯೋಜನಾ ವರದಿ ತಯಾರಿಸಲಾಗಿದ್ದು, ಇದನ್ನು ಪಿ.ಪಿ.ಪಿ ಯೋನೆಯಲ್ಲಿ ಕೈಗೊಳ್ಳಲು ಕಾರ್ಯಸಾಧುವಲ್ಲದಿರುವ ಹಿನ್ನೆಲೆಯಲ್ಲಿ ಇ.ಪಿ.ಸಿ ಮಾದರಿಯಲ್ಲಿ ಕೈಗೊಳ್ಳುವ ಬಗ್ಗೆ ಪರಿಶೀಲನೆಯಲ್ಲಿದೆ.
ಕಬಿನಿ ಜಲಾಶಯದ ಕೂಡು ರಸ್ತೆಗೆ ಕಾಂಕ್ರೀಟ್ ಮತ್ತು ಕೆಲಭಾಗದ ಸೇತುವೆ ನಿರ್ಮಾಣಕ್ಕಾಗಿ ರೂ. 50.00
ಕೋಟಿ ಮೊತ್ತದ ಕಾಮಗಾರಿಗಳನ್ನು ಟಿ.ಎಸ್.ಪಿ ಅಡಿಯಲ್ಲಿ ಕೈಗೊಳ್ಳಲು ಯೋಜನೆ ರೂಪಿಸಿದ್ದು, ಅನುಮೋದನೆ ಹಂತದಲ್ಲಿದೆ.
ಕೆ.ಆರ್.ಎಸ್, ಕಬಿನಿ, ಹಾರಂಗಿ ಮತ್ತು 13 ಮಾಧ್ಯಮ ನೀರಾವರಿ ಯೋಜನೆಗಳಲ್ಲಿರುವ ನಾಲಾ ಜಾಲದ ಒಟ್ಟು ಉದ್ದ 6530.00 ಕಿ.ಮೀ ಗಳಿದ್ದು, ಇದರಲ್ಲಿ 2614.00 ಕಿ.ಮೀ ಉದ್ದದ ನಾಲೆಗಳನ್ನು ಆಧುನೀಕರಣ ಮಾಡಲಾಗಿದ್ದು, ಉಳಿದ 3916.00 ಕಿ.ಮೀ ಉದ್ದದ ನಾಲೆಗಳ ಆಧುನೀಕರಣವನ್ನು ಹಂತ ಹಂತವಾಗಿ ಕೈಗೊಳ್ಳಲಾಗುವುದು.
ನೀರಿನ ಸದ್ಬಳಕೆ ಮತ್ತು ಮಿತವ್ಯಯ ಸಾಧಿಸಲು ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಅಳವಡಿಸುವ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ಯೋಜನೆಯ ವಿ.ಸಿ ನಾಲೆ ತುದಿ ಹಂತದ 25000 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರನ್ನು ಒದಗಿಸಲು ಪೂರಿಗಾಲಿ ಸೂಕ್ಷ್ಮ ನೀರಾವರಿ ಯೋಜನೆ ಕಾಮಗಾರಿ ಪ್ರಗತಿಯಲ್ಲಿರುತ್ತದೆ.
ಕಾವೇರಿ ನ್ಯಾಯಾಧೀಕರಣದ ಅವಾರ್ಡ್ ಹಾಗೂ ತದನಂತರದ ಸುಪ್ರ್ರೀಂ ಕೋರ್ಟ್‍ನ ಅಂತಿಮ ಆದೇಶದವನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅ.C.W.M.A & C.W.R.C (Cauvery Water Management Authority and Cauvery Water Regulation Committee) ಗಳು ಅಸ್ತಿತ್ವಕ್ಕೆ ಬಂದಿದ್ದು, ಕಾರ್ಯಾರಂಭ ಮಾಡುತ್ತಿವೆ.
