ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ , ಸಿ ಎಂ ಗೆ – ಅವರಿಗೆ ಪತ್ರ*

Share

 

*ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ*

*ಪತ್ರದಲ್ಲಿ ಅಂಕಿತಾ ಅಂತರಂಗದ ಅಭಿವ್ಯಕ್ತಿ*

ಬೆಂಗಳೂರು : ಎಸ್‌.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 100 ಅಂಕ ಗಳಿಸಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ತನ್ನನ್ನು ಬೆಂಗಳೂರಿಗೆ ಆಹ್ವಾನಿಸಿ, ಸನ್ಮಾನ ಮಾಡಿದ್ದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾಳೆ.ಜೊತೆಗೆ ಮುಖ್ಯಮಂತ್ರಿಯವರೇ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸ್ಥಾಪನೆಯ ರೂವಾರಿ ಎಂಬುದನ್ನು ತಿಳಿದು ಹರ್ಷ ವ್ಯಕ್ತಪಡಿಸಿದ್ದಾಳೆ. ಈ ಶಾಲೆಗಳಿಂದ ಅನೇಕ ಬಡ ಪ್ರತಿಭೆಗಳಿಗೆ ಶಿಕ್ಷಣ ದೊರಕಿ, ಬಾಳಿಗೆ ದಾರಿದೀಪವಾಗಿವೆ ಎಂದು ಬಣ್ಣಿಸಿದ್ದಾಳೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಅಂಕಿತಾಳನ್ನು ಬೆಂಗಳೂರಿಗೆ ಆಹ್ವಾನಿಸಿ, ಸನ್ಮಾನಿಸಿದ್ದಲ್ಲದೆ, ಮುಂದಿನ ಶಿಕ್ಷಣಕ್ಕೆ ಬೆಂಬಲ ನೀಡುವುದಾಗಿಯೂ ಘೋಷಿಸಿದ್ದನ್ನು ಸ್ಮರಿಸಬಹುದು. ಈ ಹಿನ್ನೆಲೆಯಲ್ಲಿ ಅಂಕಿತಾ ಮುಖ್ಯಮಂತ್ರಿಗಳಗೆ ತನ್ನ ಅಂತರಂಗವನ್ನು ವ್ಯಕ್ತಪಡಿಸಿ ಬರೆದಿರುವ ಪತ್ರ ????ಇಲ್ಲಿದೆ.


Share