ಮೈಸೂರು ಹಿರಿಯ ಪತ್ರಿಕಾ ಛಾಯಾಗ್ರಾಹಕರಾದ ಅಮರ್ ದಾಸ್ ಡಿ ಹೆಚ್. ನಿಧನ

Share

ಹಿರಿಯ ಪತ್ರಿಕಾ ಛಾಯಾಗ್ರಾಹಕರಾದ
ಅಮರ್ ದಾಸ್ ಡಿ ಹೆಚ್. (83) ಅವರು ಭಾನುವಾರ ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಮೈಸೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಅವರು ಬಾಂಬೆಯ ಸೆಂಟ್ ಕ್ಷೇವಿಯರ್ ಕಾಲೇಜಿನಲ್ಲಿ ಫೋಟೋಗ್ರಫಿ ಡಿಪ್ಲೊಮಾ ಮಾಡಿ 1956ರಲ್ಲಿ ಮೈಸೂರಿಗೆ ಹಿಂದಿರುಗಿದರು. ಹವ್ಯಾಸಿ ಛಾಯಾಗ್ರಾಹಕರಾಗಿ ಮೈಸೂರಿನ ಹಲವಾರು ಘಟನಾವಳಿಗಳ ಅಪರೂಪದ ಛಾಯಾಚಿತ್ರಗಳನ್ನು ಸಂಗ್ರಹಿಸಿದ್ದರು. ಮೈಸೂರು ಪತ್ರಿಕೆ ,ಸುಧರ್ಮ, ಡೆಕ್ಕನ್ ಹೆರಾಲ್ಡ್ ಮುಂತಾದ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಮೃತರು ಪತ್ನಿ ಆಶಾ ದಾಸ್, ಮಕ್ಕಳಾದ ಪ್ರೀತಿ, ಜ್ಯೋತಿ, ನಿತಿನ್ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೈಸೂರಿನ ವಿಜಯನಗರದಲ್ಲಿರುವ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.


Share