ದಿನಾಂಕ 27-05-2020 ರಂದು ಅ.W.ಖ.ಅ ಸಭೆ ಜರುಗಿದ್ದು, ಕಾವೇರಿ ಜಲಾಯನಯ ಪ್ರದೇಶದ ವ್ಯಾಪ್ತಿಯಲ್ಲಿನ ಜಲಾಶಯಗಳಿಂದ 2020ನೇ ಸಾಲಿನ ಮುಂಗಾರು ಹಂಗಾಮಿಗೆ ನೀರನ್ನು ಬಿಡುವ ಬಗ್ಗೆ ದಿನಾಂಕ 09.06.2020 ರಂದು ಮತ್ತೊಮ್ಮೆ ಜರುಗಲಿರುವ ಸಭೆಯಲ್ಲಿ ಹವಮಾನ ಪರಿಸ್ಥಿತಿ, ಮಳೆ ಪ್ರಮಾಣ ಹಾಗೂ ನದಿಗಳಿಂದ ಜಲಾಶಯಕ್ಕೆ ಹರಿದು ಬರುವ ಒಳಹರಿವಿನ ಸ್ಥಿತಿಗತಿಗಳ ಆಧಾರದ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು.
ಸಾಮಾನ್ಯವಾಗಿ ಪ್ರತಿ ಮುಂಗಾರು ಹಂಗಾಮಿಗೆ ಜುಲೈ ಮಾಹೆಯ ಎರಡನೇ ವಾರದಲ್ಲಿ ಮಳೆ ಪರಿಸ್ಥಿತಿ ಹಾಗೂ ಒಳ ಹರಿವಿನ ಪ್ರಮಾಣದ ಅನ್ವಯ ಜಲಾಶಯಗಳಿಂದ ಕಾಲುವೆಗಳಿಗೆ ನೀರನ್ನು ಹರಿಸುವ ಪದ್ಧತಿಯು ಬಳಕೆಯಲ್ಲಿದೆ.
ಆಯವ್ಯಯ 2020-21 ಅಡಿಯಲ್ಲಿ “ನೀರು ಸಂರಕ್ಷಣೆ ಹಿತದೃಷ್ಟಿಯಿಂದ ರಾಜ್ಯದ ಬೃಹತ್ ನೀರಾವರಿ ಯೋಜನೆಯಡಿಯಲ್ಲಿನ ಅಚ್ಚುಕಟ್ಟು ಪ್ರದೇಶಗಳಲ್ಲಿ ಈFlood Irrigation ಪದ್ಧತಿಯನ್ನು ಇಸ್ರೇಲ್ ಮಾದರಿಯಲ್ಲಿ ಸೂಕ್ಷ್ಮ ನೀರಾವರಿಗೆ ಪರಿವರ್ತಿಸಲು ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗುವುದು” ಎಂದು ಘೋಷಿಸಿದ್ದು, ಇದರ ಮೂಲಕ ಜಲಸಂಪನ್ಮೂಲ ಇಲಾಖೆಯ ನೀರಿನ ಸಂರಕ್ಷಣೆ ಹಾಗೂ ಸದ್ಭಳಕೆಗೆ ಒತ್ತು ನೀಡಿರುತ್ತದೆ.

ಹಾಪ್‍ಕಾಮ್ಸ್‍ನಿಂದ ಗ್ರಾಹಕರ ಮನೆ ಬಾಗಿಲಿಗೆ ತಾಜಾ ಹಣ್ಣು
ಮೈಸೂರು, ಮೇ.28. (ಕರ್ನಾಟಕ ವಾರ್ತೆ):- ತೋಟಗಾರಿಕೆ ಇಲಾಖೆಯ ಅಧೀನದ ಹಾಪ್‍ಕಾಮ್ಸ್ ಸಂಸ್ಥೆ ವತಿಯಿಂದ ಮೈಸೂರು ನಗರ ಜನತೆಯ ಅನುಕೂಲಕ್ಕಾಗಿ ಗ್ರಾಹಕರ ಮನೆ ಬಾಗಿಲಿಗೆ ತಾಜಾ ಹಣ್ಣುಗಳನ್ನು ಸರಬರಾಜು ಮಾಡುವ ಉದ್ದೇಶದಿಂದ “ಊಔPಅಔಒS ಔಓಐIಓಇ” ಒobiಟe ಚಿಠಿಠಿನ್ನು ಅಭಿವೃದ್ಧಿ ಪಡಿಸಲಾಗಿದೆ.
