ಮೈಸೂರು Covid Kiosk ಸ್ಥಾಪಿಸಲು ಸೂಚನೆ ಕಚೇರಿಗಳಿಗೆ ಅನಗತ್ಯವಾಗಿ ಬರಬೇಡಿ.

368
Share

ಮೈಸೂರು . covid kiosk_202 … ಸುತ್ತೋಲೆ ಕೋವಿಡ್ – 19 ವೈರಾಣು ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ KIOSK ಸ್ಥಾಪಿಸುವ ಬಗ್ಗೆ . ಮೈಸೂರು ಜಿಲ್ಲೆಯಾದ್ಯಂತ ಕೊರೊನಾ ವೈರಾಣು ಸೋಂಕು ಹೆಚ್ಚುತ್ತಿರುವ ಕಾರಣ ಸರ್ಕಾರಿ ! ಅರೆಸರ್ಕಾರಿ 1 ನಿಗಮ ಮಂಡಳಿಗಳಲ್ಲಿ ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ಕಾರ್ಯದಲ್ಲಿ ಬೆನ್ನೆಲುಬಾಗಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಗೆ ಕಾರ್ಯನಿರ್ವಹಿಸುತ್ತಿದ್ದು , ಅವರ ಆರೋಗ್ಯ ಹಾಗೂ ಅವರ ಕುಟುಂಬದ ಆರೋಗ್ಯವನ್ನು ಕಾಪಾಡುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹೆಚ್ಚಾಗಿ ಅತಿ ಜರೂರಲ್ಲದ ಅನಗತ್ಯ ಕೆಲಸಗಳಿಗೆ ಕಛೇರಿಗಳಿಗೆ ಆಗಮಿಸುವುದನ್ನು ಕಡ್ಡಾಯವಾಗಿ ನಿಲ್ಲಿಸುವುದು . ತೀರ ಮತ್ತು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಕಛೇರಿಗಳಿಗೆ ಭೇಟಿ ನೀಡಲು ಸಾರ್ವಜನಿಕರಿಗೆ ಸೂಕ್ತ ತಿಳುವಳಿಕೆ ನೀಡುವುದು . ವೈರಾಣು ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ಎಲ್ಲಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಅವರ ಕಛೇರಿ ಹಾಗೂ ಅವರ ಅಧೀನದಲ್ಲಿ ಬರುವ ಕಛೇರಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದರೊಂದಿಗೆ ಸಂಬಂಧಪಟ್ಟ ಕಛೇರಿಗೆ ಸಂಬಂಧಿಸಿದಂತೆ ಸಾರ್ವಜನಿಕರು ನೀಡುವ ಮನವಿ ಸ್ವೀಕರಿಸಲು ಹಾಗೂ ಅವರ ಕುಂದುಕೊರತೆಗಳಿಗೆ ಮಾಹಿತಿ ನೀಡುವ ಸಲುವಾಗಿ KIOSK ನ್ನು ಸ್ಥಾಪಿಸಿ ಅಲ್ಲಿಯೇ ಸಾರ್ವಜನಿಕರ ಮನವಿಗಳನ್ನು ಸ್ವೀಕರಿಸಿ ಪ್ರತ್ಯೇಕವಾಗಿಡಲು ಹಾಗೂ ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ನೀಡಲು ಅಗತ್ಯ ವ್ಯವಸ್ಥೆ ಮಾಡಲು ತಿಳಿಸಿದೆ . ಸಾರ್ವಜನಿಕರೊಂದಿಗೆ ವ್ಯವಹರಿಸುವ ಸಂದರ್ಭದಲ್ಲಿ KIOSK ನಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ತಿಳಿಸಿದೆ .

ಈ ಸುತ್ತೋಲೆಯನ್ನು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅವರ ಅಧೀನಾಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದು ಈ ಬಗ್ಗೆ ವರದಿಯನ್ನು ಈ ಕಛೇರಿಗೆ ಇ – ಮೇಲ್ ಮೂಲಕ ಸಲ್ಲಿಸಲ ಸುತ್ತೋಲೆ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದೆ. .


Share