ಮೈಸೂರು: ಸೇವಾ ಹಿ ಸಂಘಟನೆ: ಬಿಜೆಪಿ ವತಿಯಿಂದ ಕಾರ್ಯಕ್ರಮ.

Share

ಮೈಸೂರು, ಸೇವಾ ಹಿ ಸಂಘಟನೆ ‘ ಎಂಬ ಪರಿಕಲ್ಪನೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ. ನಡ್ಡಾರವರ ಕರೆಯ ಮೇರೆಗೆ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 02 ರವರೆಗೆ ಸೇವಾ ಸಪ್ತಾಹ , ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮತ್ತು ಮಹಾತ್ಮಾ ಗಾಂಧಿ ಜಯಂತಿಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಕರ್ನಾಟಕದಲ್ಲಿ ಆಯೋಜಿಸಲಾಗಿದೆ . ಭಾರತೀಯ ಜನತಾ ಪಾರ್ಟಿ ಮೈಸೂರು ನಗರ ಜಿಲ್ಲೆ, ಗ್ರಾಮಾಂತರ ಅಧ್ಯಕ್ಷರಾದ ಮಂಗಳ ಸೋಮಶೇಖರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . ಸೆಪ್ಟೆಂಬರ್ 17 ವಿಶ್ವದ ಲೋಕಪ್ರಿಯ ನಾಯಕ , ದೀನ , ದಲಿತರ ಬಡವರ ರೈತರ ಕಲ್ಯಾಣಕ್ಕಾಗಿ ಕಟಿಬದ್ಧರಾಗಿ ಕೆಲಸವನ್ನು ನಿರ್ವಹಿಸುತ್ತಿರುವ ದೇಶದ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಪಕ್ಷದ ಎಲ್ಲಾ ಕಾರ್ಯಕರ್ತರು ಪ್ರತಿ ವರ್ಷದಂತೆ ಸೇವಾ ಸಪ್ತಾಹದ ಮೂಲಕ ವಿವಿಧ ರೀತಿಯ ಸೇವಾ ಚಟುವಟಿಕೆಗಳ ಮೂಲಕ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಜನ್ಮದಿನವನ್ನು ಆಚರಿಸಿ ಅವರ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆಯನ್ನು ಮಾಡುತ್ತಾ ಬಂದಿದ್ದಾರೆ . ಈ ವರ್ಷ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ 70 ನೇ ಜನ್ಮದಿನವಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜಗತ್ ಪ್ರಕಾಶ್ ನಡ್ಡಾರವರ ನಿರ್ದೇಶನದಂತೆ ಸೆಪ್ಟಂಬರ್ 14 ರಿಂದ ಸೆಪ್ಟೆಂಬರ್ 20 , 2020 ರ ತನಕ ನಡೆಯುವ ಈ ಸೇವಾ ಸಪ್ತಾಹದ ಸಂದರ್ಭದಲ್ಲಿ ಕೆಳಗಿನ ಕಾರ್ಯಕ್ರಮಗಳನ್ನು ನಡೆಸಲು ಉದ್ದೇಶಿಸಲಾಗಿದೆ .
ಪ್ರತೀ ಮಂಡಲಗಳಲ್ಲಿ 70 ದಿವ್ಯಾಂಗ ವ್ಯಕ್ತಿಗಳಿಗೆ ಕೃತಕ ಅಂಗ ಜೋಡಣಾ ಉಪಕರಣಗಳನ್ನು ನೀಡುವುದು . 70 ಬಡ ಪುರುಷರು ಮತ್ತು ಮಹಿಳೆಯರಿಗೆ ಉಚಿತ ಕನ್ನಡಕಗಳನ್ನು ನೀಡುವುದು . * ಕೋವಿಡ್ 19 ರ ನಿಯಮಗಳನ್ನು ಪಾಲಿಸಿ ಪ್ರತೀ ಜಿಲ್ಲೆಯ 70 ಆಸ್ಪತ್ರೆ ಮತ್ತು ಬಡ ಕಾಲೋನಿಗಳಲ್ಲಿ ಹಣ್ಣು ಹಂಪಲುಗಳನ್ನು ವಿತರಿಸುವುದು , ಸ್ಥಳೀಯ ಅವಶ್ಯಕತೆಗನುಗುಣವಾಗಿ ಆಸ್ಪತ್ರೆಯ ಮೂಲಕ ಕೋಮಿಡ್ -19 ರಿಂದ ಪೀಡಿತರಾದ 70 ವ್ಯಕ್ತಿಗಳಿಗೆ ಪ್ಲಾಸ್ಮಾ ದಾನಮಾಡುವುದು .


Share