ಸದರಿ ಆ್ಯಪ್‍ನ್ನು ಉoogಟe ಠಿಟಚಿಥಿ sಣoಡಿe ನಿಂದ “ಊಔPಅಔಒS ಔಓಐIಓಇ” ಮೊಬೈಲ್ ಆ್ಯಪ್‍ನ್ನು ಡೌನ್‍ಲೋಡ್ ಮಾಡಿಕೊಂಡು ಗ್ರಾಹಕರು ಈ ಸೌಲಭ್ಯವನ್ನು ಸದುಪಯೋಗ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖೈ: 8277814143ನ್ನು ಸಂಪರ್ಕಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೂವಿನ ಬೆಳೆದು ನಷ್ಟ ಹೊಂದಿದ ರೈತರಿಗೆ ಪರಿಹಾರ
ಮೈಸೂರು. ಮೇ.28.(ಕರ್ನಾಟಕ ವಾರ್ತೆ):- ಲಾಕ್‍ಡೌನ್ ವೇಳೆಯಲ್ಲಿ ಹೂವಿನ ಬೆಳೆಯಲ್ಲಿ ನಷ್ಟ ಹೊಂದಿದ ರೈತರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಅಲ್ಲದೆ ಮುಂಬರುವ ದಿನಗಳಲ್ಲಿ ಹೂವು ಬೆಳೆಯನ್ನು ಉತ್ತೇಜಿಸಿ ಪ್ರೋತ್ಸಾಹಿಸುವ ಹಿನ್ನೆಲೆಯಲ್ಲಿ ಹೆಕ್ಟೇರ್‍ಗೆ ಗರಿಷ್ಟ 25,000 ರೂ ಪರಿಹಾರ ನೀಡಲಾಗುತ್ತಿದೆ.
ತೋಟಗಾರಿಕೆ ಇಲಾಖೆಯು ಕೈಗೊಂಡ ಮುಂಗಾಲು 2019 ಮತ್ತು ಹಿಂಗಾರು 2019 ಬೆಳೆ ಸಮೀಕ್ಷೆಯಲ್ಲಿ ಹೂವಿನ ಬೆಳೆಗಳನ್ನು ಬೆಳೆದಿರುವುದು ದೃಢಪಟ್ಟಿದ್ದು, ತಾಲ್ಲೂಕಿನಲ್ಲಿ 102 ಬೆಳೆಗಾರರಿರುವುದು ದೃಢಪಟ್ಟಿರುತ್ತದೆ. ಸದರಿ ರೈತರ ಪಟ್ಟಿಯನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿ, ರೈತ ಸಂಪರ್ಕ ಕೇಂದ್ರ ಹಾಗೂ ಇಲಾಖಾ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿರುತ್ತದೆ. ಈ ಸಮೀಕ್ಷೆ ಪಟ್ಟಿಯಲ್ಲಿ ಹೆಸರಿಲ್ಲದ ರೈತರು ನಿಗಧಿತ ನಮೂನೆಯಲ್ಲಿ ಆಧಾರ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಪ್ರತಿಯೊಂದಿಗೆ ಮೇ 30 ರೊಳಗೆ ಅರ್ಜಿ ಸಲ್ಲಿಸುವುದು.
ಲಾಕ್‍ಡೌನ್ ಅವಧಿ ಮಾರ್ಚ್ ಮೂರನೇವಾರ ಏಪ್ರಿಲ್ ಹಾಗೂ ಮೇ 17ರ ವರೆಗಿನ ಅವಧಿಯಲ್ಲಿ ಹೂ ಬೆಲೆ ಕಟಾವಿಗೆ ಬಂದು ನಷ್ಟ ಹೊಂದಿದ ರೈತರಿಗೆ ಮಾತ್ರ ಅವಕಾಶವಿರುತ್ತದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಆಕ್ಷೇಪಣೆ ಇದ್ದಲ್ಲಿ ಅರ್ಜಿ ಸಲ್ಲಿಸಿ
ಮೈಸೂರು, ಮೇ.28. (ಕರ್ನಾಟಕ ವಾರ್ತೆ):- ಶಿಶು ಅಭಿವೃದ್ಧಿ ಯೋಜನೆ, ಮೈಸೂರು (ಗ್ರಾಮಾಂತರ), ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇದ್ದ ಮಿನಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ 3 ಹಾಗೂ ಸಹಾಯಕಿಯರು 6 ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸಂಭವನಿಯ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮೈಸೂರು ಗ್ರಾಮಾಂತರ, ಮೈಸೂರು ಜಿಲ್ಲೆ ಇಲ್ಲಿ ಪ್ರಕಟಿಸಲಾಗಿದೆ.
