ಹರ್ ಘರ್ ತಿರಂಗ ಅಭಿಯಾನ
ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದ ಆವರಣದಲ್ಲಿ
ಹರ್ ಘರ್ ತಿರಂಗ ಅಭಿಯಾನ ನಡೆಸಿದರು
ಮೈಸೂರು: ಜೀವದಾರ ರಕ್ತ ನಿಧಿ ಕೇಂದ್ರ ವತಿಯಿಂದ ಸೋಮವಾರ ಗ್ರಾಹಕರಿಗೆ ಹಾಗೂ ಜೀವದ ರಕ್ತ ನಿಧಿ ಕೇಂದ್ರದ ಸಿಬ್ಬಂದಿ ವರ್ಗದವರಿಗೆ ಭಾರತದ ಧ್ವಜವನ್ನು ನೀಡಿ ಹರ್ ಘರ್ ತಿರಂಗ್ ಅಭಿಯಾನ ನಡೆಸಿದರು
77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ ಅಭಿಯಾನದಲ್ಲಿ ಮಾತನಾಡಿದ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ರಾಷ್ಟ್ರ ಧ್ವಜಕ್ಕೆ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕಾಗಿದೆ. ಧ್ವಜದ ಹಿರಿಮೆ ಅರಿಯುವುದರೊಂದಿಗೆ ರಾಷ್ಟ್ರಧ್ವಜದ ಬಗ್ಗೆ ಸರಿಯಾದ ತಿಳುವಳಿಕೆ ಹೊಂದಬೇಕಾಗಿದೆ ಎಂದರು.
ಧ್ವಜದ ಸಂಹಿತೆಯಂತೆ ಧ್ವಜಾರೋಹಣ ಮತ್ತು ಅವರೋಹಣ ಕ್ರಮವನ್ನು ಪಾಲಿಸಬೇಕು. ವಿದ್ಯಾರ್ಥಿಗಳು ಪ್ಲಾಸ್ಟಿಕ್ ಧ್ವಜಗಳನ್ನು ಬಳಸಬಾರದು ಎಂದು ಸಲಹೆ ನೀಡಿದರು.
ರಾಷ್ಟ್ರೀಯ ಭಾವೈಕ್ಯತೆ ಮತ್ತು ರಾಷ್ಟ್ರ ಪ್ರೇಮ ಮೂಡಿಸುವ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಹರ್ ಘರ್ ತಿರಂಗ್ ಅಭಿಯಾನ ಪ್ರಾರಂಭಿಸಿದೆ ಎಂದು ತಿಳಿಸಿದರು.
ಅಭಿಯಾನದ ಮೂಲಕ ರಾಷ್ಟ್ರ ಧ್ವಜವನ್ನು ಪ್ರತಿಯೊಬ್ಬರ ಮನೆಯ ಮೇಲೆ ಹಾರಿಸುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಹಾಗೂ ಮುತ್ತಣ್ಣ, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ರಶ್ಮಿ, ಮಮತಾ, ಡಾ. ರಾಧಾ, ಸುರೇಶ್ ಹಾಗೂ ಇನ್ನಿತರರು ಭಾಗಿಯಾಗಿದ್ದರು