ಸದರಿ ಆಯ್ಕೆಗೆ ಸಂಬಂಧಪಟ್ಟಂತೆ ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ಜೂನ್ 6 ರ ಸಂಜೆ 5 ಗಂಟೆಯೊಳಗೆ ಪೂರಕ ದಾಖಲಾತಿಗಳೊಂದಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವಿದ್ಯುತ್ ವ್ಯತ್ಯಯ
ಮೈಸೂರು, ಮೇ.28. (ಕರ್ನಾಟಕ ವಾರ್ತೆ):- ಚಾಮುಂಡೇಶ್ವÀರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಮೇ 30 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರಗೆ 66/11 ಕೆ.ವಿ. ಸೌತ್ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ನಂಜುಮಳಿಗೆ ವೃತ್ತ, ಲಕ್ಷ್ಮೀಪುರಂ, ವಿದ್ಯಾರಣ್ಯಪುರಂ, ನಾರಾಯಣ ಶಾಸ್ತ್ರಿ ರಸ್ತೆ, ಕಾಕರವಾಡಿ, ನಾಲ ಬೀದಿ, ಹೊಸಕೇರಿ, ಅಗ್ರಹಾರ, ತ್ಯಾಗರಾಜ ರಸ್ತೆ, ಇಂಡಸ್ಟ್ರೀಯಲ್ ಸಬರ್ಬ್, ವಿಶ್ವೇಶ್ವರಯ್ಯ ನಗರ, ಕೃಷ್ಣಮೂರ್ತಿಪುರಂ, ನಾಚನಹಳ್ಳಿ ಪಾಳ್ಯ, ಗುಂಡುರಾವ್ ನಗರ, ಕನಕಗಿರಿ, ಅಶೋಕಪುರಂ, ಸರಸ್ವತಿಪುರಂ, ರೈಲ್ವೆ ಕಾರ್ಯಾಗಾರ, ಮಹದೇವಪುರ, ರಮಾಬಾಯಿನಗರ, ಶ್ರೀರಾಂಪುರ, ಜಯನಗರ, ಕೆ.ಜಿ. ಕೊಪ್ಪಲ್, ಶಿವಪುರ, ಆದಿಚುಂಚನಗಿರಿ ರಸ್ತೆ, ಜೆ.ಪಿ.ನಗರ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಎನ್.ಆರ್.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವಿದ್ಯುತ್ ವ್ಯತ್ಯಯ
ಮೈಸೂರು, – ಚಾಮುಂಡೇಶ್ವÀರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಮೇ 31 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರಗೆ 66/11 ಕೆ.ವಿ. ನಂಜನಗೂಡು ಮತ್ತು ತಾಂಡ್ಯ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ನಂಜನಗೂಡು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ನಂಜನಗೂಡು ಪಟ್ಟಣ, ಕಲ್ಲಳ್ಳಿ ಕೈಗಾರಿಕಾ ಪ್ರದೇಶ, ನೆಸ್ಲೆ, ಎಟಿ&ಎಸ್, ಮ್ಯಾಕ್ಸ್ ಫಾರ್ಮಾ, ದೇವೀರಮ್ಮನಹಳ್ಳಿ, ದೇಬೂರು, ದೇವರಸನಹಳ್ಳಿ, ಮರಳೂರು, ಗ್ರಾಮಗಳು ಮತ್ತು ಗ್ರಾಮಪಂಚಾಯ್ತಿ ವ್ಯಾಪ್ತಿಯ ಪ್ರದೇಶ ಹಾಗೂ ತಾಂಡ್ಯ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಚಿಕ್ಕಯ್ಯನಛತ್ರ, ತಾಂಡ್ಯ ಕೈಗಾರಿಕಾ ಪ್ರದೇಶ, ಬಾಲಾಜಿ, ಇಂಡಸ್, ಗಣಪತಿ, ಕೆಐಎಡಿಬಿ 1&2, GB ಕೆಂಪಿಸಿದ್ದನಹುಂಡಿ, ಹುಳಿಮಾವು, ಹದಿನಾರು, ಹೊಸಕೋಟೆ, ತುಂಬುನೇರಳೆ, ಗ್ರಾಮಗಳು ಮತ್ತು ಗ್ರಾಮಪಂಚಾಯ್ತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಂಜನಗೂಡು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ ( photo by curtecy)


Share